CT Ravi

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಾಧನೆಗಳ ಕುರಿತು ರಾಜ್ಯಾದ್ಯಂತ ಬಿಜೆಪಿಯಿಂದ ಜಾಗೃತಿ ಅಭಿಯಾನ!
ಕಳೆದ ಒಂಬತ್ತು ವರ್ಷಗಳ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳ ಕುರಿತು ಬಿಜೆಪಿ ಕರ್ನಾಟಕದಲ್ಲಿ ಜಾಗೃತಿ ಅಭಿಯಾನವನ್ನು ನಡೆಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಗುರುವಾರ ಹೇಳಿದ್ದಾರೆ.

ಸುಳ್ಳು ಹೇಳುತ್ತಿಲ್ಲವೆಂದಾದರೆ ಎಫ್ಸಿಐನ ಕಮಿಟ್ಮೆಂಟ್ ಲೆಟರ್ ತೋರಿಸಲಿ: ಸಿಎಂ ಸಿದ್ದರಾಮಯ್ಯಗೆ ಸಿಟಿ ರವಿ ಸವಾಲು
ಸಾಕಷ್ಟು ದಾಸ್ತಾನಿದ್ದರೂ ಕೇಂದ್ರವು ರಾಜ್ಯಕ್ಕೆ ಅಕ್ಕಿ ನೀಡುತ್ತಿಲ್ಲ ಎಂದು ಆರೋಪಿಸಿರುವ ಕರ್ನಾಟಕದ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಶುಕ್ರವಾರ ತರಾಟೆಗೆ ತೆಗೆದುಕೊಂಡರು ಮತ್ತು ಈ ಬಗ್ಗೆ ಭಾರತೀಯ ಆಹಾರ ನಿಗಮದ (ಎಫ್ಸಿಐ) ಕಮಿಟ್ಮೆಂಟ್ ಪತ್ರವನ್ನು ತೋರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೇಳಿದ್ದಾರೆ.

ರಿಟೈರ್ಡ್ ಹರ್ಟ್ ಆಗಿರುವ ಸಿಟಿ ರವಿ ತಿರುಗಿ ಬಿದ್ದಿದ್ದಾರೆ; ಕುಮಾರಸ್ವಾಮಿ ತಲೆ ಸವರಿಕೊಂಡು ನಗುತ್ತಿದ್ದಾರಂತೆ; ನೇಣುಗಂಬ ಯಾರಿಗೆ?
'ಅಮಿತ್ ಷಾರವರನ್ನೋ? ಬಿ ಎಲ್ ಸಂತೋಷರನ್ನೊ? ಪ್ರಹ್ಲಾದ್ ಜೋಶಿಯವರನ್ನೋ ? ಮೋದಿಯವರನ್ನೋ? ಬೊಮ್ಮಾಯಿಯವರನ್ನೋ? ಹೊಣೆ ಯಾರು, ನೇಣುಗಂಬ ಯಾರಿಗೆ? ಸೋಲಿನ ನಾಯಕತ್ವ ವಹಿಸಿಕೊಳ್ಳುವವರು ಯಾರು? ಬಿಜೆಪಿಯಿಂದ ಉತ್ತರ ನಿರೀಕ್ಷಿಸಬಹುದೇ

ನಾವು ಪ್ರಧಾನಿ ಮೋದಿಯವರಂತೆ ಕೆಲಸ ಮಾಡಲಿಲ್ಲ: ಕರ್ನಾಟಕದ ಚುನಾವಣೆಯಲ್ಲಿ ಸೋತ ಬಗ್ಗೆ ಸಿಟಿ ರವಿ
ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಮಟ್ಟದಲ್ಲಿ ಕೆಲಸ ಮಾಡುವ ರೀತಿಯಲ್ಲಿ ಕರ್ನಾಟಕದಲ್ಲಿ ನಾವು ಕೆಲಸ ಮಾಡಲು ಸಾಧ್ಯವಾಗದ ಕಾರಣ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋತಿದೆ ಮತ್ತು ಚುನಾವಣೆಗೆ ಮುನ್ನ ಸರಿಯಾದ ನಿರೂಪಣೆಯನ್ನು ಹೊಂದಿಸುವಲ್ಲಿ ನಾವು ವಿಫಲವಾಗಿದ್ದೇವೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಸೋಮವಾರ ಹೇಳಿದ್ದಾರೆ.

ಹೊಂದಾಣಿಕೆ ರಾಜಕಾರಣದಿಂದ ಬಿಜೆಪಿಗೆ ಸೋಲು: ಸಿಟಿ ರವಿ
ಕೆಲವರ ರಾಜಿ ರಾಜಕಾರಣದಿಂದ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿತು. ಹೊಂದಾಣಿ ರಾಜಕಾರಣದಿಂದ ಬಿಜೆಪಿ ಸೋತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಶುಕ್ರವಾರ ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸಿ.ಟಿ ರವಿಗೆ ಮಣ್ಣು ಮುಕ್ಕಿಸಿದ ಆಪ್ತ: ಚನ್ನಪಟ್ಟಣದಲ್ಲಿ ಮತ್ತೊಮ್ಮೆ ಸೋಲುಂಡ ಆಧುನಿಕ ಭಗೀರಥ!
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಮ್ಮ ಆಪ್ತನಾಗಿದ್ದ ಎಚ್.ಡಿ.ತಮ್ಮಯ್ಯ ಅವರಿಂದ ಸೋಲಿನ ಶಾಕ್ ಅನುಭವಿಸಿದ್ದಾರೆ.

ಕರ್ನಾಟಕ ಚುನಾವಣೆ ಫಲಿತಾಂಶ: ಬಿಜೆಪಿಯ ಭದ್ರಕೋಟೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಮುನ್ನಡೆ
ಬಿಜೆಪಿಯ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಚಿಕ್ಕಮಗಳೂರು ಜಿಲ್ಲೆಯ ಐದು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ದತ್ತಪೀಠ ಚಳವಳಿಯ ಹಿನ್ನೆಲೆಯಲ್ಲಿ ಹಿಂದುತ್ವವಾದಿಗಳು ಈ ಪ್ರದೇಶವನ್ನು ಕರ್ನಾಟಕದ ಅಯೋಧ್ಯೆ ಎಂದು ಕರೆಯುತ್ತಾರೆ.

ಸಿ.ಟಿ ರವಿ ‘ಏಕಚಕ್ರಾಧಿಪತ್ಯ’ಕ್ಕೆ ಬ್ರೇಕ್: ಚಿಕ್ಕಮಗಳೂರಿನಲ್ಲಿ ಬಿಜೆಪಿಗೆ ಕಾಂಗ್ರೆಸ್ ಮಾಸ್ಟರ್ ಸ್ಟ್ರೋಕ್!
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಅವರ 14 ವರ್ಷದ ಸಹವರ್ತಿ, ಆಪ್ತ ಲಿಂಗಾಯತ ಮುಖಂಡ ಎಚ್.ಡಿ.ತಮ್ಮಯ್ಯ ಪಕ್ಷದಿಂದ ನಿರ್ಗಮಿಸಿದ್ದು, ಈ ಬಾರಿಯ ಚುನಾವಣೆ ಕೇಸರಿ ಪಕ್ಷಕ್ಕೆ ಪ್ರತಿಷ್ಠೆಯ ಕದನವಾಗಿ ಮಾರ್ಪಟ್ಟಿದ

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ: ಸಿಎಂ ಬೊಮ್ಮಾಯಿ, ಸಿಟಿ ರವಿ ಹೇಳಿದ್ದು ಹೀಗೆ...
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಕುರಿತು ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.ಚುನಾವಣೆ ವೇಳೆ ಕಾಂಗ್ರೆಸ್ ಗೆ ಲಿಂಗಾಯಿತರ ಮೇಲೆ ಪ್ರೀತಿ ಬಂದಿದೆ ಎಂದು ವಾಗ್ದಾಳಿ ನಡೆಸಿದ ಸಿಎಂ, ಶೆಟ್ಟರ್ ಅವರನ್ನು ಬಿಜೆಪಿ ಗೌರವಯುತವಾಗಿ ನಡೆಸಿಕೊಂಡಿದೆ. ಅವರನ್ನು ಕಡೆಗಣಿಸಿದೆ ಎಂಬ ಪ್ರಶ್ನೆಯೇ ಇಲ್ಲ. ಮತ್ತೆ ಶೆಟ್ಟರ್ ಬಿಜೆಪಿಗೆ ಬರುತ್ತಾರೆಂಬ ವಿಶ್ವಾಸವ

