Covid vaccine

ಕೊರೋನಾ ಲಸಿಕೆ ತಂತ್ರಜ್ಞಾನವನ್ನು ವರ್ಗಾಯಿಸಲು ಸಿದ್ಧವಿರುವ ವಿಶ್ವದ ಏಕೈಕ ದೇಶ ರಷ್ಯಾ: ಪುಟಿನ್
ಭಾರತದ ಕಂಪನಿಗಳು ರಷ್ಯಾದಸ್ಪುಟ್ನಿಕ್ ವಿ ಆಂಟಿ-ಕೋವಿಡ್ ಲಸಿಕೆ ತಯಾರಿಸಲು ತಯಾರಾಗುತ್ತಿರುವಾಗ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶನಿವಾರ, ತಂತ್ರಜ್ಞಾನವನ್ನು ವರ್ಗಾಯಿಸಲು ಮತ್ತು ಉತ್ಪಾದನೆಯನ್ನು ಹೆಚ್ಚಿಸಲು ಸಿದ್ಧವಾಗಿರುವ ವಿಶ್ವದ ಏಕೈಕ ದೇಶ ರಷ್ಯಾ ಎಂದು ಹೇಳಿದ್ದಾರೆ.

ಭಾರತದಲ್ಲಿ ಸ್ಪುಟ್ನಿಕ್ ವಿ ಲಸಿಕೆ ತಯಾರಿಸಲು ಸೀರಮ್ ಇನ್ಸ್ಟಿಟ್ಯೂಟ್ಗೆ ಡಿಸಿಜಿಐ ಷರತ್ತುಬದ್ಧ ಅನುಮತಿ!
ರಷ್ಯಾದ ಸ್ಪುಟ್ನಿಕ್ ವಿ ಕೋವಿಡ್ ಲಸಿಕೆ ತಯಾರಿಕೆಗೆ ಕೆಲವು ಷರತ್ತುಗಳೊಂದಿಗೆ ಭಾರತೀಯ ಔಷಧ ನಿಯಂತ್ರಣ ಮಹಾ ನಿರ್ದೇಶನಾಲಯ (ಡಿಸಿಜಿಐ) ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಗೆ ಅನುಮತಿ ನೀಡಿದೆ.

ಜೂನ್ ವೇಳೆಗೆ 12 ಕೋಟಿ ಡೋಸ್ ಗಳಷ್ಟು ಕೋವಿಡ್ ಲಸಿಕೆ ಲಭ್ಯ: ಆರೋಗ್ಯ ಸಚಿವಾಲಯ
ಕೊರೋನಾ ಲಸಿಕೆಯ ಅಭಾವವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುತ್ತಿದ್ದು, ಜೂನ್ ವೇಳೆಗೆ 12 ಕೋಟಿ ಲಸಿಕೆ ಡೋಸ್ ಗಳು ಲಭ್ಯವಾಗಲಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಲಸಿಕೆ ಮಾರಿ ಸಂಸದ ತೇಜಸ್ವಿ ಸೂರ್ಯ ಮತ್ತು ಅವರ ಚಿಕ್ಕಪ್ಪ ರವಿ ಸುಬ್ರಮಣ್ಯರಿಂದ ಹಣ ಸಂಪಾದನೆ: ಕಾಂಗ್ರೆಸ್ ಆರೋಪ
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಅವರ ಚಿಕ್ಕಪ್ಪ ರವಿ ಸುಬ್ರಮಣ್ಯ ಕೊರೋನಾ ಲಸಿಕೆಗಳನ್ನು ಮಾರಿ ಆ ಮೂಲಕ ಹಣ ಸಂಪಾದಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ವಿಶ್ವದಲ್ಲಿ ಮೊಟ್ಟ ಮೊದಲು ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದ ವ್ಯಕ್ತಿ ಸಾವು!
ಪ್ರಪಂಚದಲ್ಲಿಯೇ ಮೊಟ್ಟಮೊದಲು ಕೊರೋನಾ ನಿರೋಧಕ ಲಸಿಕೆ ಹಾಕಿಸಿಕೊಂಡಿದ್ದ ವ್ಯಕ್ತಿ ಎಂಬ ಇತಿಹಾಸ ಸೃಷ್ಟಿಸಿದ್ದ ಬ್ರಿಟನ್ ದೇಶದ ವಿಲಿಯಂ ಷೇಕ್ಸ್‌ಪಿಯರ್(81) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಕೊರೊನಾ ಎದುರಿಸಲು ಲಸಿಕೆ ಅತ್ಯಾವಶ್ಯಕ, ಸಂಶೋಧನೆಯಲ್ಲಿ ಸೇವೆ ಸಲ್ಲಿಸಿದ ವಿಜ್ಞಾನಿಗಳ ಕುರಿತು ನಮಗೆ ಹೆಮ್ಮೆ ಇದೆ: ಪ್ರಧಾನಿ ಮೋದಿ
ಕೊರೊನಾ ಸಾಂಕ್ರಾಮಿಕ ಎದುರಿಸಲು ಕೋವಿಡ್ ಲಸಿಕೆ ಅತ್ಯಾವಶ್ಯಕವಾದಿದ್ದು, ಲಸಿಕೆ ಸಂಶೋಧನೆಯಲ್ಲಿ ಸೇವೆ ಸಲ್ಲಿಸಿದ್ದ ವಿಜ್ಞಾನಿಗಳ ಬಗ್ಗೆ ನಮಗೆ ಅತೀವ ಹೆಮ್ಮೆ ಇದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ 18-44 ವರ್ಷದವರಿಗೆ ಸ್ಥಳದಲ್ಲೇ ನೋಂದಾಯಿಸಿಕೊಂಡು ಲಸಿಕೆ ನೀಡಲು ಕೇಂದ್ರ ಸಮ್ಮತಿ!
ಲಸಿಕೆ ವ್ಯರ್ಥವಾಗುವುದನ್ನು ತಪ್ಪಿಸಲು ಮತ್ತು ಅಂತರ್ಜಾಲದ ಮೂಲಕ ನೋಂದಾಯಿಸಿಕೊಳ್ಳಲು ಆಗದವರಿಗೂ ಲಸಿಕೆ ಸಿಗುವಂತೆ ಮಾಡುವ ಸಲುವಾಗಿ ಕೇಂದ್ರ ಸರ್ಕಾರ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಥಳದಲ್ಲೇ ನೊಂದಾಯಿಸಿಕೊಂಡು 18-44 ವರ್ಷದವರಿಗೆ ಲಸಿಕೆ ನೀಡಲು ನಿರ್ಧರಿಸಿದೆ.

ಎರಡು ಲಸಿಕೆ ಪಡೆದಿದ್ದರೂ ಕೊರೋನಾ ಸೋಂಕಿನಿಂದ ಸಂಶೋಧಕ ಡಾ. ಎನ್.ಎಸ್. ಮೂರ್ತಿ ಸಾವು
ಕೋವಿಶೀಲ್ಡ್ ನ ಎರಡು ಲಸಿಕೆ ತೆಗೆದುಕೊಂಡ ನಂತರವೂ ಎಂ.ಎಸ್ ರಾಮಯ್ಯ ಮೆಡಿಕಲ್ ಕಾಲೇಜಿನ ಸಂಶೋಧನಾ ನಿರ್ದೇಶಕ ಡಾ.ಎನ್ ಎಸ್ ಮೂರ್ತಿ ಕೋವಿಡ್ ನಿಂದ ನಿಧನರಾಗಿದ್ದಾರೆ.

'ಕೇಂದ್ರದ ಜೊತೆ ಮಾತ್ರ ವ್ಯವಹರಿಸುತ್ತೇವೆ': ಪಂಜಾಬ್ ಗೆ ನೇರವಾಗಿ ಲಸಿಕೆ ಮಾರಾಟ ನಿರಾಕರಿಸಿದ ಮೆಡೆರ್ನಾ
ಕೋವಿಡ್ ಲಸಿಕೆ ತಯಾರಕ ಮೆಡೆರ್ನಾ ತನ್ನ ಲಸಿಕೆಯನ್ನು ನೇರವಾಗಿ ಪಂಜಾಬ್ ಸರ್ಕಾರಕ್ಕೆ ಮಾರಾಟ ಮಾಡುವುದನ್ನು ನಿರಾಕರಿಸಿದೆ.

