Covid

ಮನೆ ಮನೆ ಆರೋಗ್ಯ ಸಮೀಕ್ಷೆಗೆ ಸಚಿವ ಅಶೋಕ್ ಚಾಲನೆ: ಆರೋಗ್ಯ ಪರಿಶೀಲನೆಗೆ ಇನ್ಮುಂದೆ ಮನೆ ಬಾಗಿಲಿಗೇ ಬರುತ್ತಾರೆ ವೈದ್ಯರು!
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕನ್ನು ಸಂಪೂರ್ಣವಾಗಿ ನಿಯಂತ್ರಿಸುವ ಗುರಿಯೊಂದಿಗೆ ದೇಶದಲ್ಲೇ ಮೊದಲ ಬಾರಿಗೆ 'ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ' ಎಂಬ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ.

ಬೆಂಗಳೂರು: ಶೇ.94 ರಷ್ಟು ಅರ್ಹ ಮಂದಿಗೆ ಕೊರೋನಾ ಲಸಿಕೆಯ ಮೊದಲ ಡೋಸ್ ಪೂರ್ಣ
ರಾಜ್ಯದಲ್ಲಿ ಕೊರೋನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದು ಕಡೆ ಇಳಿಮುಖವಾಗುತ್ತಿದ್ದರೆ ಇನ್ನೊಂದು ದಿಕ್ಕಿನಲ್ಲಿ ಲಸಿಕೆ ವಿತರಣೆ ವೇಗ ಹೆಚ್ಚುತ್ತಿದೆ. ಬೆಂಗಳೂರಿನ ಒಟ್ಟು ಜನಸಂಖ್ಯೆಯಲ್ಲಿ ಅರ್ಹ ಫಲಾನುಭವಿಗಳ ಪೈಕಿ ಶೇ.94ರಷ್ಟು ಜನರಿಗೆ ಕೊವಿಡ್-19 ಲಸಿಕೆಯ ಮೊದಲ ಡೋಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.

ಹೆಚ್ಚುತ್ತಿರುವ ಕೋವಿಡ್ ಸೋಂಕು: ಅಪಾರ್ಟ್'ಮೆಂಟ್'ಗಳ ಮೇಲೆ ಬಿಬಿಎಂಪಿ ತೀವ್ರ ನಿಗಾ
ನಗರದಲ್ಲಿ ಕ್ಲಸ್ಟರ್ ಹಾಗೂ ಕಂಟೈನ್ಮೆಂಟ್ ವಲಯಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಪಾರ್ಟ್ ಮೆಂಟ್ ಹಾಗೂ ಹಾಸ್ಟೆಲ್ ಗಳ ಮೇಲೆ ಬಿಬಿಎಂಪಿ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ತೀವ್ರ ನಿಗಾ ಇರಿಸಿದೆ ಎಂದು ತಿಳಿದುಬಂದಿದೆ.

ಬಿಬಿಎಂಪಿ ಸಹಾಯ ನಿಯಂತ್ರಣ ಕೊಠಡಿ ನಿರ್ವಹಿಸುತ್ತಿರುವ ಕಂಪನಿಯಿಂದ 11 ಮಂದಿ ನೌಕರರ ವಜಾ!
ಸಹ ಕೆಲಸಗಾರರಲ್ಲಿ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತರಾಗಿ ಐಸೋಲೇಷನ್ ಗೊಳಗಾಗಿದ್ದ 11 ಮಂದಿ ನೌಕರರನ್ನು ಬಿಬಿಎಂಪಿ ಸಹಾಯ ನಿಯಂತ್ರಣ ಕೊಠಡಿ ನಿರ್ವಹಿಸುತ್ತಿರುವ ಕಂಪನಿ ಕೆಲಸದಿಂದ ವಜಾಗೊಳಿಸಿದೆ ಎಂದು ತಿಳಿದುಬಂದಿದೆ.

ಈ ಬಾರಿಯೂ ಸ್ವಾತಂತ್ರ್ಯ ದಿನಾಚರಣೆ ಮೇಲೆ ಕೊರೋನಾ ಕರಿಛಾಯೆ: ಸರಳ ಆಚರಣೆಗೆ ನಿರ್ಧಾರ, ಕೋವಿಡ್ ವಾರಿಯರ್ಸ್ಗೆ ಸನ್ಮಾನ
ಕಳೆದ ವರ್ಷದಂತೆ ಈ ಬಾರಿಯೂ ಮಹಾಮಾರಿ ಕೊರೋನಾ ವೈರಸ್ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಮೇಲೆ ಕರಿನೆರಳು ಬೀಳುವಂತೆ ಮಾಡಿದ್ದು, ಈ ಹಿನ್ನೆಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಣೆ ಮಾಡಲು ಸರ್ಕಾರ ನಿರ್ಧರಿಸಿದೆ.

ಕೊರೋನಾ 3ನೇ ಅಲೆ ಆತಂಕ ಶುರು: ನಗರದಲ್ಲಿ 11 ದಿನಗಳಲ್ಲಿ 543 ಮಕ್ಕಳಲ್ಲಿ ಸೋಂಕು ಪತ್ತೆ!
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ 3ನೇ ಅಲೆ ಆತಂಕ ಹೆಚ್ಚಾಗಿದ್ದು, ಇದರ ನಡುವೆ ಕೇವಲ 11 ದಿನಗಳಲ್ಲಿ 543 ಮಕ್ಕಳಿಗೆ ಕೋವಿಡ್ ದೃಢಪಟ್ಟಿರುವುದು ಮತ್ತಷ್ಟು ಭೀತಿ ಹುಟ್ಟುಹಾಕಿದೆ.

ಮುಂಬೈನಲ್ಲಿ ಕೋವಿಡ್ ಡೆಲ್ಟಾ ಪ್ಲಸ್ ಸೋಂಕಿಗೆ ಮೊದಲ ಬಲಿ; 2 ಡೋಸ್ ಕೋವಿಡ್ ಲಸಿಕೆ ಪಡೆದಿದ್ದ ಮಹಿಳೆ ಸಾವು
ಸಂಭಾವ್ಯ ಕೊರೋನಾ 3ನೇ ಅಲೆ ಹಾಗೂ ಕೋವಿಡ್ ಸೋಂಕು ದಿನ ನಿತ್ಯ ಹಾವು ಏಣಿ ಆಟ ಆಡುತ್ತಿರುವ ನಡುವಲ್ಲೇ ಮುಂಬೈನಲ್ಲಿ ಡೆಲ್ಟಾ ಪ್ಲಸ್ ಕೋವಿಡ್ ರೂಪಾಂತರಿ ವೈರಸ್'ಗೆ ಮೊಟ್ಟ ಮೊದಲ ಬಲಿಯಾಗಿದೆ.

ದಕ್ಷಿಣ ಕನ್ನಡದಲ್ಲಿ ಪ್ರಕರಣಗಳ ಹೆಚ್ಚಳ: ಕೋವಿಡ್-19 ಸೋಂಕಿತರನ್ನು ಆರೈಕೆ ಕೇಂದ್ರಕ್ಕೆ ಕಳಿಸಲು ಸಿಎಂ ಸೂಚನೆ
ಕರಾವಳಿ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಳಗೊಂಡಿರುವ ಹಿನ್ನೆಲೆಯಲ್ಲಿ ಸೋಂಕಿತರನ್ನು ಆರೈಕೆ ಕೇಂದ್ರಕ್ಕೆ ಕಡ್ಡಾಯವಾಗಿ ಕಳಿಸುವಂತೆ ಜಿಲ್ಲಾಡಳಿತಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ರಾಜ್ಯದ 5 ಜಿಲ್ಲೆಗಳಲ್ಲಿ ಕೊರೋನಾ ಆಬ್ಬರ ಹೆಚ್ಚಳ: ಆತಂಕ ವ್ಯಕ್ತಪಡಿಸಿದ ಕೇಂದ್ರ ಸರ್ಕಾರ
ರಾಜ್ಯದ 5 ಜಿಲ್ಲೆಗಳಲ್ಲಿ ಕೊರೋನಾ ಅಬ್ಬರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಈ ಬೆಳವಣಿಗೆಗೆ ಕೇಂದ್ರ ಸರ್ಕಾರ ಆತಂಕ ವ್ಯಕ್ತಪಡಿಸಿದೆ.

