ರಾಜ್ಯಪ್ರತಿ ಜಿಲ್ಲೆ, ನಗರ ವ್ಯಾಪ್ತಿಯಲ್ಲಿ ಸೈಬರ್ ಪೊಲೀಸ್ ಠಾಣೆ ಸ್ಥಾಪನೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಸೈಬರ್ ಅಪರಾಧಗಳನ್ನು ಸಮರ್ಥವಾಗಿ ನಿಭಾಯಿಸಲು ಹಾಗೂ ವಂಚನೆಗೊಳಗಾದವರ ನೆರವಿಗಾಗಿ ಬೆಂಗಳೂರು ನಗರದಲ್ಲಿ 8 ಹಾಗೂ ಪ್ರತಿ ಜಿಲ್ಲೆ ಹಾಗೂ ನಗರ ವ್ಯಾಪ್ತಿಯಲ್ಲಿ ವಿಶೇಷ ಸೈಬರ್ ಪೊಲೀಸ್ ಠಾಣೆಗಳನ್ನು ತೆರೆದು, ಅಪರಾಧ ಪತ್ತೆ ಹಚ್ಚಲು ಸೈಬರ್ ತಜ್ಞರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನಪರಿಷತ್ತಿಗೆ ತಿಳಿಸಿದರು.