CT Ravi

ನಿಮ್ಮ ಸರ್ಕಾರ ಸೃಷ್ಟಿಸಿದ ಉದ್ಯೋಗಗಳ ಅಂಕಿಅಂಶ ತೋರಿಸಿ: ಸಿದ್ದರಾಮಯ್ಯಗೆ ಸಿಟಿ ರವಿ ಸವಾಲು
ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಆಳ್ವಿಕೆಯಲ್ಲಿ ಕಳೆದ ಒಂದು ವರ್ಷದಲ್ಲಿ ಎಷ್ಟು ಉದ್ಯೋಗಗಳನ್ನು ಸೃಷ್ಟಿಸಿದ್ದಾರೆ ಮತ್ತು ರಾಜ್ಯದ ಮೂಲಸೌಕರ್ಯಗಳನ್ನು ಸುಧಾರಿಸಲು ಎಷ್ಟು ಹಣವನ್ನು ಮೀಸಲಿಟ್ಟಿದ್ದಾರೆ ಎಂಬುದರ ಕುರಿತು ಮಾಹಿತಿ ನೀಡಬೇಕು ಎಂದು ಬಿಜೆಪಿ ಹಿರಿಯ ಮುಖಂಡ ಸಿಟಿ ರವಿ ಬುಧವಾರ ಒತ್ತಾಯಿಸಿದ್ದಾರೆ.

ಸಿಟಿ ರವಿಗೆ ಅನ್ಯಾಯವಾಗಿದೆ, ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ: ಬಿಎಸ್ ಯಡಿಯೂರಪ್ಪ
ಪಕ್ಷದ ಮುಖಂಡ ಸಿಟಿ ರವಿ ಅವರಿಗೆ ಅನ್ಯಾಯವಾಗಿದ್ದು, ಅವರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತೇನೆ ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಾಲಿಬಾನ್ ಪ್ರೇರಿತ ಕಾಂಗ್ರೆಸ್ ಪ್ರಣಾಳಿಕೆ ಸಮಾಜವನ್ನು ಒಡೆಯುತ್ತದೆ: ಸಿ.ಟಿ.ರವಿ
ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಕಟಿಸಿರುವ ಪ್ರಣಾಳಿಕೆ ತಾಲಿಬಾನ್ಗಳಿಂದ ಪ್ರೇರಿತವಾಗಿದೆ ಎಂದು ಹೇಳುವ ಮೂಲಕ ಬಿಜೆಪಿಯ ಹಿರಿಯ ಮುಖಂಡ ಸಿ.ಟಿ.ರವಿ ಅವರು ವಿವಾದವನ್ನು ಹುಟ್ಟುಹಾಕಿದ್ದಾರೆ.

ಕೇರಳದಂತೆ ನಾವು ಸಹ ಸಾಲದ ಸುಳಿಯಲ್ಲಿ ಸಿಲುಕಿದ್ದೇವೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಟಿ ರವಿ ವಾಗ್ದಾಳಿ
ರಾಜ್ಯ ಕಾಂಗ್ರೆಸ್ ಸರ್ಕಾರದ ಆರ್ಥಿಕ ನೀತಿಗಳು ಕರ್ನಾಟಕವನ್ನು ಹಾಳು ಮಾಡುತ್ತಿದೆ ಎಂದು ಶುಕ್ರವಾರ ಆರೋಪಿಸಿದ ಬಿಜೆಪಿ ನಾಯಕ ಸಿಟಿ ರವಿ, ಕೇರಳದಂತೆಯೇ ನಾವು ಸಾಲದ ಸುಳಿಯಲ್ಲಿ ಸಿಲುಕಿದ್ದೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ದ್ವೇಷದ ಹೇಳಿಕೆ: ಬಿಜೆಪಿ ಮುಖಂಡ ಸಿಟಿ ರವಿ ವಿರುದ್ಧ FIR ದಾಖಲು
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ದ್ವೇಷದ ಹೇಳಿಕೆ ಪ್ರಕಟಿಸಿದ ಆರೋಪದಲ್ಲಿ ಬಿಜೆಪಿ ಮುಖಂಡ ಸಿಟಿ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮನಸ್ಸಿನಲಿ ಬಹಳ ನೋವಿದೆ ರಾಷ್ಟ್ರದ ಹಿತಕ್ಕಾಗಿ ಎಲ್ಲವನ್ನು ಸಹಿಸಿಕೊಂಡಿದ್ದೇನೆ: ಚುನಾವಣೆ ನಂತರ ಹೇಳುತ್ತೇನೆ; ಸಿ.ಟಿ ರವಿ
ಮನಸ್ಸಿನಲ್ಲಿ ಬಹಳ ನೋವುಗಳಿವೆ. ರಾಷ್ಟ್ರದ ಹಿತಕ್ಕಾಗಿ ಎಲ್ಲವನ್ನು ನುಂಗಿಕೊಂಡಿದ್ದೇನೆ. ಲೋಕಸಭೆ ಚುನಾವಣೆ ಬಳಿಕ ಎಲ್ಲವನ್ನೂ ಜನರ ಮುಂದಿಡುತ್ತೇನೆ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಹೇಳಿದರು.

ಜಾತಿ ಗಣತಿ ವರದಿ ಹಿಂದೂಗಳನ್ನು ವಿಭಜಿಸುವ ಕಾಂಗ್ರೆಸ್'ನ ಟೂಲ್ಕಿಟ್ ಭಾಗ: ಸಿ.ಟಿ.ರವಿ
ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಜಾತಿ ಗಣತಿ ವರದಿಯು ಹಿಂದೂಗಳನ್ನು ವಿಭಜಿಸುವ ಕಾಂಗ್ರೆಸ್'ನ ಟೂಲ್ಕಿಟ್ ಭಾಗವಾಗಿದೆ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಸಿ.ಟಿ.ರವಿ ಅವರು ಆರೋಪಿಸಿದ್ದಾರೆ.

ಸರಣಿ ಸ್ಫೋಟದ ಪ್ರಯೋಗಾರ್ಥ ರಾಮೇಶ್ವರಂ ಕೆಫೆ ಬ್ಲಾಸ್ಟ್: ಸಿ.ಟಿ ರವಿ
ವೈಟ್ಫೀಲ್ಡ್ನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡ ಸಿ.ಟಿ. ರವಿ ಕೆಂಡ ಕಾರಿದ್ದಾರೆ.

ಕನ್ನಡಿಗರ ತೆರಿಗೆ ಹಣ ರಾಹುಲ್ ಗಾಂಧಿ ಜೇಬು ಸೇರುತ್ತಿದೆ: ಸರ್ಕಾರದ ವಿರುದ್ಧ ಆರ್ ಅಶೋಕ, ಸಿಟಿ ರವಿ ಕಿಡಿ
ಆನೆ ದಾಳಿಗೆ ಬಲಿಯಾದ ಕೇರಳದ ವ್ಯಕ್ತಿ ಕುಟುಂಬಕ್ಕೆ ಪರಿಹಾರ ನೀಡಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ಬಿಜೆಪಿ ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ಸಿಟಿ ರವಿ ಖಂಡಿಸಿದ್ದಾರೆ.

