Covid19

ಕೊರೋನಾ ಹೋರಾಟಕ್ಕೆ ಒಂದು ಕೋಟಿ ರು, ನೆರವು ನೀಡಿದ ನಳಿನ್ ಕುಮಾರ್ ಕಟೀಲ್
ಕೊರೋನಾ ಸೋಂಕಿನ ವಿರುದ್ಧ ಹೋರಾಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೈಗೊಳ್ಳುವ ಅಗತ್ಯ ಸುರಕ್ಷತಾ ಕ್ರಮಗಳಿಗೆ ವಿನಿಯೋಗ ಮಾಡುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಸಂಸದರ ಪ್ರದೇಶಾಭಿವೃಉದ್ಧಿ ಯೋಜನೆ ಅನುದಾನದಲ್ಲಿ ರೂ. ೧ ಕೋಟಿತಯನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ನೀಡಲಿದ್ದಾರೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.

ಸಂಪೂರ್ಣ ಲಾಕ್ ಡೌನ್ ಬಗ್ಗೆ ಸಂಜೆ ನಿರ್ಧಾರ: ಬಡವರಿಗೆ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತ ಊಟ: ಸಿಎಂ ಯಡಿಯೂರಪ್ಪ
ಕೋವಿಡ್-19 ಸೋಂಕು ತಡೆಗಟ್ಟಲು ಸಂಪೂರ್ಣ ರಾಜ್ಯ ಲಾಕ್ ಡೌನ್ ಮಾಡುವ ಬಗ್ಗೆ ಇಂದು ಸಂಜೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

