ರಾಜ್ಯರಾಜ್ಯದಲ್ಲಿ ಮಕ್ಕಳ ಮೇಲಿನ ಸೈಬರ್ ಅಪರಾಧ ಪ್ರಕರಣಗಳು ಶೇ.1,340ರಷ್ಟು ಹೆಚ್ಚಳ!
ರಾಜ್ಯದಲ್ಲಿ ಹಿಂದಿನ ವರ್ಷಕ್ಕಿಂತಲೂ 2020ರಲ್ಲಿ ಮಕ್ಕಳ ಮೇಲಿನ ಸೈಬರ್ ಅಪರಾಧಗಳ ಪ್ರಕರಣಗಳ ಸಂಖ್ಯೆಯಲ್ಲಿ ಶೇಕಡಾ 1,340 ರಷ್ಟು ಹೆಚ್ಚಳವಾಗಿರುವುದು ಕಂಡು ಬಂದಿದೆ. ಇದರೊಂದಿಗೆ ದೇಶದಲ್ಲಿ ಅತಿ ಹೆಚ್ಚು ಅಪರಾಧಗಳನ್ನು ವರದಿ ಮಾಡುವ ರಾಜ್ಯಗಳಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ.