dakshina kannada

ಕರಾವಳಿಯಲ್ಲಿ ನಿರ್ಬಂಧ ಸಡಿಲಿಕೆ: ನೈಟ್ ಕರ್ಫ್ಯೂ ತೆರವು, ಸೆಕ್ಷನ್ 144 ಮುಂದುವರಿಕೆ: ಡಿಸಿ ಕೆ.ವಿ. ರಾಜೇಂದ್ರ
ಕರಾವಳಿಯಲ್ಲಿ ನಡೆದಿದ್ದ ಅಹಿತಕರ ಘಟನೆಗಳು ಮತ್ತು ಸರಣಿ ಹತ್ಯೆಗಳ ಬಳಿಕ ಹೇರಲಾಗಿದ್ದ ನಿರ್ಬಂಧಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಅವರು ಸಡಿಲಿಸಿದ್ದಾರೆ.

10 ದಿನಗಳ ಅಂತರದಲ್ಲಿ ಮೂರು ಕೊಲೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಕಟ್ಟೆಚ್ಚರ
ಕೇವಲ ಹತ್ತು ದಿನಗಳ ಅಂತರದಲ್ಲಿ ಮೂರು ಕೊಲೆಗಳು ನಡೆದುಹೋದ ನಂತರ ಕೋಮುಸೂಕ್ಷ್ಮವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಜಿಲ್ಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಕೇರಳ ಗಡಿಯಲ್ಲಿನ ಸ್ಥಳಗಳು ಸೇರಿದಂತೆ ಹಲವೆಡೆ ಚೆಕ್‌ಪೋಸ್ಟ್‌ಗಳನ್ನು ಹಾಕಲಾಗಿದೆ.

ಮಂಗಳೂರು: ನಾಳೆ ಶಾಂತಿ ಸಭೆ, ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಅಂಗಡಿ ಮುಂಗಟ್ಟು ಬಂದ್
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಬೆನ್ನಲ್ಲೇ ಮಂಗಳೂರಿನಲ್ಲಿ ಗುರುವಾರ ರಾತ್ರಿ ಮತ್ತೊಂದು ಹತ್ಯೆ ನಡೆದಿದ್ದು, ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರಲು ಜಿಲ್ಲಾಡಳಿತ ಶನಿವಾರ ಶಾಂತಿ ಸಭೆ ಆಯೋಜಿಸಿದೆ...

ಪ್ರವೀಣ್ ಹತ್ಯೆ: ಬೆಳ್ಳಾರೆ ಉದ್ವಿಗ್ನ, ಸೆಕ್ಷನ್ 144 ಜಾರಿ; ನಳಿನ್ ಕಾರಿಗೆ ಮುತ್ತಿಗೆ, ಪೊಲೀಸರಿಂದ ಲಾಠಿ ಚಾರ್ಚ್!
ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು ಹಿಂದೂ ಪರ ಕಾರ್ಯಕರ್ತರು ರಸ್ತೆಗಿಳಿದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ದಕ್ಷಿಣ ಕನ್ನಡ: ದುಷ್ಕರ್ಮಿಗಳಿಂದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ
ಕರಾವಳಿಯಲ್ಲಿ ಮತ್ತೆ ನೆತ್ತರು ಹರಿದಿದ್ದು, ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ಬಕ್ರೀದ್ ಭೇಟಿ ವೇಳೆ ವಿವಿಧ ಸಮುದಾಯದ ಹೆಣ್ಣು ಮಕ್ಕಳಿಗೆ ಬೆದರಿಕೆ: ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು!
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಹಿಂದೂತ್ವ ಪರ ಸಂಘಟನೆಗೆ ಸೇರಿದ ನಾಲ್ವರ ವಿರುದ್ಧ ವಿವಿಧ ಸಮುದಾಯದ ಇಬ್ಬರು ಯುವತಿಯರಿಗೆ ಬೆದರಿಕೆ ಮತ್ತು ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ದಕ್ಷಿಣ ಕನ್ನಡ: ಕಾಣಿಯೂರಿನಲ್ಲಿ ಹೊಳೆಗೆ ಬಿದ್ದಿದ್ದ ಕಾರು; ಕೊಚ್ಚಿಹೋಗಿದ್ದ ಇಬ್ಬರು ಯುವಕರ ಶವ ಪತ್ತೆ
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಕಾಣಿಯೂರಿನಲ್ಲಿ ಹೊಳೆಗೆ ಕಾರು ಬಿದ್ದು ನಾಪತ್ತೆಯಾಗಿದ್ದ ಇಬ್ಬರು ಯುವಕರ ಶವ ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ. ಕಾರು ಬಿದ್ದ 250 ಮೀಟರ್ ದೂರದಲ್ಲಿ ಇಬ್ಬರ ಶವ ಪತ್ತೆಯಾಗಿದೆ.

ಭಾರೀ ಮಳೆ: ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಕರ್ನಾಟಕದ ನೇತ್ರಾವತಿ ನದಿ
ರಾಜ್ಯಾದ್ಯಂತ ವ್ಯಾಪಕ ಮಳೆ ಮುಂದುವರೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೇತ್ರಾವತಿ ನದಿಯಲ್ಲಿ ಭಾನುವಾರ ನೀರಿನ ಮಟ್ಟ 8.5 ಮೀಟರ್‌ನಷ್ಟು ಏರಿಕೆಯಾಗಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಭಾನುವಾರ ಮುಂಜಾನೆ ಭೂಮಿ ಕಂಪಿಸಿದ ಅನುಭವವಾಗಿದೆ. ತಾಲೂಕಿನ ಸಂಪಾಜೆ ಮತ್ತು ಸಮೀಪದ ಅರಂತೋಡು, ತೊಡಿಕಾನ, ಚೆಂಬು ಮತ್ತು ಕಲ್ಲಪಲ್ಲಿ ನಿವಾಸಿಗಳು ಬೆಳಗ್ಗೆ 6.23ಕ್ಕೆ ಕಂಪಿಸಿದ ಅನುಭವವಾಗಿದೆ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.

