Curfew

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಇಂಟರ್ನೆಟ್ ಸೇವೆ ಸ್ಥಗಿತ, ಹಲವೆಡೆ ಕರ್ಫ್ಯೂ ಜಾರಿ...!
ಭದ್ರತಾ ಪಡೆಗಳು ಮಣಿಪುರದ ಇಂಫಾಲ್ ಪಶ್ಚಿಮದ ಕ್ವಾಕೆಟಾಲ್ ಪ್ರದೇಶದಲ್ಲಿ ಮೈತೆಯಿ ಸಂಘಟನೆಯ ನಾಯಕ ಅರಾಂಬೈ ಟೆಂಗೋಲ್ ಅವರನ್ನು ಬಂಧಿಸಿದ್ದು ಇದು ಅವರ ಬೆಂಬಲಿಗರನ್ನು ಕೆರಳಿಸಿದೆ. ಇದರ ಬೆನ್ನಲ್ಲೇ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

ಮಣಿಪುರದಲ್ಲಿ 6 ಮಂದಿ ಹತ್ಯೆ: 2 ಸಚಿವರು, 3 ಶಾಸಕರ ಮನೆಗೆ ನುಗ್ಗಿದ ಪ್ರತಿಭಟನಾಕಾರರು; ಕರ್ಫ್ಯೂ ಜಾರಿ!
ಶಾಸಕರ ಮನೆಗಳ ಮೇಲೆ ಗುಂಪು ದಾಳಿಗಳ ಹಿನ್ನೆಲೆಯಲ್ಲಿ ಇಂಫಾಲ್ ಪಶ್ಚಿಮ ಆಡಳಿತ ಅನಿರ್ದಿಷ್ಟ ಅವಧಿಗೆ ಜಿಲ್ಲೆಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಿದೆ.

ಬಾಂಗ್ಲಾದೇಶ: ಕರ್ಫ್ಯೂ ಹೊರತಾಗಿಯೂ ನಿಲ್ಲದ ಮೀಸಲಾತಿ ವಿರೋಧಿ ಹಿಂಸಾಚಾರ; ಮತ್ತೆ 43 ಮಂದಿ ಸಾವು
ಮತ್ತಷ್ಟು ಹಿಂಸಾಚಾರವನ್ನು ತಡೆಯಲು ಪೊಲೀಸರು ಬಾಂಗ್ಲಾದೇಶದಾದ್ಯಂತ ಕಟ್ಟುನಿಟ್ಟಾದ ಕರ್ಫ್ಯೂ ಜಾರಿಗೊಳಿಸಿದ್ದಾರೆ ಮತ್ತು ಮಿಲಿಟರಿ ಪಡೆಗಳು ಶನಿವಾರ ರಾಜಧಾನಿಯ ಕೆಲವು ಭಾಗಗಳಲ್ಲಿ ಗಸ್ತು ತಿರುಗುತ್ತಿವೆ.

ಮಹಾರಾಷ್ಟ್ರದಲ್ಲಿ ತೀವ್ರಗೊಂಡ ಮರಾಠ ಮೀಸಲಾತಿ ಹೋರಾಟ: ಸರ್ಕಾರಿ ಬಸ್'ಗೆ ಬೆಂಕಿ, ನಿಷೇಧಾಜ್ಞೆ ಜಾರಿ
ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಮತ್ತಷ್ಟು ತೀವ್ರಗೊಂಡಿದ್ದು, ಹೋರಾಟಗಾರು ಅಂಬಾದ್ ಎಂಬಲ್ಲಿ ಸರ್ಕಾರಿ ಬಸ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಕರ್ಫ್ಯೂ ಉಲ್ಲಂಘಿಸಿ ಮಣಿಪುರ ಸಿಎಂ ಮನೆ ಮೇಲೆ ದಾಳಿಗೆ ಗುಂಪು ಯತ್ನ; ಭದ್ರತಾ ಪಡೆಗಳಿಂದ ತಡೆ
ಮಣಿಪುರದಲ್ಲಿ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದು, ಕರ್ಫ್ಯೂ ಉಲ್ಲಂಘನೆ ಮಾಡಿ ಸಿಎಂ ಮನೆ ಮೇಲೆ ದಾಳಿಗೆ ಗುಂಪೊಂದು ಯತ್ನಿಸಿದೆ. ಆದರೆ ಭದ್ರತಾ ಪಡೆಗಳು ಈ ಯತ್ನವನ್ನು ವಿಫಲಗೊಳಿಸಿವೆ.

ಕರ್ನಾಟಕ ಚುನಾವಣಾ ಫಲಿತಾಂಶ: ಮತ ಎಣಿಕೆಗೆ ಕ್ಷಣಗಣನೆ; ಬೆಂಗಳೂರು, ದಕ್ಷಿಣ ಕನ್ನಡದಲ್ಲಿ ಕರ್ಫ್ಯೂ ಜಾರಿ
2023ರ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಶನಿವಾರ ಬೆಳಗ್ಗೆ 7 ಗಂಟೆಗೆ ಸ್ಟ್ರಾಂಗ್ ರೂಂ ತೆರೆಯಲಾಗಿದ್ದು, ಬಿಗಿ ಭದ್ರತೆಯ ನಡುವೆ ಬೆಳಗ್ಗೆ 8 ಗಂಟೆಗೆ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ.

ಹುಲಿ ದಾಳಿ ಭೀತಿ: ಉತ್ತರಾಖಂಡದ ಹಲವು ಗ್ರಾಮಗಳಲ್ಲಿ ಕರ್ಫ್ಯೂ ಜಾರಿ!
ಹುಲಿ ದಾಳಿ ಭೀತಿ ಹಿನ್ನಲೆಯಲ್ಲಿ ಉತ್ತರಾಖಂಡದ ಹಲವು ಗ್ರಾಮಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.

ಸಂಬಲ್ಪುರ ಹಿಂಸಾಚಾರ: 79 ಮಂದಿ ಬಂಧನ; ಕರ್ಫ್ಯೂ ಮುಂದುವರಿಕೆ
ಹನುಮ ಜಯಂತಿ ಆಚರಣೆ ವೇಳೆ ಒಡಿಶಾದ ಸಂಬಲ್ಪುರ ನಗರದಲ್ಲಿ ನಡೆದ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ 79 ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಕರ್ಫ್ಯೂ ಜಾರಿ!
ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಕಲ್ಲಕುರಿಚಿ ತಾಲೂಕು ಮತ್ತು ಚಿನ್ನಸೇಲಂ ತಾಲೂಕಿನ ಕೆಲವು ಭಾಗಗಳಲ್ಲಿ ಜುಲೈ 31ರವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ.

