Covid19

ಸಂದೇಶ ಕಳುಹಿಸುವ ಮುನ್ನ ಗಮನಿಸಿ: ವೈದ್ಯಕೀಯ ಸೌಲಭ್ಯ, ರೆಮೆಡಿಸಿವಿರ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ ಸುಳ್ಳು ಮಾಹಿತಿ!
ಕೊರೋನಾ ಸೋಂಕಿತ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಲಭ್ಯತೆ ಮತ್ತು ರೆಮೆಡಿಸಿವಿರ್ ಔಷಧಿಗೆ ಕೊರತೆ ಉಂಟಾಗಿದೆ. ಈ ಮಧ್ಯೆ ಸೋಷಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ಗೊಂದಲದ, ಆತಂಕ ಹುಟ್ಟಿಸುವ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು ನಾಗರಿಕರ ಭಯ, ಆತಂಕಕ್ಕೆ ಮತ್ತಷ್ಟು ತುಪ್ಪ ಸುರಿದಂತಾಗಿದೆ.

ಮಾಸ್ಕ್ ಧರಿಸದೆ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ: ಕೋವಿಡ್ ನಿಯಮ ಉಲ್ಲಂಘನೆ ಆರೋಪ
ಕೋವಿಡ್ 2ನೇ ಅಲೆ ತಾಂಡವವಾಡುತ್ತಿರುವ ಈ ಸಮಯದಲ್ಲಿ ಹೊರಗೆ ಓಡಾಡುವಾಗ, ಜನ ಸೇರುವ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮುಖಗವಸನ್ನು ಧರಿಸಬೇಕೆಂದು ಸರ್ಕಾರ ಕಡ್ಡಾಯ ಮಾಡಿದೆ. ಮಾಸ್ಕ್ ಧರಿಸದವರಿಗೆ ಪೊಲೀಸರು ದಂಡ ಹಾಕುತ್ತಾರೆ.

ಕೊರೋನಾದಿಂದಲ್ಲ.. ನಿಮ್ಮ ನಿರ್ಲಕ್ಷ್ಯತೆಯಿಂದಲೇ ಹೆಚ್ಚಿನ ಸಾವು: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಕಿಡಿ
ದೇಶದಲ್ಲಿ ಕೊರೋನಾ ವೈರಸ್ ನಿಂದಲ್ಲ... ಮೋದಿ ಸರ್ಕಾರದ ನಿರ್ಲಕ್ಷ್ಯದಿಂದಲೇ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಬೆಂಗಳೂರಿಗೆ ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗಿದೆ, ಆಸ್ಪತ್ರೆಗಳಲ್ಲಿ ಹಾಸಿಗೆ ಸಾಮರ್ಥ್ಯ ಹೆಚ್ಚಿಸಬೇಕಾಗಿದೆ: ಸಚಿವ ಡಾ. ಕೆ.ಸುಧಾಕರ್
ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿನ ನಾಗಾಲೋಟ ಮುಂದುವರಿದಿರುವುದರಿಂದ ರೋಗಿಗಳ ಚಿಕಿತ್ಸೆಗೆ ಹಾಸಿಗೆಗಳ ಸಾಮರ್ಥ್ಯವನ್ನು ಹೆಚ್ಚಿಸುವ ತುರ್ತು ಪರಿಸ್ಥಿತಿ ಬಂದಿದೆ. ಹೀಗಾಗಿ ಕರ್ನಾಟಕದಲ್ಲಿ ಬೆಂಗಳೂರಿಗೆ ಆರೋಗ್ಯ ತುರ್ತು ಪರಿಸ್ಥಿತಿ ಎಂದೇ ವ್ಯಾಖ್ಯಾನಿಸುವ ಅಗತ್ಯವಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.

ಭಿಕ್ಷೆ ಬೇಡುತ್ತೀರೊ, ಕದಿಯುತ್ತೀರೊ, ಸಾಲ ತರ್ತಿರೊ: ಆಕ್ಸಿಜನ್ ಒದಗಿಸಲು ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ತಾಕೀತು!
ಆಮ್ಲಜನಕವನ್ನು ಕೈಗಾರಿಕೆಗಳಿಗೆ ಬಳಸಲು ಅವಕಾಶ ನೀಡಿರುವುದಕ್ಕೆ ಆಕ್ರೋಶಗೊಂಡಿರುವ ದೆಹಲಿ ಹೈಕೋರ್ಟ್ ವಾಸ್ತವ ಅರ್ಥ ಮಾಡಿಕೊಳ್ಳಲು ನಿಮಗೇನು ದಾಡಿ ಎಂದು ಕೇಂದ್ರ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ನಡೆಯಲಿವೆ: ಶಿಕ್ಷಣ ಸಚಿವ ಸುರೇಶ್ ಕುಮಾರ್
ಸದ್ಯದ ಪರಿಸ್ಥಿತಿಯನ್ನು ನೋಡಿ ಹೇಳುವುದಾದರೆ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಕೊರೋನಾ ಸೋಂಕಿಗೆ ತುತ್ತಾಗಿದ್ದ ಉತ್ತರಾಖಂಡ ಸಿಎಂ ಆಸ್ಪತ್ರೆಗೆ ದಾಖಲು
ಇತ್ತೀಚೆಗಷ್ಟೇ ಕೊರೋನಾ ಸೋಂಕಿಗೆ ತುತ್ತಾಗಿದ್ದ ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರ: ಇಂದು 2,854 ಕೋವಿಡ್ ಸೋಂಕು ಪ್ರಕರಣಗಳು ಪತ್ತೆ, ಬ್ರಿಟನ್ ನಿಂದ ಬಂದಿದ್ದ 16 ಮಂದಿಯಲ್ಲೂ ಸೋಂಕು!
ಮಾರಕ ಕೊರೋನಾ ವೈರಸ್ ಹಾಟ್ ಸ್ಪಾಟ್ ಆಗಿದ್ದ ಮಹಾರಾಷ್ಟ್ರದಲ್ಲಿ ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬಂದಿದ್ದರೂ, ಬ್ರಿಟನ್ ವೈರಸ್ ಭೀತಿ ಬೆನ್ನಲ್ಲೇ ಇಂದು ಮತ್ತೆ 2,854 ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿವೆ.

ಪ್ಲಾನ್ ಇಲ್ಲದ 21 ದಿನಗಳ ಲಾಕ್ ಡೌನ್ ನಿಂದ ದೇಶದ ಜನರ ಜೀವನ ನಾಶವಾಯಿತು: ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ಅವರ ಯೋಜಿತವಲ್ಲದ ಲಾಕ್‌ಡೌನ್ ಫಲಿಸಲಿಲ್ಲ. ಬದಲಿಗೆ ಅದು ಲಕ್ಷಾಂತರ ಜನರ ಜೀವನವನ್ನು ನಾಶಪಡಿಸಿತು’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಆರೋಪಿಸಿದ್ದಾರೆ.

