CWMA

ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ: ಸಿಡಬ್ಲ್ಯುಎಂಎಗೆ ರಾಜ್ಯ ಸರ್ಕಾರ ಸ್ಪಷ್ಟನೆ, ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ಮನವಿ
ನೆರೆ ರಾಜ್ಯ ತಮಿಳುನಾಡಿಗೆ ನೀರು ಬಿಡುವ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯುಎಂಎ) ಬಳಿ ಅಸಮರ್ಥತೆ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ, ಮರುಪರಿಶೀಲನಾ ಅರ್ಜಿ ಸಲ್ಲಿಸಿದೆ. ಅಲ್ಲದೆ, ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಅನುಮತಿ ನೀಡುವಂತೆಯೂ ಮನವಿ ಸಲ್ಲಿಸಿದೆ.

ತಮಿಳು ನಾಡಿಗೆ ಕಾವೇರಿ ನೀರು ಹರಿಸಲು ಆದೇಶ: ಇಂದು ಸುಪ್ರೀಂ ಕೋರ್ಟ್, CWMA ಮುಂದೆ ಮರು ಪರಿಶೀಲನೆ ಅರ್ಜಿ
ಅಕ್ಟೋಬರ್ 15ರವರೆಗೆ ನಿತ್ಯ 3,000 ಕ್ಯೂಸೆಕ್ ಕಾವೇರಿ ನೀರನ್ನು ತಮಿಳು ನಾಡಿಗೆ ಹರಿಸುವಂತೆ ಕಾವೇರಿ ನೀರು ಮೇಲುಸ್ತುವಾರಿ ಪ್ರಾಧಿಕಾರ(CWMA) ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ(CWCC) ಆದೇಶ ನೀಡಿರುವ ಹಿನ್ನೆಲೆ ಕಾವೇರಿ ಜಲಾನಯನ ಜಿಲ್ಲೆಗಳಲ್ಲಿ ಮತ್ತು ರಾಜಧಾನಿ ಬೆಂಗಳೂರಿನಲ್ಲಿ ಹೋರಾಟಗಾರರ ಕಿಚ್ಚು ಭುಗಿಲೆದ್ದಿದೆ.

ನಾಳೆಯೇ ಕಾವೇರಿ ನೀರು ನಿರ್ವಹಣಾ ಮಂಡಳಿ, ಸುಪ್ರೀಂ ಕೋರ್ಟ್ ಗೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ: ಸಿಎಂ ಸಿದ್ದರಾಮಯ್ಯ
ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ನಾಳೆಯೇ ನಮ್ಮ ಬಳಿ ನೀರು ಇಲ್ಲ, ನೀರು ಬಿಡಲು ಸಾಧ್ಯವಿಲ್ಲ ಎಂದು ಮರುಪರಿಶೀಲನಾ ಅರ್ಜಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಪಕ್ಷಗಳ ಒಕ್ಕೂಟ ದೋಸ್ತಿಯನ್ನು ರಾಜ್ಯದ ಹಿತಕ್ಕಾಗಿ ಬಳಸಿ: ಸಿಎಂ ಸಿದ್ದರಾಮಯ್ಯಗೆ ತೇಜಸ್ವಿ ಸೂರ್ಯ ಸಲಹೆ
ಕಾಂಗ್ರೆಸ್ ಹಾಗೂ ಡಿಎಂಕೆ ವಿಪಕ್ಷಗಳ ಒಕ್ಕೂಟದ ಭಾಗವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ದೋಸ್ತಿಯನ್ನು ರಾಜ್ಯದ ಹಿತಕ್ಕಾಗಿ ಬಳಸಿಕೊಳ್ಳಬೇಕೆಂದು ಸಂಸದ ತೇಜಸ್ವಿ ಸೂರ್ಯ ಅವರು ಆಗ್ರಹಿಸಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು: ಸಿಡಬ್ಲ್ಯೂಎಂಎ, ಸುಪ್ರೀಂ ಕೋರ್ಟ್ ಮುಂದೆ ವಾಸ್ತವ ಸ್ಥಿತಿಗತಿ ಮಂಡನೆ- ಸಿಎಂ ಸಿದ್ದರಾಮಯ್ಯ
ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವ ಕುರಿತು ರಾಜ್ಯದ ವಾಸ್ತವ ಸ್ಥಿತಿಗತಿಗಳನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಮತ್ತು ಸುಪ್ರೀಂ ಕೋರ್ಟ್‌ನ ಮುಂದಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.

ಕಾವೇರಿ: ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ ಸೂಚನೆ, ಸಿಡಬ್ಲ್ಯೂಆರ್'ಸಿ ಆದೇಶ ಎತ್ತಿಹಿಡಿದ ಸಿಡಬ್ಲ್ಯೂಎಂಎ!
ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ಕಿತ್ತಾಟಕ್ಕೆ ಕಾರಣವಾಗಿರುವ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಮತ್ತೊಮ್ಮೆ ಭಾರೀ ಹಿನ್ನಡೆಯಾಗಿದೆ.

ಮೇಕೆದಾಟು ಯೋಜನೆ: ಸುಪ್ರೀಂಕೋರ್ಟ್ ಆದೇಶದಂತೆ ನಡೆಯುತ್ತೇವೆಂದ ಕಾವೇರಿ ಪ್ರಾಧಿಕಾರ
ಮೇಕೆದಾಟು ಯೋಜನೆ ಸಂಬಂಧ ಸುಪ್ರೀಂಕೋರ್ಟ್ ಆದೇಶದಂತೆ ನಡೆಯುತ್ತೇವೆಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು (ಸಿಡಬ್ಲ್ಯುಎಂಎ) ಮಂಗಳವಾರ ಹೇಳಿದೆ.

