D K Shivakumar

ಡಿ.ಕೆ.ಶಿವಕುಮಾರ್ ಮೇಲೆ ಅಸಮಾಧಾನ: ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಪತ್ರ ಬರೆಯಲು ಅಖಂಡ ಶ್ರೀನಿವಾಸ ಮೂರ್ತಿ ನಿರ್ಧಾರ
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ತಮಗೆ ಯಾವುದೇ ಬೆಂಬಲ ಸಿಗುತ್ತಿಲ್ಲ ಎಂದು ಆರೋಪಿಸಿ ಮುಂದಿನ ವಾರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆಯಲು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಆಲೋಚಿಸಿದ್ದಾರೆ ಎಂದು ತಿಳಿದುಬಂದಿದೆ.

ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ- ಅಮರ್ತ್ಯ ಹೆಗ್ಡೆ ನಿಶ್ಚಿತಾರ್ಥ: ಸಿಎಂ ಯಡಿಯೂರಪ್ಪ ಸೇರಿ ಸಚಿವರು ಭಾಗಿ
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಮೊಮ್ಮಗ, ಕೆಫೆ ಕಾಫಿ ಡೇ ಮಾಲಿಕ ದಿವಗಂತ ವಿ ಜಿ ಸಿದ್ಧಾರ್ಥ್ ಅವರ ಹಿರಿಯ ಪುತ್ರ ಅಮರ್ತ್ಯ ಹೆಗ್ಡೆ ನಿಶ್ಚಿತಾರ್ಥ ಬೆಂಗಳೂರಿನಲ್ಲಿ ನೆರವೇರಿತು.

'ಖಾಲಿ ಮನೆ'ಯಂತಾಗಿದೆ ಕಾಂಗ್ರೆಸ್, ಅನುಯಾಯಿಗಳು, ಕಾರ್ಯಕರ್ತರ ಕೊರತೆ: ಕೆಪಿಸಿಸಿ ಮುಂದೆ ಬೆಟ್ಟದಷ್ಟು ಸವಾಲು
ಕಳೆದ ಎರಡು ವರ್ಷಗಳಿಂದ ಕಾರ್ಯಕರ್ತರು ಮತ್ತು ಅನುಯಾಯಿಗಳು ಸರಿಯಾಗಿ ಕೆಲಸ ಮಾಡದೆ, ಹೊಂದಾಣಿಕೆಯಿಲ್ಲದೆ ಕಾಂಗ್ರೆಸ್ ಪಕ್ಷದ ಸ್ಥಿತಿ ಖಾಲಿ ಮನೆಯಂತಾಗಿದೆ. ಕಳೆದ ಬಾರಿ ಕಾಂಗ್ರೆಸ್ ಶಾಸಕರು ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಸರ್ಕಾರ ರಚಿಸಿದ್ದಾಗ 14 ಕ್ಷೇತ್ರಗಳ ಶಾಸಕರು ಸರ್ಕಾರದ ವಿರುದ್ಧ ತಿರುಗಿಬಿದ್ದು ಬಿಜೆಪಿಗೆ ಬೆಂಬಲ ಸೂಚಿಸಿದರು.

ಆರ್.ಆರ್.ನಗರ, ಶಿರಾದಲ್ಲಿ ಗೆದ್ದ ಕಮಲ: ಬಲ ಹೆಚ್ಚಿಸಿಕೊಂಡ ಬಿಜೆಪಿ; ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ನಾಯಕತ್ವಕ್ಕೆ ಸವಾಲು
ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದೆ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಸ್ಥಾನ ಭದ್ರವಾಗಿದೆ. ರಾಜ್ಯ ಸರ್ಕಾರ ಇದೀಗ ಅಭಿವೃದ್ಧಿ ಕೆಲಸಗಳತ್ತ ಗಮನ ಹರಿಸಿದೆ. ನಾಯಕರ ಮಧ್ಯೆ ಭಿನ್ನಮತವೇ ಸೋಲಿಗೆ ಕಾರಣ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಕೇಡರ್ ಮಟ್ಟದ ನಾಯಕರು ಆರೋಪಿಸುತ್ತಿದ್ದಾರೆ.

ನಾನೇ ಉಪ ಚುನಾವಣೆ ಸೋಲಿನ ಹೊಣೆ ಹೊರುತ್ತೇನೆ: ಡಿ.ಕೆ ಶಿವಕುಮಾರ್
ಎರಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮತದಾರ ಕೊಟ್ಟ ತೀರ್ಪನ್ನು ನಾವು ಗೌರವಯುತವಾಗಿ ಒಪ್ಪು ತ್ತೇವೆ. ಪಕ್ಷದ ಅಧ್ಯಕ್ಷನಾಗಿ ಈ ಸೋಲಿನ ಹೊಣೆ ನಾನು ಹೊರುತ್ತೇನೆಯೇ ಹೊರತು ಬೇರೆಯವರ ಮೇಲೆ ಹಾಕುವುದಿಲ್ಲ.

ಭವಿಷ್ಯದ ನಾಯಕತ್ವದ ಬಗ್ಗೆ ಬಹಿರಂಗ ಹೇಳಿಕೆ ಬೇಡ: ರಾಜ್ಯ ಕಾಂಗ್ರೆಸಿಗರಿಗೆ ಶಿಸ್ತು ಸಮಿತಿ ಸೂಚನೆ
ಪಕ್ಷ ಅಧಿಕಾರಕ್ಕೆ ಬಂದರೆ ಸರ್ಕಾರದಲ್ಲಿ ಯಾರು ಮುಖ್ಯಸ್ಥರಾಗುತ್ತಾರೆ ಎಂಬ ಬಗ್ಗೆ ಸಾರ್ವಜನಿಕ ಹೇಳಿಕೆಗಳನ್ನು ನೀಡುವುದನ್ನು ತಡೆಯಬೇಕೆಂದು ರಾಜ್ಯ ಕಾಂಗ್ರೆಸ್ ಶಿಸ್ತು ಸಮಿತಿ ನಾಯಕರು ಮತ್ತು ಕಾರ್ಯಕರ್ತರಿಗೆ ಒತ್ತಾಯಿಸಿದೆ.

ಆರ್.ಆರ್.ನಗರದಲ್ಲಿ ಕಡಿಮೆ ಮತದಾನವಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈಫಲ್ಯವೇ ಕಾರಣ: ಡಿ.ಕೆ. ಶಿವಕುಮಾರ್
ಆರ್ ಆರ್ ನಗರ ಮತ್ತು ಶಿರಾ ಕ್ಷೇತ್ರಗಳ ಉಪ ಚುನಾವಣೆ ಮುಗಿದು ಎರಡು ದಿನಗಳು ಕಳೆದಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದರೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಿನ್ನೆ ವಿಭಿನ್ನ ಹೇಳಿಕೆ ನೀಡಿರುವುದು ಅಚ್ಚರಿ ತಂದಿದೆ.

ನ.3ರ ಉಪ ಚುನಾವಣೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ
ನಾಡಿದ್ದು ನವೆಂಬರ್ 3ರಂದು ನಡೆಯಲಿರುವ ಆರ್ ಆರ್ ನಗರ ಮತ್ತು ಶಿರಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದರೂ ಸಹ ಬಿ ಎಸ್ ಯಡಿಯೂರಪ್ಪ ಸರ್ಕಾರಕ್ಕೆ ಯಾವುದೇ ರೀತಿಯಲ್ಲಿಯೂ ಧಕ್ಕೆ ತರದು. ಆದರೆ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುವುದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಬಹಳ ಮುಖ್ಯವಾಗಿದೆ.

ಡಿಕೆಶಿ ಒಕ್ಕಲಿಗ ಜಾತಿಯನ್ನು ಗುತ್ತಿಗೆ ತೆಗೆದುಕೊಂಡಿದ್ದಾರೆಯೇ?: ಹೆಚ್‌ಡಿಕೆ ಗರಂ
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒಕ್ಕಲಿಗ ಜಾತಿಯನ್ನು ಗುತ್ತಿಗೆ ತೆಗೆದುಕೊಂಡಿದ್ದಾರೆಯೇ?. ಇವರೇನು ಜಾತಿ ರಕ್ಷಕರೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

