D K Suresh

ಮಾಜಿ ಸಿಎಂ ಮನೆಗೆ ಹಾಲಿ ಸಿಎಂ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಫ್ಯಾಮಿಲಿ ಬ್ರೇಕ್ ಫಾಸ್ಟ್ ಮೀಟಿಂಗ್-Video
ಇಂದು ಬೆಳಗ್ಗೆ ಪತ್ನಿ ಹಾಗೂ ಸಹೋದರ ಜೊತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಡಿ ಕೆ ಶಿವಕುಮಾರ್ ಕೆಲ ಹೊತ್ತು ಕಳೆದರು, ಸಿದ್ದರಾಮಯ್ಯ ಅವರಿಗೆ ಉಡುಗೊರೆ ನೀಡಿ ಬೆಳಗಿನ ಉಪಾಹಾರ ಸೇವಿಸಿ ಮಾತುಕತೆ ನಡೆಸಿ ಬಂದಿದ್ದಾರೆ.

ತಮಿಳುನಾಡು ಚುನಾವಣೆ: ರಾಹುಲ್ ಗಾಂಧಿ ಪ್ರಚಾರ ಕಾರ್ಯಕ್ರಮದ ಉಸ್ತುವಾರಿ ಡಿ.ಕೆ ಸುರೇಶ್ ಹೆಗಲಿಗೆ!
ರಾಹುಲ್ ಗಾಂಧಿ ಅವರು ಏಪ್ರಿಲ್ 18ರಂದು ತಮಿಳುನಾಡಿಗೆ ತೆರಳಲಿದ್ದು, ಪೊನ್ನೇರಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ಪೂರ್ವಸಿದ್ಧತೆಯಲ್ಲಿ ತೊಡಗಿರುವ ಡಿ.ಕೆ. ಸುರೇಶ್ ಅವರು ಸಮಾವೇಶ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು

'ನನ್ನ ಅಣ್ಣನಿಗೆ ಹಣೆಬರಹವಿದ್ದರೆ ಮುಖ್ಯಮಂತ್ರಿ ಆಗುತ್ತಾರೆ': ಡಿ.ಕೆ ಸುರೇಶ್
ಡಿಕೆ ಶಿವಕುಮಾರ್ ಬೆಂಬಲಿಗ ಶಾಸಕರು ನಾಯಕತ್ವ ಬದಲಾವಣೆ ಕುರಿತು ಸ್ಪಷ್ಟನೆ ಪಡೆಯಲು ಪಕ್ಷದ ಹೈಕಮಾಂಡ್ ನ್ನು ಭೇಟಿಯಾಗಲು ದೆಹಲಿ ಪ್ರವಾಸ ಯೋಜಿಸಿರುವ ಕುರಿತು ತಮಗೆ ಮಾಹಿತಿ ಇಲ್ಲ ಎಂದು ಕೂಡ ಸುರೇಶ್ ಹೇಳಿದರು.

'ಅಧಿಕಾರ ಶಾಶ್ವತವಲ್ಲ, ತಾಳ್ಮೆಯೂ ಶಾಶ್ವತ ಅಲ್ಲ, ನಮ್ಮಣ್ಣನ ಹಣೆಬರಹದಲ್ಲಿ ಇದ್ದರೆ ಸಿಎಂ ಆಗ್ತಾರೆ': ಡಿ.ಕೆ ಸುರೇಶ್; Video
ಪಕ್ಷದ ವರಿಷ್ಠ, ಲೋಕಸಭೆ ನಾಯಕ ರಾಹುಲ್ ಗಾಂಧಿ ಅವರು ತಾಳ್ಮೆಯಿಂದ ಇರಿ ಎಂದು ಹೇಳಿದ್ದಾರೆ, ಮೈಸೂರಿನಲ್ಲಿ ರಾಹುಲ್ ಗಾಂಧಿ ಅವರನ್ನು ಡಿಕೆ ಶಿವಕುಮಾರ್ ಅವರು ಭೇಟಿ ಮಾಡಿದಾಗಲೂ ಕೂಡ ಅದೇ ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು.

'ದಕ್ಷಿಣ ಕನ್ನಡದಲ್ಲಿ ರಕ್ತದಾಹ ನಿಲ್ಲಿಸಿ, ಧರ್ಮಸ್ಥಳದ ಪಾವಿತ್ರ್ಯತೆ ಉಳಿಸಿ; ನಮ್ಮ ಬಳಿ ಜನಬೆಂಬಲವೂ ಇಲ್ಲ, ರಾಜಣ್ಣ ಅವರಷ್ಟೂ ತಿಳುವಳಿಕೆಯೂ ಇಲ್ಲ'
ಕೇವಲ ಸ್ವಾಮಿ ಮಂಜುನಾಥನ ಬಗ್ಗೆ ಮಾತ್ರ ಮಾತನಾಡಿದ್ದಾರೆ. ಆಗ ಸುಖಾಸುಮ್ಮನೆ ಆರೋಪಗಳನ್ನು ಮಾಡಿ, ಈಗ ಕೊಳಕು ರಾಜಕಾರಣದಿಂದ ಆಚೆ ಬರಲು ಧರ್ಮಸ್ಥಳದ ಯಾತ್ರೆ ಮಾಡಲಾಗಿದೆ.

'KMF ಅಧ್ಯಕ್ಷಗಿರಿಗೆ ಅಂಗಲಾಚುತ್ತಿದ್ದ ಸದಾನಂದಗೌಡ ಮುಖ್ಯಮಂತ್ರಿಯಾದ್ರು; ಯಾರ ಹಣೆಯಲ್ಲಿ ಏನು ಬರೆದಿದೆಯೋ; ಡಿಕೆಶಿ CM ಆಗುವ ನಂಬಿಕೆ ಈಗಲೂ ಇದೆ'
ಶಾಸಕರಾಗಬೇಕು, ಸಂಸದರಾಗಬೇಕು, ಮಂತ್ರಿ, ಮುಖ್ಯಮಂತ್ರಿಯಾಗಬೇಕು ಎಂದು ಹಣೆಯಲ್ಲಿ ಬರೆದಿರಬೇಕು. ಅದು ಭಗವಂತನ ಇಚ್ಛೆ, ಜನರ ಆಶೀರ್ವಾದ. ಯಾರ ಹಣೆಯಲ್ಲಿ ಏನು ಬರೆದಿದೆಯೋ?

ಕೆಪಿಸಿಸಿ ಅಧ್ಯಕ್ಷ ಹುದ್ದೆ ಖಾಲಿ ಇಲ್ಲ, ನಾನು ರೇಸ್ ನಲ್ಲಿ ಇಲ್ಲ: ಡಿ.ಕೆ ಸುರೇಶ್
ಒಂದಷ್ಟು ಜನರು ನನ್ನನ್ನು ಖುಷಿಪಡಿಸಲು, ಮತ್ತೆ ಕೆಲವರು ಇನ್ನೊಬ್ಬರನ್ನು ಖುಷಿ ಪಡಿಸಲು ಹಾಗೂ ತಮ್ಮ ಅನುಕೂಲಕ್ಕಾಗಿ ಈ ರೀತಿ ಹೆಸರುಗಳನ್ನು ಹೇಳುತ್ತಿರುತ್ತಾರೆ.

ಚನ್ನಪಟ್ಟಣ ಉಪ ಚುನಾವಣೆ: ಕೈ ಅಭ್ಯರ್ಥಿಯಾಗಲು ಒತ್ತಡವಿದೆ- ಡಿಕೆ ಸುರೇಶ್
ಈ ಭಾಗದ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಪಕ್ಷದ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ. ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಚನ್ನಪಟ್ಟಣ ತಾಲೂಕಿನ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದೇವೆ. ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆ

ಯಾರ ವೈಯಕ್ತಿಕ ಪ್ರತಿಷ್ಠೆಗೂ ಪಕ್ಷದಲ್ಲಿ ಅವಕಾಶ ನೀಡುವುದಿಲ್ಲ: ಡಿ ಕೆ ಶಿವಕುಮಾರ್
ಕೋಲಾರದಲ್ಲಿ ಎಲ್ಲಾ ನಾಯಕರು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡಲಿದ್ದಾರೆ. ಯಾರ ವೈಯಕ್ತಿಕ ಪ್ರತಿಷ್ಠೆಗೂ ಪಕ್ಷದಲ್ಲಿ ಅವಕಾಶ ನೀಡುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

