D K Shivakumar

ಶಾಸಕ ಸುರೇಶ್ ಕುಮಾರ್ ಆಕ್ಷೇಪ ಹಿನ್ನೆಲೆ: ವಕೀಲರ ಪರಿಷತ್ ಆಹ್ವಾನ ಪತ್ರಿಕೆಯಿಂದ ಡಿಕೆಶಿ ಹೆಸರಿಗೆ ಕೊಕ್!
ಕರ್ನಾಟಕ ರಾಜ್ಯ ವಕೀಲರ ಪರಿಷತ್ ವತಿಯಿಂದ ಮೈಸೂರಿನಲ್ಲಿ ಆಗಸ್ಟ್ 12 ರಂದು ಆಯೋಜಿಸಿರುವ ರಾಜ್ಯಮಟ್ಟದ ಸಮಾವೇಶದ ಆಹ್ವಾನ ಪತ್ರಿಕೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಸರನ್ನು ಕೈ ಬಿಡಲಾಗಿದೆ.

'ಅಣ್ಣ ಮಾತನಾಡೋದನ್ನ ತಮ್ಮ ಕೇಳ್ತಾ ಇರಬೇಕು, ಕುಮಾರಸ್ವಾಮಿ ಸಮಾಧಾನಕ್ಕೆ ಏನಾದರೂ ಮಾತನಾಡಲಿ': ಡಿ ಕೆ ಶಿವಕುಮಾರ್
'ಮಾಯಾನೋ, ಜ್ಯೋತಿಷ್ಯನೋ, ಧರ್ಮನೋ, ಶ್ರಮನೋ ಒಟ್ಟಿನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಳೆದ ಮೂರು ವರ್ಷಗಳ ಶ್ರಮ ಇದೆ, ನಮ್ಮ ಕಾರ್ಯಕರ್ತರನ್ನು ಮಲಗಲು ಬಿಟ್ಟಿಲ್ಲ, ಆ ಶ್ರಮದ ಪ್ರತಿಫಲ ಇವತ್ತು ಅನುಭವಿಸುತ್ತಿದ್ದೇವೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಆರೋಪಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ರೈತರಿಗೆ ಸಹಾಯವಾಗಲು ಹಾಲಿನ ದರ ಏರಿಕೆ ಮಾಡಿದ್ದೇವೆ: ಡಿ ಕೆ ಶಿವಕುಮಾರ್
ರೈತರ ಕಷ್ಟ ಕಾರ್ಪಣ್ಯಗಳನ್ನು ಮನಗಂಡು ಆ ದೃಷ್ಟಿಯಿಂದ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಂದಿನ ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಶಾಸಕರು ದೂರು ನೀಡಿಲ್ಲ, ನಿಗದಿಯಂತೆ ಶಾಸಕಾಂಗ ಸಭೆ ಕರೆದಿದ್ದೇವೆ: ಸಿಎಂ, ಡಿಸಿಎಂ ಸ್ಪಷ್ಟನೆ
ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಹೊಸದರಲ್ಲಿಯೇ ಕೈ ಶಾಸಕರು ಅಸಮಾಧಾನಗೊಂಡಿದ್ದು, ಸಚಿವರ ಕಾರ್ಯವೈಖರಿಗೆ ಅಸಮಾಧಾನಗೊಂಡು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದಾರೆ, ಹೀಗಾಗಿ ಮುಖ್ಯಮಂತ್ರಿಗಳು ಇದೇ 27ರಂದು ಶಾಸಕರ ಸಭೆ ಕರೆದಿದ್ದಾರೆ ಎಂದು ಸುದ್ದಿಯಾಗಿತ್ತು.

22 ಸಾವಿರ ಕೋಟಿ ರೂ. ವೆಚ್ಚದಲ್ಲಿ ಮೊದಲ ಹಂತದ ಸುರಂಗ ಮಾರ್ಗ: ಬೆಂಗಳೂರಿನ ಸಂಚಾರ ದಟ್ಟಣೆಗೆ ಕ್ರಮ
ರಾಜಧಾನಿ ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸುರಂಗ ರಸ್ತೆ ಯೋಜನೆಗಳ ಕುರಿತು ಚರ್ಚಿಸಲು ಅಂತಾರಾಷ್ಟ್ರೀಯ ವಿನ್ಯಾಸ ಸಲಹಾ ಸಂಸ್ಥೆ ಎಇಕಾಂ ಇಂಡಿಯಾದ(AECOM India) ಎಂಜಿನಿಯರ್ಗಳು ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿ ಚರ್ಚಿಸಿದ್ದಾರೆ.

ಜೆಡಿಎಸ್ ನ 'ಪೋಸ್ಟಿಂಗ್ಗೆ ನಗದು' ಆರೋಪಕ್ಕೆ ಬಿಜೆಪಿ ಬೆಂಬಲ: ಕಾಂಗ್ರೆಸ್ ತಿರುಗೇಟು
ಭ್ರಷ್ಟಾಚಾರದ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಎದುರಿಸಲು ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಕೈಜೋಡಿಸುವುದಾಗಿ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಹೇಳಿದ್ದು, ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ನ “ಪೋಸ್ಟಿಂಗ್ಗೆ ನಗದು” ಆರೋಪಕ್ಕೆ ತನ್ನ ಬೆಂಬಲವನ್ನು ನೀಡಿದೆ.

ಸೋನಿಯಾ ಗಾಂಧಿ ಭೇಟಿ ಮಾಡಿದ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ ಕೆ ಶಿವಕುಮಾರ್: ತೆಲಂಗಾಣ ಚುನಾವಣೆ ತಂತ್ರಗಾರಿಕೆ ಕುರಿತು ಚರ್ಚೆ?
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ ಶುಕ್ರವಾರ ದೆಹಲಿಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದು, ಈ ವರ್ಷಾಂತ್ಯದಲ್ಲಿ ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಕುರಿತು ಇಬ್ಬರೂ ಚರ್ಚಿಸಿದ್ದಾರೆ ಎಂಬ ವದಂತಿಗಳು ದಟ್ಟವಾಗಿದೆ.

ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾದ ಡಿಸಿಎಂ ಡಿಕೆಶಿ, ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ
ದೆಹಲಿ ಪ್ರವಾಸದಲ್ಲಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಗುರುವಾರ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಭೇಟಿ ಮಾಡಿದರು.

'ಗೃಹ ಜ್ಯೋತಿ' ಯೋಜನೆ ನೋಂದಣಿಗೆ 20 ರೂ.ಗಿಂತ ಹೆಚ್ಚುವರಿ ಹಣ ವಸೂಲಿ ಮಾಡಿದರೆ ಕಠಿಣ ಕ್ರಮ: ಸರ್ಕಾರದ ಎಚ್ಚರಿಕೆ
ರಾಜ್ಯದಲ್ಲಿ ಗ್ರಾಹಕರಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನ್ನು ಒದಗಿಸುವ ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಿಸುವಾಗ ಹಣ ಕೇಳುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.

