Curfew

ಟೈಲರ್ ತಲೆಕಡಿದ ದುಷ್ಕರ್ಮಿಗಳು: ಉದಯಪುರದಲ್ಲಿ ಪರಿಸ್ಥಿತಿ ಉದ್ವಿಗ್ನ, ಕರ್ಫ್ಯೂ ಜಾರಿ, ರಾಜಸ್ಥಾನದಾದ್ಯಂತ 1 ತಿಂಗಳು ನಿಷೇಧಾಜ್ಞೆ ಜಾರಿ
ಪ್ರವಾದಿ ಮೊಹಮ್ಮದರ ಕುರಿತು ಬಿಜೆಪಿ ಮಾಜಿ ವಕ್ತಾರೆ ನೂರುಪ್ ಶರ್ಮಾ ಆಡಿದ್ದ ಮಾತುಗಳನ್ನು ಬೆಂಬಲಿಸಿದ್ದ ವ್ಯಕ್ತಿಯ ಶಿರಚ್ಛೇದ ಮಾಡಿರುವ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದು, ಘಟನೆ ಬಳಿಕ ಉದಯಪುರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ...

ಕೇರಳದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್! ಡಿಸೆಂಬರ್ 30 ರಿಂದ ರಾತ್ರಿ ಕರ್ಫ್ಯೂ ಜಾರಿ
ಕೇರಳದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳ ತಡೆಯುವ ನಿಟ್ಟಿನಲ್ಲಿ ಡಿಸೆಂಬರ್ 30 ರಿಂದ ಜನವರಿ 2ರವರಗೂ ರಾತ್ರಿ ಕರ್ಫ್ಯೂವನ್ನು ಜಾರಿಗೊಳಿಸಲಾಗಿದೆ.

ಉತ್ತರ ಪ್ರದೇಶ: ಕೊರೋನಾ ಕರ್ಫ್ಯೂ ಉಲ್ಲಂಘಿಸಿದ ಬಾಲಕನಿಗೆ ಪೊಲೀಸ್ ಥಳಿತ; ಬಾಲಕ ನಿಧನ; ಪೇದೆ ಅಮಾನತು
ಕರ್ಫ್ಯೂ ನಿಯಮಗಳನ್ನು ಉಲ್ಲಂಘಿಸಿದ 17 ವರ್ಷದ ಬಾಲಕ ಪೊಲೀಸರ ಥಳಿತದ ನಂತರ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಭಟ್ಪುರಿ ಜಿಲ್ಲೆಯಲ್ಲಿ ನಡೆದಿದೆ.

ಕೋವಿಡ್-19: ಉತ್ತರ ಪ್ರದೇಶದಲ್ಲಿ ಮೇ 10 ರವರೆಗೆ ಕೊರೋನಾ ಕರ್ಫ್ಯೂ ವಿಸ್ತರಣೆ
ಕೊರೋನಾ ವೈರಸ್ ಪ್ರಕರಣಗಳು ಮತ್ತಷ್ಟು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾರಾಂತ್ಯದ ಲಾಕ್‌ಡೌನ್ ಅವಧಿಯನ್ನು ಮೇ 10 ರಂದು ಬೆಳಗ್ಗೆ 7 ಗಂಟೆಯವರೆಗೆ ವಿಸ್ತರಿಸಲು ಉತ್ತರ ಪ್ರದೇಶ ಸರ್ಕಾರ ಬುಧವಾರ ನಿರ್ಧರಿಸಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

ಕೋವಿಡ್ ಕರ್ಫ್ಯೂ: ಸೂಪರ್ ಮಾರ್ಕೆಟ್ ಗಳಲ್ಲಿರುವ ಮದ್ಯದಂಗಡಿ ತೆರೆಯಲು ಅವಕಾಶ ಇಲ್ಲ
14 ದಿನಗಳ ಲಾಕ್‌ಡೌನ್ ಘೋಷಿಸಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಬೆಳಗ್ಗೆ 6ರಿಂದ 10ರವರೆಗೆ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ.

ಜಮ್ಮು-ಕಾಶ್ಮೀರದಲ್ಲಿ ಶನಿವಾರ ರಾತ್ರಿ 8 ಗಂಟೆಯಿಂದ 34 ಗಂಟೆ ಕರ್ಫ್ಯೂ ಜಾರಿ
ಕೊರೋನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಶನಿವಾರ ರಾತ್ರಿ 8 ಗಂಟೆಯಿಂದ 34 ಗಂಟೆ ಕರ್ಫ್ಯೂವನ್ನು ಜಾರಿಗೊಳಿಸಲಾಗಿದೆ.

ರಾಜಸ್ಥಾನದ ಎಲ್ಲಾ ನಗರಗಳಲ್ಲಿ ಶುಕ್ರವಾರದಿಂದ 12 ಗಂಟೆ ಕರ್ಫ್ಯೂ ಜಾರಿ
ಆತಂಕಕಾರಿಯಾಗಿ ಹೆಚ್ಚಾಗಿರುತ್ತಿರುವ ಕೋವಿಡ್-19 ಪ್ರಕರಣಗಳನ್ನು ತಡೆಗಟ್ಟುವ ಕ್ರಮವಾಗಿ ರಾಜಸ್ಥಾನದ ಎಲ್ಲಾ ನಗರಗಳಲ್ಲಿ ಶುಕ್ರವಾರ ಸಂಜೆ ಆರು ಗಂಟೆಯಿಂದ ಬೆಳಗ್ಗೆ ಆರು ಗಂಟೆಯವರೆಗೂ ಕರ್ಫ್ಯೂವನ್ನು ಜಾರಿಗೊಳಿಸಲಾಗಿದೆ. ಈ ಮಾಸಾಂತ್ಯದವರೆಗೂ ಈ ಕರ್ಫ್ಯೂ ಜಾರಿಯಲ್ಲಿರುತ್ತದೆ.

ನೈಟ್ ಕರ್ಫ್ಯೂ ನಿಂದ ಯಾವುದೇ ಪ್ರಯೋಜನ ಇಲ್ಲ: ಡಿ.ಕೆ.ಶಿವಕುಮಾರ್
ಪ್ರಧಾನಮಂತ್ರಿ ನರೇಂದ್ರ ಮೋದಿ ಸೂಚನೆ ಬೆನ್ನಲ್ಲೇ ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕಠಿಣ ನಿರ್ಬಂಧ ಘೋಷಿಸಿದ್ದಾರೆ. ಇಂದಿನಿಂದ ಏ. 20 ರವರೆಗೆ 8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ.

ಶಿವಮೊಗ್ಗದಲ್ಲಿ ಮತೀಯ ಗಲಭೆ: ಹಲವೆಡೆ ಕರ್ಫ್ಯೂ ಜಾರಿ, 62 ಮಂದಿ ಬಂಧನ
ಶಿವಮೊಗ್ಗದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮವಾಗಿ ನಗರದ ಹಲವೆಡೆ ಕರ್ಫ್ಯೂ ಹೇರಲಾಗಿದ್ದು, 62 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

