D K Shivakumar

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್: ಐದು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಉಪಮಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಐದು ಪ್ರಕರಣಗಳನ್ನು ರದ್ದುಗೊಳಿಸಿ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿದೆ.

ಬೆಂಗಳೂರು ಸಂಚಾರ ದಟ್ಟಣೆ ಸಮಸ್ಯೆ ಕುರಿತು ಡಿಸಿಎಂಗೆ ನಿರ್ದೇಶಕ ಶಶಾಂಕ್ ಬಹಿರಂಗ ಪತ್ರ
ರಾಜಧಾನಿ ಬೆಂಗಳೂರು ಮಳೆಗಾಲದಲ್ಲಿ ಪ್ರವಾಹ, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವುದು, ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗದಿರುವುದು, ವರ್ಷಪೂರ್ತಿ ಸಂಚಾರ ದಟ್ಟಣೆ ಸಮಸ್ಯೆ ಹೀಗೆ ಅನೇಕ ಸಮಸ್ಯೆಗಳಿಂದ ನಲುಗಿ ಹೋಗುತ್ತಿದೆ.

ಡಿಸಿಎಂ ಡಿ ಕೆ ಶಿವಕುಮಾರ್ ಇಂದು ಮಧ್ಯ ಪ್ರದೇಶ ಪ್ರವಾಸ: ದೇವಾಲಯಗಳಲ್ಲಿ ಪೂಜೆ, ನಾಳೆ ಬೆಂಗಳೂರಿಗೆ ವಾಪಸ್
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎರಡು ದಿನಗಳ ಮಧ್ಯ ಪ್ರದೇಶ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಗೆ ಗ್ವಾಲಿಯರ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ನಂತರ ಸುಮಾರು 70 ಕಿಮೀ ದೂರದ ಡಾಟಿಯಾಗೆ ತೆರಳುತ್ತಾರೆ.

ಬಿಜೆಪಿ, ಜೆಡಿಎಸ್ ನವರ ಅಸೂಯೆಗೆ ನಮ್ಮ ಬಳಿ ಮದ್ದಿಲ್ಲ: ಡಿ.ಕೆ ಶಿವಕುಮಾರ್
ನಮ್ಮ ಸರ್ಕಾರ ತಂದ ಯೋಜನೆಗಳಲ್ಲಿ ಯಾವುದೇ ಗೊಂದಲ ಇಲ್ಲ. ಬಿಜೆಪಿ, ಜನತಾ ದಳದವರಿಗೆ ಈ ಯೋಜನೆ ಜಾರಿಯನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರ ಅಸೂಯೆಗೆ ಮದ್ದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಬೆಂಗಳೂರು ಅಭಿವೃದ್ಧಿ ಕುರಿತು ಚರ್ಚೆ, ಅಭಿಪ್ರಾಯ ಸಂಗ್ರಹಕ್ಕೆ ಸರ್ವಪಕ್ಷ ಸಭೆ ಕರೆದ ಡಿಸಿಎಂ ಶಿವಕುಮಾರ್
ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ ಕೆ ಶಿವಕುಮಾರ್ ಬರುವ ಸೋಮವಾರ ಸರ್ವಪಕ್ಷ ಸಭೆ ಕರೆದಿದ್ದಾರೆ.

ಸಚಿವ ಸ್ಥಾನ ಮಿಸ್: ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್ ಭೇಟಿ ಮಾಡಿ ಡಿ ಕೆ ಶಿವಕುಮಾರ್ ಮನ ಓಲೈಕೆ?
ಕಳೆದ ಏಪ್ರಿಲ್ ನಲ್ಲಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ನಿರಾಕರಿಸಿದ ಕಾರಣ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿಗೆ ಕಾಂಗ್ರೆಸ್ ಪಕ್ಷ ಸರ್ಕಾರದಲ್ಲಿ ಉನ್ನತ ಸ್ಥಾನಮಾನ ನೀಡುವ ಬಗ್ಗೆ ಚರ್ಚೆಯಾಗುತ್ತಿದೆ.

ಡಿಸಿಎಂ ಡಿ ಕೆ ಶಿವಕುಮಾರ್ ಭೇಟಿಯಾದ ಜಗನ್ ಮೋಹನ್ ರೆಡ್ಡಿ ಸೋದರಿ ಶರ್ಮಿಳಾ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಇಡೀ ದೇಶದ ಗಮನ ಸೆಳೆದಿದ್ದು ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ವಿರೋಧ ಪಕ್ಷಗಳು ಕರ್ನಾಟಕ ರಾಜಕಾರಣದ ಮೇಲೆ ಕುತೂಹಲದಿಂದ ನೋಡುತ್ತಿವೆ.

ಇನ್ನು ಕೆಲ ಹೊತ್ತಿನಲ್ಲಿ ರಾಜ್ಯದ ಸಿಎಂ-ಡಿಸಿಎಂ ಪಟ್ಟಾಭಿಷೇಕ: ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಜೊತೆ 8 ಶಾಸಕರು ಪ್ರಮಾಣ ವಚನ
ಇನ್ನು ಕೆಲವೇ ಹೊತ್ತಿನಲ್ಲಿ ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ, 5 ಗ್ಯಾರಂಟಿಗಳನ್ನು ಜಾರಿಗೆ ತರುವುದು ಗ್ಯಾರಂಟಿ: ಡಿ ಕೆ ಶಿವಕುಮಾರ್
ರಾಜ್ಯದ ಜನತೆಗೆ ಚುನಾವಣಾ ಪೂರ್ವ ಕೊಟ್ಟ ಭರವಸೆಗಳನ್ನು ಈಡೇರಿಸುತ್ತೇವೆ. ನಾಳೆ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದೆ. ನಾಳೆಯಿಂದಲೇ ನಮ್ಮ ಗ್ಯಾರಂಟಿಗಳ ಈಡೇರಿಕೆಗೆ ಪ್ರಯತ್ನ ಮಾಡುತ್ತೇವೆ ಎಂದು ದೆಹಲಿಗೆ ತೆರಳುವ ಮುನ್ನ ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸ ಮುಂದೆ ಮಾಧ್ಯಮ ಪ್ರತಿನಿಧಿಗಳಿಗೆ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

