Crime News

ರಾಮನಗರ: SP ಕಚೇರಿಯ ಕಟ್ಟಡದಿಂದ ಜಿಗಿದು Pocso ಪ್ರಕರಣ ಆರೋಪಿ ದೈಹಿಕ ಶಿಕ್ಷಕ ಆತ್ಮಹತ್ಯೆ!
ಎಸ್ಪಿ ಕಚೇರಿಯ ಕಟ್ಟಡದಿಂದ ಹಾರಿ Pocso ಪ್ರಕರಣದ ಆರೋಪಿ ದೈಹಿಕ ಶಿಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ. ಮೃತನನ್ನು ಚನ್ನಪಟ್ಟಣದ ಅಕ್ಕೂರು ಹೊಸಹಳ್ಳಿ ಗ್ರಾಮದ ನಿವಾಸಿ ದೈಹಿಕ ಶಿಕ್ಷಕ ಶಶಿಧರ್ ಎಂದು ಗುರುತಿಸಲಾಗಿದೆ.

ವಿಜಯಪುರ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಮಹಿಳೆ ಹಿಂದೆ ಬಿದ್ದು ಸಿಕ್ಕಿಬಿದ್ದ ರೋಚಕ ಕಹಾನಿ!
ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಜೈಲಿನಿಂದ ತಪ್ಪಿಸಿಕೊಂಡು ಕಳೆದ 12 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನಿಸುತ್ತಾ ಬಂದಿದ್ದನು. ಆದರೆ ಈಗ ಮಹಿಳೆಯ ಹಿಂದೆ ಬಿದ್ದು ಪೊಲೀಸರಿಗೆ ಸಿಕ್ಕಿ ಬಿದ್ದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ಬೆಳಗಾವಿ: ಆಸ್ತಿ ವಿವಾದ ಸಂಬಂಧ ಗ್ರಾಮ ಪಂಚಾಯ್ತಿಗೆ ಬಂದಿದ್ದ ಮಾಜಿ ಯೋಧ, ಪುತ್ರಿಯ ಬರ್ಬರ ಹತ್ಯೆ
ಗ್ರಾಮ ಪಂಚಾಯತಿ ಕಚೇರಿಗೆ ಆಸ್ತಿ ಪಾಲು ಮಾಡಲು ಅರ್ಜಿ ಸಲ್ಲಿಸಲು ಬಂದಿದ್ದ ತಂದೆ ಮತ್ತು ಮಗಳನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿಯ ಕಿತ್ತೂರಿನ ಅವರಾದಿ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಅನೈತಿಕ ಸಂಬಂಧಕ್ಕೆ ಗಂಡನ ಕೊಲೆ; ಮುಖ, ಮರ್ಮಾಂಗಕ್ಕೆ ಗಾಯ; ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿಬೀಳಿಸುವ ಸಂಗತಿ!
ಬಿದರಹಳ್ಳಿಯ ಕಿತ್ತಗನೂರು ಮುಖ್ಯ ರಸ್ತೆಯಲ್ಲಿರುವ ಮನೆಯೊಂದರಲ್ಲಿ 40 ವರ್ಷದ ವ್ಯಕ್ತಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಪತ್ತೆಯಾಗಿದ್ದಾರೆ. ಮೃನತ ಮುಖ ಮತ್ತು ವೃಷಣಗಳ ಮೇಲೆ ಗಾಯಗಳಾಗಿದೆ.

ಕ್ಯಾಲಿಫೋರ್ನಿಯಾ: ರೆಸ್ಟೋರೆಂಟ್ ಹೊರಗೆ ಭಾರತೀಯ ಮೂಲದ ಮಹಿಳೆಗೆ ಗುಂಡಿಕ್ಕಿ ಹತ್ಯೆ; ಆರೋಪಿ ಆತ್ಮಹತ್ಯೆ!
ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೋದಲ್ಲಿ ಪನೇರಾದ ಹೊರಗೆ ಭಾರತೀಯ ಮೂಲದ 38 ವರ್ಷದ ಮಹಿಳೆ ಶಾಲಿನಿ ಠಾಕೂರ್ ಎಂಬಾಕೆಯನ್ನು ಯುವಕನೋರ್ವ ರೋಹಿತ್ ಕೊಲೆ ಮಾಡಿ ನಂತರ ಪೊಲೀಸರೊಂದಿಗಿನ ಗುಂಡಿನ ಚಕಮಕಿಯಲ್ಲಿ ತನ್ನನ್ನು ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

KGF ಕಾಲೇಜಿನಲ್ಲಿ ಕುರ್ಚಿ ವಿಚಾರಕ್ಕೆ ವಾಗ್ವಾದ: ತರಗತಿಯಲ್ಲಿ ಯುವಕನ ಥಳಿತಕ್ಕೆ ಪ್ರಜ್ಞೆತಪ್ಪಿ ಬಿದ್ದ ವಿದ್ಯಾರ್ಥಿನಿ, Video
ಕರ್ನಾಟಕದ ಕೆಜಿಎಫ್ ನಗರದ ಮಹಾವೀರ್ ಜೈನ್ ಕಾಲೇಜಿನಲ್ಲಿ ಕುರ್ಚಿ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ನಡೆದ ವಾಗ್ವಾದ ನಂತರ ಹಿಂಸಾಚಾರಕ್ಕೆ ತಿರುಗಿದ್ದು ವಿದ್ಯಾರ್ಥಿನಿಯ ಮೇಲೆ ದೈಹಿಕ ಹಲ್ಲೆ ನಡೆಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಹಾಸನ: ಗೃಹಪ್ರವೇಶಕ್ಕೆ ಹೋಗುತ್ತಿದ ಯುವಕನ ತಲೆಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ!
ಗೃಹಪ್ರವೇಶದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಯುವಕನನ್ನು ದುಷ್ಕರ್ಮಿಯೊಬ್ಬ ಹಾಡಹಗಲೇ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ನಗರದ ಚನ್ನಪಟ್ಟಣ ವೃತ್ತದ ಸಮೀಪದ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ಗಂಡನನ್ನು ಬಿಟ್ಟು ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆ ಸಾವು; ಮೊಬೈಲ್ ನೊಂದಿಗೆ ಪ್ರಿಯಕರ ಶಬ್ಬೀರ್ ಪರಾರಿ!
ಚಿಕ್ಕಬಳ್ಳಾಪುರದ ಚೊಕ್ಕಹಳ್ಳಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಚೈತ್ರಾ ಎಂದು ಗುರುತಿಸಲಾಗಿದೆ.

ಉತ್ತರಪ್ರದೇಶ: ಬಿಜೆಪಿಯ ಹಿರಿಯ ನಾಯಕರೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಯ ಬರ್ಬರ ಹತ್ಯೆ!
ಬಿಜೆಪಿಯ ಹಿರಿಯ ನಾಯಕರೊಂದಿಗೆ ಸಂಪರ್ಕ ಹೊಂದಿದ್ದ ಧೀರೇಂದ್ರ ಪ್ರತಾಪ್ ಸಿಂಗ್ ಶನಿವಾರದಿಂದ ಲಕ್ನೋದ ಸುಶಾಂತ್ ಗಾಲ್ಫ್ ಸಿಟಿಯಿಂದ ಕಾಣೆಯಾಗಿದ್ದು ಇದೀಗ ಅವರ ಮೃತದೇಹ ಪತ್ತೆಯಾಗಿದೆ.

