ರಾಜ್ಯಗೋಹತ್ಯಾ ನಿಷೇಧವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುತ್ತಿರುವುದು ಹೇಡಿತನದ ಲಕ್ಷಣ: ಸಿದ್ದರಾಮಯ್ಯ
ವಿಧಾನಮಂಡಲದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಚರ್ಚೆಯನ್ನೇ ಮಾಡದೆ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವುದು ಸರ್ಕಾರದ ಹೇಡಿತನವನ್ನು ತೋರಿಸುತ್ತದೆ. ಚರ್ಚೆ ಮಾಡಿದರೆ ಈ ಮಸೂದೆಯ ಹಿಂದಿನ ದುರುದ್ದೇಶಗಳು ಅನಾವರಣಗೊಂಡು ತಮ್ಮ ಬಣ್ಣ ಬಯಲಾಗುತ್ತದೆ ಎಂಬ ಭಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.