ದೇಶಪೂರ್ವ ಲಡಾಕ್ ನಲ್ಲಿ ದೀರ್ಘಕಾಲದ ಸಂಘರ್ಷಕ್ಕೆ ಭಾರತೀಯ ಸೇನೆ ಸಿದ್ದವಾಗಿದೆ: ರಕ್ಷಣಾ ಪಡೆ ಮುಖ್ಯಸ್ಥ ಜ.ಬಿಪಿನ್ ರಾವತ್
ಪೂರ್ವ ಲಡಾಕ್ ನ ಗಡಿ ವಾಸ್ತವ ರೇಖೆಯಲ್ಲಿ ಉದ್ವಿಗ್ನ ಸ್ಥಿತಿಯನ್ನು ಜೀವಂತವಾಗಿಡಲು ಚೀನಾ ಯತ್ನಿಸುತ್ತಿದೆ ಎಂದು ಹೇಳಿರುವ ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ದೀರ್ಘಾವಧಿಯ ಯುದ್ಧ ಸ್ಥಿತಿಯ ವಾತಾವರಣವನ್ನು ಎದುರಿಸಲು ಭಾರತೀಯ ಸೇನೆ ಸಜ್ಜಾಗಿದೆ ಎಂದು ಅರೆಸೇನಾಪಡೆ ತಂಡಕ್ಕೆ ಹೇಳಿದ್ದಾರೆ.