D K Shivakumar

ನನ್ನ ಮತ್ತು ಡಿ ಕೆ ಶಿವಕುಮಾರ್ ನಡುವಿನ ಸಂಬಂಧ ಸೌಹಾರ್ದಯುತವಾಗಿದೆ: ಸಿದ್ದರಾಮಯ್ಯ
ಕರ್ನಾಟಕ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಿರುತ್ತದೆ, ಅಧಿಕಾರಕ್ಕಾಗಿ ಇಬ್ಬರೂ ಬಡಿದಾಡಿಕೊಳ್ಳುತ್ತಾರೆ, ಇಬ್ಬರ ನಡುವೆ ಬಣವಿದೆ ಎಂದು ಸುದ್ದಿಯಾಗುತ್ತಲೇ ಇರುತ್ತದೆ.

ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರು ಮುಖ್ಯಮಂತ್ರಿ ಸೀಟಿನ ಕನಸು ಕಾಣ್ತಿದ್ದಾರೆ, ಅದು ನನಸಾಗದು: ಸಿಎಂ ಬೊಮ್ಮಾಯಿ
ಕರ್ನಾಟಕ ವಿಧಾನಸಭೆ ಚುನಾವಣೆ 2023ಕ್ಕೆ ದಿನ ಸನ್ನಿಹಿತವಾಗುತ್ತಿದೆ. ರಾಜ್ಯದ ಮುಖ್ಯಮಂತ್ರಿ ಸ್ಥಾನದ ಮೇಲೆ ಪ್ರಮುಖ ಮೂರು ಪಕ್ಷಗಳ ನಾಯಕರು ಕಣ್ಣಿಟ್ಟಿದ್ದಾರೆ.

ಪ್ರಜಾಧ್ವನಿ ಯಾತ್ರೆಯಲ್ಲಿ ಕಲಾವಿದರತ್ತ ಹಣ ಎಸೆದ ಡಿ ಕೆ ಶಿವಕುಮಾರ್: ಮಂಡ್ಯದಲ್ಲಿ ಪೊಲೀಸರಿಂದ ಎಫ್ಐಆರ್ ದಾಖಲು
ಮಂಡ್ಯದಲ್ಲಿ ಇತ್ತೀಚೆಗೆ ಪ್ರಜಾಧ್ವನಿ ಯಾತ್ರೆ ವೇಳೆ ಕಲಾವಿದರತ್ತ ಹಣ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಡಿಕೆಶಿ ವಿರುದ್ಧದ ಸಿಬಿಐ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ಏಪ್ರಿಲ್ 6 ರವರೆಗೆ ವಿಸ್ತರಿಸಿದೆ.

ಮೀಸಲಾತಿ ನೀತಿಯು ಬಿಜೆಪಿಯ ಚುನಾವಣಾ ಅಜೆಂಡಾ, ಉದ್ದೇಶ ಜನರನ್ನು ವಂಚಿಸುವುದು: ಕಾಂಗ್ರೆಸ್ ನಾಯಕರ ಆರೋಪ
ಒಕ್ಕಲಿಗರಿಗೆ 2ಸಿ, ಲಿಂಗಾಯತರಿಗೆ 2ಡಿ ಮೀಸಲಾತಿ ಘೋಷಣೆ ವಿಚಾರಕ್ಕೆ ಸಂಬಂಧಿಸಿ ನಿರ್ಮಲಾನಂದನಾಥಶ್ರೀ, ಜಯಮೃತ್ಯುಂಜಯ ಶ್ರೀಗಳಿಗೆ 25 ಬಾರಿ ಕರೆ ಮಾಡಿ ಒಪ್ಪಿಕೊಳ್ಳಿ ಎಂದು ಒತ್ತಡ ಹಾಕಿದ್ದಾರೆ. ಸ್ವಾಮೀಜಿಗಳಿಗೆಲ್ಲ ಫೋನ್ ಮಾಡಿ ಒಪ್ಪಿಕೊಳ್ಳಿ ಅಂದರೆ ಸರೀನಾ ಲಿಂಗಾಯತರು ಶೇಕಡಾ 16, ಒಕ್ಕಲಿಗರು ಶೇಕಡಾ 12 ಮೀಸಲಾತಿ ಕೇಳಿದ್ದರು.

ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಕಣದಲ್ಲಿರುವ ಪ್ರಮುಖರು ಯಾರ್ಯಾರು?
ಮೊನ್ನೆ ಯುಗಾದಿಯಂದು ಬಿಡುಗಡೆಯಾಗುತ್ತದೆ ಎಂದು ಹೇಳಲಾಗುತ್ತಿದ್ದ ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಶನಿವಾರ ಬೆಳಗ್ಗೆ ಬಿಡುಗಡೆಯಾಗಿದೆ.

ಯುಗಾದಿ ಹಬ್ಬದ ರಜೆ ಪ್ರಯುಕ್ತ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮುಂದೂಡಿಕೆ: ಡಿ ಕೆ ಶಿವಕುಮಾರ್
ವಿಧಾನಸಭೆ ಚುನಾವಣೆ 2023ರಲ್ಲಿ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಬುಧವಾರ ಯುಗಾದಿ ಹಬ್ಬದ ದಿನ ಬಿಡುಗಡೆಯಾಗುತ್ತದೆ ಎಂದು ಹೇಳಲಾಗುತ್ತದೆ. ಆದರೆ ಅದೀಗ ಮುಂದೂಡಿಕೆಯಾಗಿದೆ.

ಸಿದ್ದರಾಮಯ್ಯನವರು ಎಲ್ಲಿ ಬೇಕಾದ್ರೂ ಸ್ಪರ್ಧಿಸಿ ಗೆದ್ದುಬರುವಂತೆ ರಾಹುಲ್ ಗಾಂಧಿ ಹೇಳಿದ್ದಾರೆ: ಡಿ ಕೆ ಶಿವಕುಮಾರ್
ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಈ ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ವಿಚಾರದಲ್ಲಿ ಗೊಂದಲ ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಗೆಲ್ಲುವುದೊಂದೇ ನಮಗೆ ಮಾನದಂಡ, ಗೆಲ್ಲೋದಾದ್ರೆ ಎಂಎಲ್ಸಿಗಳನ್ನು ಅಭ್ಯರ್ಥಿ ಮಾಡಿದರೆ ತಪ್ಪಿಲ್ಲ: ಡಿ ಕೆ ಶಿವಕುಮಾರ್
ಈ ಬಾರಿಯ ವಿಧಾನಸಭೆ ಚುನಾವಣೆಗೆ ಗೆಲ್ಲುವ ಮಾನದಂಡಗಳನ್ನು ನೋಡಿಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ. ಬೇರೆ ಯಾವುದೇ ವಿಚಾರವನ್ನು ಪರಿಗಣಿಸುವುದಿಲ್ಲ. ಗೆಲ್ಲುವ ಶಕ್ತಿ ಇದ್ದರೆ ವಿಧಾನ ಪರಿಷತ್ ಸದಸ್ಯರನ್ನು ಕೂಡ ಅಭ್ಯರ್ಥಿ ಸ್ಥಾನಕ್ಕೆ ಪರಿಗಣಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

