D K Shivakumar

ಉಪ ಚುನಾವಣೆ ಹೊಸ್ತಿಲಿನಲ್ಲಿ ಡಿ ಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ: ಅನುಕೂಲಕ್ಕೆ ಬಳಸಿಕೊಳ್ಳುವ ಸಾಧ್ಯತೆ
ಕಳೆದ ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ನಿವಾಸ, ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ಹಠಾತ್ ದಾಳಿ, ಶಿರಾ ಮತ್ತು ಆರ್ ಆರ್ ನಗರ ಕ್ಷೇತ್ರಗಳ ಉಪ ಚುನಾವಣೆ ಸನ್ನಿಹಿತವಾಗಿರುವ ಸಂದರ್ಭದಲ್ಲಿ ಹೊಸ ಆಯಾಮ ಪಡೆದುಕೊಳ್ಳಲಿದೆ.

ಡಿ ಕೆ ಬ್ರದರ್ಸ್ ಮೇಲೆ ಸಿಬಿ'ಐ': ದಾಳಿ ವೇಳೆ 50 ಲಕ್ಷ ರೂ. ನಗದು ವಶ, ರಾಜಕೀಯ ಷಡ್ಯಂತ್ರ ಎಂದು ಕಾಂಗ್ರೆಸ್ ಆಕ್ರೋಶ
ಕೇಂದ್ರ ತನಿಖಾ ದಳ(ಸಿಬಿಐ) ಸೋಮವಾರ ಬೆಳ್ಳಂಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಅವರ ಸೋದರ ಸಂಸದ ಡಿ ಕೆ ಸುರೇಶ್ ಅವರಿಗೆ ಸೇರಿದ 14 ಸ್ಥಳಗಳ ಮೇಲೆ ಏಕಾಏಕಿ ದಾಳಿ ನಡೆಸಿ ಶೋಧ ವೇಳೆ ಸುಮಾರು 50 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ.

'ಕನಕಪುರ ಬಂಡೆ'ಗೆ ಮತ್ತಷ್ಟು ಕಂಟಕ: ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ಎಫ್ಐಆರ್ ದಾಖಲು
ಸಿಬಿಐ ದಾಳಿ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ನಗರದ ಸಿಬಿಐ ಘಟಕದಲ್ಲಿ ಎಫ್ಐಆರ್ ದಾಖಲಾಗಿದೆ.

ಡಿ.ಕೆ. ಶಿವಕುಮಾರ್ ನಿವಾಸ ಮೇಲೆ ಸಿಬಿಐ ದಾಳಿ ಮೋದಿ ಸರ್ಕಾರದ ರಾಜಕೀಯ ದುಷ್ಟತನದ ಪರಮಾವಧಿ: ಸಿದ್ದರಾಮಯ್ಯ
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ನಡೆಸಿರುವ ದಾಳಿ ಬಿಜೆಪಿಯ ರಾಜಕೀಯ ಷಡ್ಯಂತ್ರ, ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಮಾಡುತ್ತಿರುವ ಕುತಂತ್ರ ಎಂದು ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸಿಬಿಐ ಕಣ್ಣಿಗೆ ಸಿಎಂ ಯಡಿಯೂರಪ್ಪನವರ ಮಗನ ಭ್ರಷ್ಟಾಚಾರ ಕಾಣಿಸುವುದಿಲ್ಲವೇ?: ದಿನೇಶ್ ಗುಂಡೂರಾವ್
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿ ಕಾಂಗ್ರೆಸ್ ನಾಯಕರ ಮಾನಸಿಕ ಸ್ಥೈರ್ಯ ಕಸಿದುಕೊಳ್ಳಲು ಸಾಧ್ಯವಿಲ್ಲ, ಅದು ಬಿಜೆಪಿ ನಾಯಕರ ಭ್ರಮೆಯಷ್ಟೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.

ಡಿಕೆ ಬ್ರದರ್ಸ್ ಗೆ ಬೆಳ್ಳಂಬೆಳಗ್ಗೆ ಸಿಬಿಐ ಶಾಕ್: 14 ಕಡೆಗಳಲ್ಲಿ 60ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ, ದಾಖಲೆಗಳ ಪರಿಶೀಲನೆ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಅವರ ಸೋದರ ಸಂಸದ ಡಿ ಕೆ ಸುರೇಶ್ ಅವರಿಗೆ ಸೋಮವಾರ ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ.

ಡಿ ಕೆ ಶಿವಕುಮಾರ್ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ, ಈ ಬಗ್ಗೆ ತನಿಖೆ ನಡೆಸಿ:ಡಿ ಕೆ ಸುರೇಶ್ ಒತ್ತಾಯ
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಫೋನ್ ಕರೆಗಳನ್ನು ಕದ್ದಾಲಿಸಲಾಗುತ್ತಿದೆ, ಈ ಬಗ್ಗೆ ಸರಿಯಾದ ತನಿಖೆ ನಡೆಯಬೇಕು ಎಂದು ಸಂಸದ ಹಾಗೂ ಅವರ ಸೋದರ ಡಿ ಕೆ ಸುರೇಶ್ ಒತ್ತಾಯಿಸಿದ್ದಾರೆ.

ಸಚಿವರು ಕೊವಿಡ್-19 ಆಸ್ಪತ್ರೆಗಳಿಗೆ ಭೇಟಿ ನೀಡಿ, ವೈದ್ಯರು, ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಬೇಕು: ಡಿಕೆಶಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಇತರೆ ಮುಖಂಡರ ಜೊತೆಗೆ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ಪೂರ್ವನಿಗದಿಯಂತೆ ಕೋವಿಡ್ ಸೋಂಕಿತರ ಕುಶಲೋಪಚರಿ ವಿಚಾರಿಸಲು ಮುಂದಾಗಿದ್ದರು. ಆದರೆ ಅವರಿಗೆ ವಿಕ್ಟೋರಿಯಾ....

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕಾರ; ಒಗ್ಗಟ್ಟಿನ ಮಂತ್ರ ಘೋಷಣೆ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಗುರುವಾರ ಪದಗ್ರಹಣ ಸ್ವೀಕರಿಸಿದ್ದಾರೆ. ನಿಕಟಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಡಿ ಕೆ ಶಿವಕುಮಾರ್ ಅವರಿಗೆ ಅಧ್ಯಕ್ಷ ಸ್ಥಾನದ ಅಧಿಕಾರ ಹಸ್ತಾಂತರಿಸುವ ಮೂಲಕ ಪದಗ್ರಹಣ ಸಮಾರಂಭ ನಡೆಯುತ್ತಿದೆ.

