COVID vaccines

ಕೋವಿಡ್ ಲಸಿಕೆಗಳು ಸಾಕಷ್ಟು ಪರಿಣಾಮಕಾರಿ; ಮೂರನೇ ಡೋಸ್ ಅಗತ್ಯವಿಲ್ಲ: ಲ್ಯಾನ್ಸೆಟ್ ವರದಿ
ಮಹಾಮಾರಿ ಕೊರೋನಾ ತೀವ್ರತೆಯನ್ನು ತಡೆಗಟ್ಟುವಲ್ಲಿ ಲಸಿಕೆಗಳು ಸಾಕಷ್ಟು ಪರಿಣಾಮಕಾರಿಯಾಗಿದ್ದು, ಪ್ರಸ್ತುತ ಜನರಿಗೆ ಮೂರನೇ ಡೋಸ್ ನೀಡುವ ಅಗತ್ಯವಿಲ್ಲ ಎಂದು ದಿ ಲ್ಯಾನ್ಸೆಟ್ ವರದಿಯಲ್ಲಿ ತಿಳಿಸಿದೆ.

ಎಲ್ಲಾ ರಾಜ್ಯಗಳಿಗೆ ಹೆಚ್ಚುವರಿಯಾಗಿ 2 ಕೋಟಿ ಡೋಸ್ ಕೋವಿಡ್-19 ಲಸಿಕೆ ಪೂರೈಕೆ: ಕೇಂದ್ರ ಸರ್ಕಾರ
ಈ ತಿಂಗಳಲ್ಲಿ ಎಲ್ಲಾ ರಾಜ್ಯಗಳಿಗೂ ಹೆಚ್ಚುವರಿಯಾಗಿ 2 ಕೋಟಿ ಡೋಸ್ ಕೋವಿಡ್ -19 ಲಸಿಕೆ ಪೂರೈಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಬುಧವಾರ ಹೇಳಿದ್ದಾರೆ.

3.86 ಕೋಟಿಗೂ ಹೆಚ್ಚು ಜನ ನಿಗದಿತ ಸಮಯದಲ್ಲಿ 2ನೇ ಡೋಸ್ ಕೋವಿಡ್ ಲಸಿಕೆ ಪಡೆದಿಲ್ಲ: ಕೇಂದ್ರ
3.86 ಕೋಟಿಗೂ ಹೆಚ್ಚು ಜನರು ನಿಗದಿತ ಸಮಯದಲ್ಲಿ ತಮ್ಮ ಎರಡನೇ ಡೋಸ್ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಲಸಿಕೆ ಪಡೆದಿಲ್ಲ ಎಂದು ಕೇಂದ್ರ ಸರ್ಕಾರ ಆರ್‌ಟಿಐ ಪ್ರಶ್ನೆಗೆ ಉತ್ತರ ನೀಡಿದೆ.

ವಿದೇಶಗಳಿಗೆ 6.4 ಕೋಟಿ ಡೋಸ್ ಕೊರೊನಾ ಲಸಿಕೆ ರವಾನೆ: ಕೇಂದ್ರ ಸರ್ಕಾರ
ಭಾರತ ಸರ್ಕಾರ ಈ ವರೆಗೂ ವಿದೇಶಗಳಿಗೆ 6.4 ಕೋಟಿ ಡೋಸ್ ಕೊರೊನಾ ಲಸಿಕೆ ರವಾನೆ ಮಾಡಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಖಾಸಗಿ ಆಸ್ಪತ್ರೆಗಳು ನೇರವಾಗಿ ಕೋವಿಡ್ ಲಸಿಕೆ ಖರೀದಿಸಲಾಗದು, ಕೋವಿನ್ ಆ್ಯಪ್ ನಲ್ಲಿ ಆರ್ಡರ್ ಬುಕ್ ಮಾಡಬೇಕು: ಕೇಂದ್ರ ಸರ್ಕಾರ
ಖಾಸಗಿ ಆಸ್ಪತ್ರೆಗಳು ನೇರವಾಗಿ ಕೋವಿಡ್ ಲಸಿಕೆ ಖರೀದಿಸುವಂತಿಲ್ಲ ಎಂದು ಹೇಳಿರುವ ಕೇಂದ್ರ ಸರ್ಕಾರ ಕೋವಿನ್ ಆ್ಯಪ್ ನಲ್ಲಿ ಆರ್ಡರ್ ಬುಕ್ ಮಾಡುವಂತೆ ಸೂಚನೆ ನೀಡಿದೆ.

ಕೋವಿಡ್-19: ದಾಖಲೆ ಬರೆದ ಆಂಧ್ರ ಪ್ರದೇಶ, ಒಂದೇ ದಿನದಲ್ಲಿ 13 ಲಕ್ಷ ಡೋಸ್ ಲಸಿಕೆ ವಿತರಣೆ, 1 ಕೋಟಿ ಜನರಿಗೆ ಮೊದಲ ಡೋಸ್
ಕೋವಿಡ್ ಲಸಿಕೆ ವಿತರಣೆಯಲ್ಲಿ ನೆರೆಯ ಆಂಧ್ರ ಪ್ರದೇಶದ ದಾಖಲೆ ಬರೆದಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ 13 ಲಕ್ಷ ಮಂದಿಗೆ ಲಸಿಕೆ ಹಾಕಲಾಗಿದೆ.

ಎಲ್ಲಾ ಕೋವಿಡ್-19 ಲಸಿಕೆಗಳ ಖರೀದಿಯ ಅ೦ಕಿ ಸ೦ಖ್ಯೆಗಳ ಸಂಪೂರ್ಣ ಮಾಹಿತಿ ನೀಡಿ: ಕೇಂದ್ರಕ್ಕೆ ಸುಪ್ರೀಂ
ಈ ವರೆಗೂ ಕೇಂದ್ರ ಸರ್ಕಾರ ಖರೀದಿಸಿರುವ ಕೋವಿಶೀಲ್ಡ್, ಕೋವ್ಯಾಕ್ಸಿನ್ ಹಾಗೂ ಸ್ಪುಟ್ನಿಕ್ V ಲಸಿಕೆಗಳ ಖರೀದಿಯ ಅಂಕಿ-ಸಂಖ್ಯೆಗಳ ಬಗ್ಗೆ ಪೂರ್ಣ ಮಾಹಿತಿ ಇರುವ ಪ್ರಮಾಣಪತ್ರ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಬಿಜೆಪಿ ಶಾಸಕ ಎಸ್. ರಘು ವಿರುದ್ಧ ಕೊರೋನಾ ಲಸಿಕೆ ದುರ್ಬಳಕೆ ಆರೋಪ: ತಪ್ಪಿತಸ್ಥರ ವಿರುದ್ಧ ಕ್ರಮ- ಸಚಿವ ಸುಧಾಕರ್
ಸಿ.ವಿ.ರಾಮನ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ರಘು ಅವರ ವಿರುದ್ಧ ಕೊರೋನಾ ಲಸಿಕೆ ದುರ್ಬಳಕೆ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಚಿವ ಸುಧಾಕರ್ ಅವರು ಮಂಗಳವಾರ ಹೇಳಿದ್ದಾರೆ.

ಜನರ ಲಸಿಕೆ ಕಾರ್ಯಕರ್ತರಿಗೆ: ಬಿಜೆಪಿ ಶಾಸಕ ಎಸ್. ರಘು ವಿರುದ್ಧ ಕೊರೋನಾ ಲಸಿಕೆ ದುರ್ಬಳಕೆ ಆರೋಪ!
ರಾಜ್ಯದಲ್ಲಿ ಆಡಳಿತರೂಢ ಬಿಜೆಪಿ ಶಾಸಕರು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ಬೆಡ್ ಬ್ಲಾಕಿಂಗ್, ವ್ಯಾಕ್ಸಿನ್ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿಕೊಂಡಿದ್ದಾರೆಂಬ ಆರೋಪಗಳು ಕೇಳಿ ಬಂದ ಬೆನ್ನಲ್ಲೇ ಸಿ.ವಿ.ರಾಮನ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ರಘು ಅವರ ವಿರುದ್ಧವೂ ಲಸಿಕೆ ದುರ್ಬಳಕೆ ಆರೋಪ ಕೇಳಿಬಂದಿದೆ.

