dakshina kannada

ದಕ್ಷಿಣ ಕನ್ನಡ, ಉಡುಪಿಗೆ ಕೊರೋನಾಘಾತ: ಕರಾವಳಿಗೆ ಕಂಟಕವಾದ ಮಹಾರಾಷ್ಟ್ರ ಸೋಂಕು
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಕೊರೋನಾ ಸ್ಫೋಟಗೊಂಡಿದ್ದು, ಒಂದೇ ದಿನ ಬರೋಬ್ಬರಿ 53 ಮಂದಿಯಲ್ಲಿ ಹೊಸದಾಗಿ ವೈರಸ್ ದೃಢಪಟ್ಟಿದೆ.

ಕೊರೋನಾ: ದಕ್ಷಿಣ ಕನ್ನಡ, ಉಡುಪಿಗೆ ಕಂಟಕವಾದ ಮುಂಬೈ, ಒಂದೇ ದಿನ 21 ಮಂದಿಯಲ್ಲಿ ಸೋಂಕು ಪತ್ತೆ
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ ಬರೋಬ್ಬರಿ 21 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಎರಡೂ ಜಿಲ್ಲೆಗಳಲ್ಲಿ ಮುಂಬೈನ ಕೊರೋನಾ ಸೋಂಕು ಆತಂಕ ಸೃಷ್ಟಿಸಿದೆ.

ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆ: ಓರ್ವ ಸಾವು, ಅಕ್ಕಿ ಗೋದಾಮು, ತರಕಾರಿ ಮಾರುಕಟ್ಟೆಗೆ ಹಾನಿ
ನಗರದಲ್ಲಿ ಸೋಮವಾರ ಮುಂಜಾನೆ ಗುಡುಗು ಸಿಡಿಲು, ಗಾಳಿ ಸಹಿತ ಭಾರಿ ಮಳೆ ಸುರಿಯಿತು. ಬೆಳಗ್ಗೆ 5.00 ಗಂಟೆ ಸುಮಾರಿಗೆ ಆರಂಭಗೊಂಡು 9.30ರ ತನಕವೂ ಜೋರಾಗಿ ಮಳೆಯಾಯಿತು. ಅಲ್ಲಲ್ಲಿ ಹಾನಿ ಸಂಭವಿಸಿದರೆ, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.

ದಕ್ಷಿಣ ಕನ್ನಡದಲ್ಲಿ ಕೊರೋನಾಗೆ ಮತ್ತೊಂದು ಬಲಿ: ರಾಜ್ಯದಲ್ಲಿ ಸಾವಿನ ಸಂಖ್ಯೆ 33ಕ್ಕೆ ಏರಿಕೆ!
ರಾಜ್ಯಕ್ಕೆ ಕೊರೋನಾಘಾತ ಮುಂದುವರೆದಿದ್ದು ದಕ್ಷಿಣ ಕನ್ನಡದಲ್ಲಿ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಹೊರ ವಿಭಾಗ ರೋಗಿಗಳ ಮಾಹಿತಿ ಹಂಚಿಕೊಳ್ಳುವಲ್ಲಿ ವಿಳಂಬ: ಸಮನ್ವಯ ಕೊರತೆ
ಭಟ್ಕಳದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗಿರುವುದನ್ನು ಕಂಡರೆ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಮತ್ತು ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲಾಡಳಿತಗಳ ನಡುವೆ ಸಮನ್ವಯ ಕೊರತೆ ಎದ್ದು ಕಾಣುತ್ತಿದೆ.

ದಕ್ಷಿಣ ಕನ್ನಡ: ಕೊರೋನಾ ಸೋಂಕಿನ ಮೂಲ ಹುಡುಕಲು ಕೆಪಿಸಿಸಿ ಒತ್ತಾಯ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಸೋಂಕಿನ ನೈಜ ಮೂಲ ಹುಡುಕಲು ವಿಶೇಷ ತನಿಖಾಧಿಕಾರಿಯನ್ನು ನೇಮಕಗೊಳಿಸುವಂತೆ ಕೆಪಿಸಿಸಿ ವಕ್ತಾರ ಪಿವಿ ಮೋಹನ್ ಆಗ್ರಹಿಸಿದ್ದಾರೆ.

ಕೊರೋನಾ: ದಕ್ಷಿಣ ಕನ್ನಡದಲ್ಲಿ 3ನೇ ಸಾವು, ಬಂಟ್ವಾಳ ಮೂಲದ ಮಹಿಳೆ ಮಹಾಮಾರಿಗೆ ಬಲಿ
ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಮೂಲದ 67 ವರ್ಷದ ಮಹಿಳೆಯೊಬ್ಬರು ಗುರುವಾರ ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಇದರೊಂದಿಗೆ ಕೊರೋನಾ ವೈರಸ್'ನ ಕರಿಛಾಯೆ ಆವರಿಸಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡಕ್ಕೆ ಹೊರ ರಾಜ್ಯದ ಮೀನು ವಾಹನ ಪ್ರವೇಶ ತಕ್ಷಣ ನಿರ್ಬಂಧ: ಸಚಿವ ಕೋಟ ಶ್ರೀನಿವಾಸ ಪೂಜಾರಿ.
ಮಂಗಳೂರಿನ ಮಾರುಕಟ್ಟೆಗಳಲ್ಲಿ ಸಾಮಾಜಿಕ ಅಂತರದ ಸಮಸ್ಯೆ ಇರುವುದರಿಂದ ಮತ್ತು ಕೊರೋನದ ಗಂಭೀರ ಸಮಸ್ಯೆ ಇರುವುದರಿಂದ ಹೊರ ರಾಜ್ಯದಿಂದ ಜಿಲ್ಲೆಗೆ ಬರುವ ಮೀನು ವಾಹನಗಳಿಗೆ ತಕ್ಷಣವೇ ನಿರ್ಬಂಧಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿದ್ದಾರೆ.

ಕೊರೋನಾ ವೈರಸ್: ದಕ್ಷಿಣ ಕನ್ನಡದಲ್ಲಿ ಅಗತ್ಯವೆನಿಸಿದರೆ ಕಠಿಣ ಕ್ರಮ: ಸಚಿವ ಕೋಟ ಪೂಜಾರಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳು ಹೆಚ್ಚಳವಾಗುತ್ತಿರುವುದರಿಂದ ಅಗತ್ಯವೆನಿಸಿದರೆ ಜಿಲ್ಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಡಳಿತಕ್ಕೆ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.

