Cyclone Tauktae

ತೌಕ್ತೆ ಚಂಡಮಾರುತ: ರಾಜ್ಯದಲ್ಲಿ 8 ಮಂದಿ ಸಾವು, ಕರಾವಳಿ- ಮಲೆನಾಡಿನಲ್ಲಿ ವ್ಯಾಪಕ ಹಾನಿ
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಗಾಳಿಯಿಂದ ಕೂಡಿದ ತೌಕ್ತೆ ಚಂಡಮಾರುತವು ಎಂಟು ಜನರನ್ನು ಬಲಿ ತೆಗೆದುಕೊಂಡಿದೆ.

ಟೌಕ್ಟೇ ಚಂಡಮಾರುತ: ಮಂಗಳೂರು ಕಡಲ ತೀರದಲ್ಲಿ ಸಿಲುಕಿದ್ದ 9 ಮಂದಿ ರಕ್ಷಣೆ; ನೌಕಾಪಡೆ ಸಿಬ್ಬಂದಿಗೆ ಮುಖ್ಯಮಂತ್ರಿ ಧನ್ಯವಾದ
ಟೌಕ್ಟೇ ಚಂಡಮಾರುತದ ಅಬ್ಬರದ ಅಲೆಗೆ ಸಿಲುಕಿ ಮಂಗಳೂರು ತೀರದ ಮೂಲ್ಕಿ ಬಳಿ ಕಲ್ಲುಬಂಡೆಯ ಪಕ್ಕ ದೋಣಿಯಲ್ಲಿ ಸಿಲುಕಿ ಹಾಕಿಕೊಂಡಿದ್ದ 9 ಮಂದಿಯನ್ನು ಭಾರತೀಯ ನೌಕಾಪಡೆ ಸಿಬ್ಬಂದಿ ಸೋಮವಾರ ಬೆಳಗ್ಗೆ ರಕ್ಷಿಸಿದ್ದಾರೆ.

ಟೌಕ್ಟೇ ಚಂಡಮಾರುತಕ್ಕೆ ಬೆಳಗಾವಿಯಲ್ಲಿ ಇಬ್ಬರು ಬಲಿ: ಗೋಡೆ ಕುಸಿದು ಅಜ್ಜಿ, ಮೊಮ್ಮಗ ದುರ್ಮರಣ
ಟೌಕ್ಟೇ ಚಂಡಮಾರುತ ರಾಜ್ಯದ ಬೆಳಗಾವಿಯಲ್ಲಿ ಎರಡು ಜೀವಗಳ ಬಲಿ ಪಡೆದಿದೆ. ಬೆಳಗಾವಿಯ ಖಾನಾಪುರ ತಾಲ್ಲೂಕಿನ ಇಟಗಿ ಗ್ರಾಮದಲ್ಲಿ ವಾಸಿಸುತ್ತಿದ್ದ ಮಹಿಳೆ ಮತ್ತು ಆಕೆಯ ಮೊಮ್ಮಗ ಬೆಳಿಗ್ಗೆ 9 ಗಂಟೆಗೆ ಗಾಳಿ ಜೋರಾಗಿ ಬೀಸಿದ ಪರಿಣಾಮ ಮನೆಯ ಗೋಡೆ ಕುಸಿದು ಸಾವನ್ನಪ್ಪಿದ್ದಾರೆ.

ಟೌಕ್ಟೇ ಚಂಡಮಾರುತ: ಕರಾವಳಿ ಜಿಲ್ಲೆಗಳ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸುತ್ತಿದ್ದೇವೆ: ಸಿಎಂ ಬಿಎಸ್ ಯಡಿಯೂರಪ್ಪ
ಟೌಕ್ಟೇ ಚಂಡಮಾರುತ ವಿಚಾರವಾಗಿ ಕರಾವಳಿ ಜಿಲ್ಲೆಗಳ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಗುಜರಾತ್ ಕರಾವಳಿಯತ್ತ ಟೌಕ್ಟೇ ಚಂಡಮಾರುತ; 56 ರೈಲುಗಳು ರದ್ದು, ಭಾರಿ ಮಳೆ
ಟೌಕ್ಟೇ ಚಂಡಮಾರುತ ಗುಜರಾತ್ ಕರಾವಳಿಯತ್ತ ನುಗ್ಗಿದ್ದು, ಮುಂಜಾಗ್ರತ್ರಾ ಕ್ರಮವಾಗಿ ಪಶ್ಚಿಮ ರೈಲ್ವೆ (ಡಬ್ಲ್ಯುಆರ್) ಶನಿವಾರ ಮೇ 21 ರವರೆಗೆ 56 ರೈಲುಗಳನ್ನು ರದ್ದುಗೊಳಿಸಿದೆ.

ಕರ್ನಾಟಕ ಕರಾವಳಿಗೆ ಅಪ್ಪಳಿಸಿದ ಟೌಕ್ಟೇ ಚಂಡಮಾರುತ, ಮಂಗಳೂರಿನಲ್ಲಿ 50 ಕುಟುಂಬ ಸ್ಥಳಾಂತರ
ಟೌಕ್ಟೇ ಚಂಡಮಾರುತ ಕರ್ನಾಟಕ ಕರಾವಳಿಗೆ ಅಪ್ಪಳಿಸಿದ್ದು, ಶುಕ್ರವಾರ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಲವು ಮನೆಗಳಿಗೆ ಹಾನಿಯಾಗಿದೆ. ಹೀಗಾಗಿ 50ಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.

ಟೌಕ್ಟೇ ಚಂಡಮಾರುತ: 6 ರಾಜ್ಯಗಳಿಗೆ 100 ಎನ್ ಡಿಆರ್ ಎಫ್ ತಂಡಗಳ ನಿಯೋಜನೆ, ಸಮರೋಪಾದಿ ಕಾರ್ಯಾಚರಣೆಗೆ ಸೂಚನೆ
ಟೌಕ್ಟೇ ಚಂಡಮಾರುತದ ಸುಳಿಗೆ ಸಿಲುಕಿರುವ ಭಾರತದ ಆರು ರಾಜ್ಯಗಳಿಗೆ ಕೇಂದ್ರ ಸರ್ಕಾರ 100 ಎನ್ ಡಿಆರ್ ಎಫ್ ತಂಡಗಳನ್ನು ನಿಯೋಜಿಸಿದೆ.

ಮಂಗಳೂರು: ಸಮುದ್ರದಲ್ಲಿ ಸಿಲುಕಿದ್ದ ಮೂವರು ಮೀನುಗಾರರ ರಕ್ಷಣೆ
ಎಂಜಿನ್ ಸಮಸ್ಯೆಯಿಂದಾಗಿ ಸಮುದ್ರದಲ್ಲಿ ಬೋಟ್ ವೊಂದು ಸಿಲುಕಿದ ಪರಿಣಾಮ ಸಂಕಷ್ಟಕ್ಕೆ ಸಿಲುಕಿಗೊಂಡಿದ್ದ ಮೂವರು ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಣೆ ಮಾಡಿದೆ.

ಕರಾವಳಿಯಾದ್ಯಂತ ಭಾರಿ ಮಳೆ, ರಕ್ಷಣೆಗೆ ಧಾವಿಸಿದ ಎನ್'ಡಿಆರ್'ಎಫ್ ತಂಡ
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಯಾಗಿದ್ದು, ಕರಾವಳಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ.

