critical

ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ: ಗಾಯಾಳುಗಳಿಗೆ ಶೇ.35-40ರಷ್ಟು ಸುಟ್ಟ ಗಾಯ, ಸ್ಥಿತಿ ಗಂಭೀರ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಆವರಣದ ಕಟ್ಟದಲ್ಲಿರುವ ಗುಣನಿಯಂತ್ರಣ ಪ್ರಯೋಗಾಲಯದಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡ ಘಟನೆಯಲ್ಲಿ ಗಾಯಗೊಂಡವರು ಶೇ.35-40ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ನಟ ನಂದಮೂರಿ ತಾರಕರತ್ನ ಸ್ಥಿತಿ ಇನ್ನೂ ಗಂಭೀರ: ನಗರದ ನಾರಾಯಣ ಹೃದಯಾಲಯದಲ್ಲಿ ಮುಂದುವರೆದ ಚಿಕಿತ್ಸೆ
ಟಾಲಿವುಡ್ ಖ್ಯಾತ ನಟ ಹಾಗೂ ರಾಜಕಾರಣಿ ನಂದಮೂರಿ ತಾರಕರತ್ನಆರೋಗ್ಯ ಸ್ಥಿತಿಯಲ್ಲಿ ಯಾವುದೇ ಬದಲಾವಣೆಗಳು ಕಂಡುಬಂದಿಲ್ಲ, ಅವರ ಸ್ಥಿತಿ ಇನ್ನೂ ಗಂಭೀರವಾಗಿದ್ದು, ನಗರದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಶೂಟಿಂಗ್ ವೇಳೆ ತಮಿಳು ನಟ ವಿಜಯ್ ಆಂಟನಿಗೆ ಗಾಯ: ಪರಿಸ್ಥಿತಿ ಗಂಭೀರ, ಮಲೇಷ್ಯಾ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ
ಮಲೇಷ್ಯಾದಲ್ಲಿ ನಡೆಯುತ್ತಿದ್ದ ಸಿನಿಮಾ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು, ತಮಿಳು ನಟ ವಿಜಯ್ ಆಂಟನಿ ಅವರಿಗೆ ಗಂಭೀರ ಗಾಯವಾಗಿದೆ. ಅವರನ್ನು ಮಲೇಷ್ಯಾದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ: ಕಳವಳ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ, ಪ್ರಧಾನಿ ಮೋದಿ
ಖ್ಯಾತ ಪ್ರವಚನಕಾರರು, ನಡೆದಾಡುವ ದೇವರಂದೆ ಇಡೀ ವಿಶ್ವದಾದ್ಯಂತ ಪ್ರಖ್ಯಾತಿಗೆ ಕಾರಣರಾದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಭಾನುವಾರ ತಿಳಿದುಬಂದಿದೆ.

ಯೂಟ್ಯೂಬ್ ನೋಡಿ ಪತ್ನಿಗೆ ಹೆರಿಗೆ ಮಾಡಲು ಮುಂದಾದ ಪತಿ: ಮಗು ಸಾವು, ಮಹಿಳೆ ಸ್ಥಿತಿ ಗಂಭೀರ!
ಪತಿಯೊಬ್ಬ ತನ್ನ ಹೆಂಡತಿಯ ಹೆರಿಗೆಯನ್ನು ಯೂಟ್ಯೂಬ್ನಲ್ಲಿ ವಿಡಿಯೋ ನೋಡುತ್ತಾ ಮಾಡಲು ಮುಂದಾದ ಪರಿಣಾಮ, ಶಿಶು ಸಾವನ್ನಪ್ಪಿದೆ. ಅಲ್ಲದೇ 28 ವರ್ಷದ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೇನಾ ಹೆಲಿಕಾಪ್ಟರ್ ಪತನ: ಗಾಯಾಳು ಕ್ಯಾಪ್ಟನ್ ವರುಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ
ತಮಿಳುನಾಡಿನ ಕೊನೂರ್ ಬಳಿ ಬುಧವಾರ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಇತರ 12 ಮಂದಿ ಸಾವನ್ನಪ್ಪಿದ ಸೇನಾ ಹೆಲಿಕಾಪ್ಟರ್ ಅವಘಡದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಕ್ಯಾಪ್ಟನ್ ವರುಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಮಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ಗಂಭೀರ, ಆದರೆ ಸ್ಥಿರ
ಕಳೆದ ಭಾನುವಾರ ತಮ್ಮ ನಿವಾಸದಲ್ಲಿ ಯೋಗ ಮಾಡುತ್ತಿದ್ದಾಗ ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ಪರಿಸ್ಥಿತಿ ಗಂಭೀರವಾಗಿದ್ದು ಸ್ಥಿರವಾಗಿದೆ.

ಬುದ್ಧದೇವ ಭಟ್ಟಾಚಾರ್ಯ ಆರೋಗ್ಯದಲ್ಲಿ ಸ್ವಲ್ಪ ಸುಧಾರಣೆ, ಆದರೂ ಗಂಭೀರ: ಆಸ್ಪತ್ರೆ ಮೂಲಗಳು
ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಬುದ್ದದೇವ ಭಟ್ಟಾಚಾರ್ಯ ಅವರ ಆರೋಗ್ಯದಲ್ಲಿ ಇಂದು ಬೆಳಗ್ಗೆ ಸ್ವಲ್ಪ ಚೇತರಿಕೆ ಕಂಡುಬಂದಿದೆ. ಆದರೂ ಪರಿಸ್ಥಿತಿ ಇನ್ನೂ ಗಂಭೀರವಾಗಿರುವುದಾಗಿ ಆಸ್ಪತ್ರೆ ಮೂಲಗಳು ಹೇಳಿವೆ.

ಕೊರೋನಾ ಸೋಂಕು: ಬಸವಕಲ್ಯಾಣ ಕ್ಷೇತ್ರದ ಶಾಸಕ ನಾರಾಯಣರಾವ್ ಸ್ಥಿತಿ ಗಂಭೀರ
ಕೊರೋನಾ ಸೋಂಕು ತಗುಲಿರುವ ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣರಾವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

