ರಾಜ್ಯನಂದಿನಿ ಉತ್ಪನ್ನದ ಮೇಲೆ ಹಿಂದಿ; ನಂದಿನಿ ಕನ್ನಡಿಗರ ಸ್ವಾಭಿಮಾನವೇ ಹೊರತು ಅಮುಲ್ ಅಡಿಯಾಳಲ್ಲ: ಹೆಚ್.ಡಿ. ಕುಮಾರಸ್ವಾಮಿ
ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ 'ದಹಿ' ಎಂದು ಮುದ್ರಿಸಿರುವುದು. ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್ಗೆ ಆದೇಶ ನೀಡಿರುವುದು ತಪ್ಪು ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.