Covid vaccine

ಅಮೆರಿಕದಿಂದ ಭಾರತಕ್ಕೆ ಕೇವಲ 7.5 ಮಿಲಿಯನ್ ಡೋಸ್ ಕೋವಿಡ್ ಲಸಿಕೆ, ಇನ್ನೂ ಬೇಕು: ರಾಜ ಕೃಷ್ಣಮೂರ್ತಿ
ಅಮೆರಿಕ ತನ್ನ ಜಾಗತಿಕ ಲಸಿಕೆ ಸಹಾಯಹಸ್ತ ಯೋಜನೆಯಡಿಯಲ್ಲಿ ಭಾರತಕ್ಕೆ ಇನ್ನೂ ಹೆಚ್ಚಿನ ಲಸಿಕೆಗಳನ್ನು ಪೂರೈಕೆ ಮಾಡಬೇಕೆಂದು ಅಲ್ಲಿನ ಕಾಂಗ್ರೆಸ್ ಸದಸ್ಯ ರಾಜ ಕೃಷ್ಣಮೂರ್ತಿ ಬೈಡನ್ ಆಡಳಿತವನ್ನು ಒತ್ತಾಯಿಸಿದ್ದಾರೆ.

ಕೋವಿಡ್ ಲಸಿಕೆ: 2.29 ಕೋಟಿ ಡೋಸ್ ಲಸಿಕೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಇದೆ: ಕೇಂದ್ರ ಸರ್ಕಾರ
ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ 2.29 ಕೋಟಿ ಡೋಸ್ ಲಸಿಕೆ ಬಳಕೆಯಾಗದೇ ಉಳಿದಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಜಾನ್ಸನ್ ಅಂಡ್ ಜಾನ್ಸನ್ ಸಿಂಗಲ್-ಡೋಸ್ ಕೋವಿಡ್-19 ಲಸಿಕೆಯ ತುರ್ತು ಬಳಕೆಗೆ ಭಾರತ ಸರ್ಕಾರಕ್ಕೆ ಅರ್ಜಿ ಸಲ್ಲಿಕೆ
ಅಮೆರಿಕ ಮೂಲದ ಖ್ಯಾತ ಔಷದ ತಯಾರಿಕಾ ಸಂಸ್ಥೆ ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆ ತನ್ನ ಸಿಂಗಲ್ ಡೋಸ್ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಭಾರತ ಸರ್ಕಾರಕ್ಕೆ ಅರ್ಜಿ ಸಲ್ಲಿಕೆ ಮಾಡಿದೆ.

ಕೋವಿಡ್ ಲಸಿಕೆ ವಿತರಣಾ ಪ್ರಮಾಣ ಏರಿಕೆ, ಒಲಂಪಿಕ್ಸ್ ನಲ್ಲಿ ಹಾಕಿ ತಂಡಕ್ಕೆ ಜಯ: ಭಾರತದ ಸಾಧನೆ ಕೊಂಡಾಡಿದ ಪ್ರಧಾನಿ ಮೋದಿ
ದೇಶದಲ್ಲಿ ಕಳೆದ ಕೆಲ ದಿನಗಳಿಂದ ಸಂಭವಿಸುತ್ತಿರುವ ವಿದ್ಯಮಾನಗಳಿಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಫುಲ್ ಖುಷಿಯಾಗಿದ್ದು, ಇದಕ್ಕೆ ಇಂಬು ನೀಡುವಂತೆ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ ಸೆಮಿಫೈನಲ್ ಗೇರಿರುವ ಭಾರತದ ಸಾಧನೆಯನ್ನು ಕೊಂಡಾಡಿದ್ದಾರೆ.

ಜಿಎಸ್ ಟಿ ಪರಿಹಾರ ಬಿಡುಗಡೆಗೆ ಹಣಕಾಸು ಸಚಿವೆ ಒಪ್ಪಿಗೆ, ಹೆಚ್ಚಿನ ಕೊರೋನಾ ಲಸಿಕೆ ಪೂರೈಕೆಗೆ ಕೇಂದ್ರ ಅಸ್ತು: ಸಿಎಂ ಬೊಮ್ಮಾಯಿ
ಸಚಿವ ಸಂಪುಟ ರಚನೆ ಬಗ್ಗೆ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರ ಜೊತೆಗೆ ಮಾತನಾಡುತ್ತೇನೆ, ಅವರು ಒಂದು ಸಭೆಯಲ್ಲಿದ್ದಾರೆ, ಅದಾದ ಬಳಿಕ ಹೋಗಿ ಅವರನ್ನು ಭೇಟಿ ಮಾಡಿ ಸಂಪುಟ ರಚನೆ ಬಗ್ಗೆ ಅನುಮತಿ ಕೇಳುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶಾಲೆಗಳು ಆರಂಭಕ್ಕೂ ಮುನ್ನ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ: ಸಚಿವ ಸುಧಾಕರ್
ಯಾವುದೋ ಒಂದು ದಿನ ಶಾಲೆಗಳನ್ನು ಆರಂಭಿಸಬೇಕಾಗುತ್ತದೆ. ಇದಕ್ಕೆ ಸಿದ್ಧತೆಯಾಗಿ ಶಾಲೆಗಳ ಎಲ್ಲ ಸಿಬ್ಬಂದಿಗೆ ಆದ್ಯತೆಯಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಗುರುವಾರ ಹೇಳಿದ್ದಾರೆ.

ರಾಜ್ಯಗಳು, ಕೇಂದ್ರಾಡಳಿತ ಪ್ರದೇಶ, ಖಾಸಗಿ ಆಸ್ಪತ್ರೆಗಳಲ್ಲಿ ಪ್ರಸ್ತುತ 3.20 ಕೋಟಿ ಡೋಸ್ ಕೋವಿಡ್ ಲಸಿಕೆ ಲಭ್ಯ: ಕೇಂದ್ರ
ಪ್ರಸ್ತುತ ರಾಜ್ಯಗಳು, ಕೇಂದ್ರ ಪ್ರದೇಶ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 3.20 ಕೋಟಿ ಕೋವಿಡ್ -19 ಲಸಿಕೆ ಡೋಸ್ ಗಳು ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಸರ್ವರಿಗೂ ಲಸಿಕೆ ಅಭಿಯಾನದಿಂದ 24 ದಿನದಲ್ಲಿ 30 ರಿಂದ 40 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ: ಆರೋಗ್ಯ ಸಚಿವ ಮಾಂಡವಿಯಾ
ಕೇಂದ್ರ ಸರ್ಕಾರದ ಕೋವಿಡ್ ಲಸಿಕೆ ಅಭಿಯಾನದಿಂದಾಗಿ 24 ದಿನಗಳ ಅವಧಿಯಲ್ಲಿ 30 ರಿಂದ 40 ಕೋಟಿ ಡೋಸ್ ಲಸಿಕೆ ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.

ಭಾರತದಲ್ಲಿ ಕೋವಿಡ್ ಎರಡನೇ ಅಲೆ ತೀವ್ರತೆಗೆ ಡೆಲ್ಟಾ ರೂಪಾಂತರ ಪ್ರಮುಖ ಕಾರಣ: ಐಸಿಎಂಆರ್ ಅಧ್ಯಯನ
ಕೊರೋನಾ ಎರಡನೇ ಅಲೆಗೆ ಕಾರಣವಾದ ರೂಪಾಂತರಗಳ ಬಗ್ಗೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್(ಐಸಿಎಂಆರ್) ಅಧ್ಯಯನ ನಡೆಸಿದ್ದು ಅದರಲ್ಲಿ ಡೆಲ್ಟಾ ರೂಪಾಂತರ ಸೋಂಕು ಹೆಚ್ಚಾಗಲು ಪ್ರಮುಖ ಕಾರಣ ಎಂದು ತಿಳಿದುಬಂದಿದೆ.

