Cubbon Park

ಬೆಂಗಳೂರಿನಲ್ಲಿ ಅರಣ್ಯ ಇಲಾಖೆಗೆ ಸೇರಿದ ಭೂಮಿಗಳನ್ನು ಕಬ್ಬನ್ ಪಾರ್ಕ್ ರೀತಿ ಅಭಿವೃದ್ದಿ ಪಡಿಸಲು ಧನಸಹಾಯ: DK Shivakumar
“ಸುತ್ತಲಿನ ಪ್ರಕೃತಿ, ಮಣ್ಣು, ನೀರನ್ನು ಉಳಿಸುವ ಸಂಕಲ್ಪವನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ. ಹಸಿರು ಮತ್ತು ಉಸಿರನ್ನು ರಕ್ಷಿಸುವ ಗ್ಯಾರಂಟಿಯನ್ನು ನಮ್ಮ ಸರ್ಕಾರ ನೀಡಲಿದೆ"- ಡಿಕೆ ಶಿವಕುಮಾರ್

ಬೆಂಗಳೂರು: ಕಬ್ಬನ್ ಪಾರ್ಕ್‌ನಲ್ಲಿದ್ದ ರಾಣಿ ವಿಕ್ಟೋರಿಯಾ ಪ್ರತಿಮೆ ಕಿರೀಟಕ್ಕೆ ಹಾನಿ!
ಪ್ರತಿಮೆಯ ಕಿರೀಟ ನಾಪತ್ತೆಯಾಗಿರುವುದು ಪತ್ತೆಯಾಗಿದ್ದು, ಇದು ಆಘಾತ ತಂದಿದೆ. ಈ ಸಂಬಂಧ ಬಿಬಿಎಂಪಿ ಆಯುಕ್ತರು, ಕಬ್ಬನ್ ಪಾರ್ಕ್ ಎಎಸ್ಐ ಸೇರಿದಂತೆ ಇತರೆ ಸಂಬಂಧ ಅಧಿಕಾರಿಗಳ ಗಮನಕ್ಕೆ ತರಲಾಗಿದೆ.

ಕಬ್ಬನ್ ಪಾರ್ಕ್ ವೀಕೆಂಡ್ ಸಂಸ್ಕೃತ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ಭಾನುವಾರ ಮಾತನಾಡಿದ ಮೋದಿಯವರು. ಕಬ್ಬನ್ಪಾರ್ಕ್ ನಲ್ಲಿ ವಾರಾಂತ್ಯದ ವೇಳೆ ನಡೆಯುವ ಸಂಸ್ಕೃತ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಬ್ಬನ್ ಪಾರ್ಕ್ ನಲ್ಲಿ 10 ಅಂತಸ್ತಿನ ಕಟ್ಟಡ ನಿರ್ಮಾಣ ವಿರೋಧಿಸಿ ನಡಿಗೆದಾರರ ಸಂಘದಿಂದ ಪ್ರತಿಭಟನೆ
ಕಬ್ಬನ್ ಪಾರ್ಕ್ ಆವರಣದಲ್ಲಿ 10 ಅಂತಸ್ತಿನ ಕಟ್ಟಡ ನಿರ್ಮಾಣ ವಿರೋಧಿಸಿ ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ (ನಡಿಗೆದಾರರ ಸಂಘ) ಮೂರನೇ ಬಾರಿಗೆ ಪ್ರತಿಭಟನೆ ನಡೆಸಿತು.

ಬೆಂಗಳೂರು: ಇನ್ನು ಮುಂದೆ ಎಲ್ಲಾ ಶನಿವಾರಗಳಂದು ಕಬ್ಬನ್ ಪಾರ್ಕ್ ನಲ್ಲಿ ವಾಹನ ಸಂಚಾರಕ್ಕೆ ಅನುಮತಿ
ತೋಟಗಾರಿಕೆ ಇಲಾಖೆ ಫೆಬ್ರವರಿ 8 ರಂದು ಹೊರಡಿಸಿರುವ ಆದೇಶದಲ್ಲಿ, ಮೂರು ತಿಂಗಳ ಕಾಲ ಪ್ರಾಯೋಗಿಕವಾಗಿ ಎರಡು ಮತ್ತು ನಾಲ್ಕನೇ ಶನಿವಾರದಂದು ಕಬ್ಬನ್ ಪಾರ್ಕ್‌ನಲ್ಲಿ ವಾಹನ ಸಂಚಾರಕ್ಕೆ ಅನುಮತಿ ನೀಡಿದೆ. ಹಿಂದೆ ಈ ದಿನಗಳಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು.

ಕಬ್ಬನ್ ಪಾರ್ಕ್ ನಲ್ಲಿ ಮೇಳೈಸಿದ ಸಾಂಸ್ಕೃತಿಕ ಕಲರವ, ಚಿತ್ತಾರದ ರಂಗೋಲಿ ಬಿಡಿಸಿದ ಚೆಲುವೆಯರು!
ಉದ್ಯಾನನಗರಿ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ ಕಬ್ಬನ್ ಪಾರ್ಕ್ ವಾಕರ್ಸ್ ಭಾನುವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಲರವ ಮಾಡಿತ್ತು. ಮಹಿಳೆಯರು ಆಕರ್ಷಕ ರಂಗೋಲಿ ಬಿಡಿಸಿದರು.

ಕಬ್ಬನ್ ಪಾರ್ಕ್ ನಲ್ಲಿ ವಾಹನ ನಿಲುಗಡೆಗೆ ಅವಕಾಶ: ಪಾದಚಾರಿ, ಕಾರ್ಯಕರ್ತರ ವಿರೋಧ
ಕಬ್ಬನ್ ಪಾರ್ಕ್‌ನಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸುವ ಕುರಿತು ರಾಜ್ಯ ಸರ್ಕಾರ ಮತ್ತು ಹೈಕೋರ್ಟ್ ಸಮಿತಿ ಕೈಗೊಂಡ ನಿರ್ಧಾರದ ಕುರಿತು ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ಸದಸ್ಯರು ಮತ್ತು ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಬ್ಬನ್ ಪಾರ್ಕ್‌ನಲ್ಲಿ ಪೊಲೀಸ್ ಸಂಕೀರ್ಣ ನಿರ್ಮಾಣ: ಪಾದಚಾರಿಗಳ ವಿರೋಧ
ಕಸ್ತೂರಬಾ ರಸ್ತೆಯಲ್ಲಿರುವ ಬೆಂಗಳೂರು ಕೇಂದ್ರ ಉಪ ಪೊಲೀಸ್ ಆಯುಕ್ತರ ಕಚೇರಿಯ ಪಕ್ಕದಲ್ಲಿ ಪೊಲೀಸ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿರುವುದಕ್ಕೆ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಉದ್ಘಾಟನೆಯಾಗಿ 9 ತಿಂಗಳಾದರೂ ಇನ್ನೂ ತೆರೆದಿಲ್ಲ ರಾಜ್ಯದ ಮೊದಲ ವಿಶೇಷ ಅಂಗವಿಕಲ ಸ್ನೇಹಿ ಪಾರ್ಕ್!
ಕಳೆದ ವರ್ಷ ಜೂನ್‌ನಲ್ಲಿ ಕಬ್ಬನ್ ಪಾರ್ಕ್‌ನಲ್ಲಿ ಉದ್ಘಾಟನೆಯಾದಾಗಿನಿಂದ ಕರ್ನಾಟಕದ ಮೊದಲ ವಿಶೇಷ ಅಂಗವಿಕಲ ಸ್ನೇಹಿ ಉದ್ಯಾನವನದ ಬಾಗಿಲುಗಳು ಮಕ್ಕಳಿಗೆ ಮುಚ್ಚಿವೆ.

