dakshina kannada

ಕೋವಿಡ್-19: ಮೃತದೇಹದಿಂದ ಕೊರೋನಾ ಸೋಂಕಿಗೆ ಒಳಗಾಗುವ ಸಾಧ್ಯತೆ ಇಲ್ಲ; ದ.ಕ. ಜಿಲ್ಲಾಧಿಕಾರಿ ಸ್ಪಷ್ಟನೆ
ಕೊರೋನಾ ವೈರಸ್ ಸೋಂಕಿತ 75 ವರ್ಷದ ಮಹಿಳೆ ಮೃತದೇಹದ ಅಂತ್ಯಕ್ರಿಯೆ ವಿರುದ್ಧ ಸ್ಥಳೀಯರು ನಡೆಸಿದ ಪ್ರತಿಭಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ಶುಕ್ರವಾರ ಸ್ಪಷ್ಟನೆ ನೀಡಿ, ಮೃತದೇಹದಿಂದ ಯಾರೊಬ್ಬರಿಗೂ ಸೋಂಕು ತಗುಲುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ.

ಗೊಂದಲ, ಆತಂಕ ಸೃಷ್ಟಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಎರಡನೇ ಕೊರೋನಾ ಸೋಂಕಿತೆ ವೃದ್ಧೆಯ ಅಂತ್ಯ ಸಂಸ್ಕಾರ
ಕೊರೋನಾ ಸೋಂಕಿತ 75 ವರ್ಷ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಂಗಳೂರು ಸಮೀಪ ಪಚನಾಡಿ ಸ್ಥಳೀಯರು ಅಡ್ಡಿಪಡಿಸಿದ್ದರಿಂದ ಅಧಿಕಾರಿಗಳು ಮತ್ತು ಪೊಲೀಸರು ಸೇರಿ ಮಂಗಳೂರು ನಗರದ ಹೊರವಲಯದಲ್ಲಿ ಪೊಲೀಸರ ತೀವ್ರ ಭದ್ರತೆ ನಡುವೆ ಅಂತ್ಯಸಂಸ್ಕಾರ ಮಾಡಬೇಕಾದ ಪ್ರಸಂಗ ಶುಕ್ರವಾರ ಬೆಳಗ್ಗೆ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಉದ್ಯೋಗಿಗೆ 14 ದಿನ ಕ್ವಾರಂಟೈನ್
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಯೊಬ್ಬರನ್ನು ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಬುಧವಾರ ಕ್ವಾರಂಟೈನ್‍ಗೆ ಕಳುಹಿಸಲಾಗಿದೆ.

ಮಂಗಳೂರು: ಕೊರೋನಾದಿಂದ ಮೃತಪಟ್ಟ ಮಹಿಳೆಯ ನೆರೆಮನೆಯಾಕೆಗೆ ಸೋಂಕು ದೃಢ
ಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ 67 ವರ್ಷ ಪ್ರಾಯದ ವೃದ್ಧೆಯೊಬ್ಬರಿಗೆ ಕೊವಿಡ್ - 19 ಪಾಸಿಟಿವ್ ಇರುವುದು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.

ಲಾಕ್ ಡೌನ್ ಎಫೆಕ್ಟ್: ಸಂಕಷ್ಟದಲ್ಲಿ ಉಡುಪಿ, ದಕ್ಷಿಣ ಕನ್ನಡದ 2 ಲಕ್ಷ ಕುಟುಂಬಗಳು!
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸುಮಾರು 2 ಲಕ್ಷ ಬೀಡಿ ಕಾರ್ಮಿಕರು ಲಾಕ್ ಡೌನ್ ಎಫೆಕ್ಟ್ ನಿಂದಾಗಿ ಸಂಕಷ್ಟಕ್ಕೀಡಾಗಿದ್ದಾರೆ. ಒಂಟಿ ಮಹಿಳೆಯರು, ವಿಧವೆಯರು, ಸಂಸಾರದ ನಿರ್ವಹಣೆ ಜವಾಬ್ದಾರಿ ಹೊತ್ತ ಹೆಚ್ಚಿನ ಮಹಿಳೆಯರು ಬೀಡಿ ಕಟ್ಟುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದು, ಪ್ರಸ್ತುತ ಅವರ ಸಂಸಾರದ ನಿರ್ವಹಣೆ ಕಠಿಣವಾಗಿದೆ.

ಕರ್ನಾಟಕ-ಕೇರಳ ಗಡಿಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ, ಪೇದೆಗೆ ಗಾಯ
ಕೊರೋನಾ ವೈರಸ್ ಸೋಂಕು ಹಿನ್ನಲೆಯಲ್ಲಿ ಕರ್ನಾಟಕ ಕೇರಳ ಸಂಪರ್ಕಿಸುವ ಗಡಿ ರಸ್ತೆಯನ್ನು ಮುಚ್ಚಿರುವಂತೆಯೇ ಅತ್ತ ಕೇರಳ ಮೂಲದ ಅಪರಿಚತ ಯುವಕರು ಗಡಿಯಲ್ಲಿ ಕರ್ತವ್ಯ ನಿರತ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಹಲ್ಲೆ ಮಾಡಿದ್ದಾರೆ.

ದಕ್ಷಿಣ ಕನ್ನಡ: ಶಟರ್ ಮುರಿದು ಲಕ್ಷಾಂತರ ಬೆಲೆಯ ಮದ್ಯ ಕಳವು
ಎಂಎಸ್ ಐಎಲ್ ನ ವೈನ್ಸ್ ಅಂಗಡಿಗೆ ನುಗ್ಗಿದ ಕಳ್ಳರು ಸುಮಾರು ೧ ಲಕ್ಷ ಮೌಲ್ಯದ ಮದ್ಯವನ್ನು ಕಳವುಗೈದಿರುವ ಘಟನೆ ಕುತ್ತಾರು ನಿತ್ಯಾನಂದನಗರದಲ್ಲಿ ಬೆಳಕಿಗೆ ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ದಿನಸಿ ಪೂರೈಕೆ ಇಲ್ಲ, ಹಾಲು, ಇಂಧನ, ಗ್ಯಾಸ್, ಪತ್ರಿಕೆಗೆ ಸಮಸ್ಯೆಯಿಲ್ಲ!
ದಿನಸಿ, ಹಾಲು ಮತ್ತು ಇತರ ಅಗತ್ಯ ವಸ್ತುಗಳ ಕೊಡು-ಕೊಳ್ಳುವಿಕೆಗೆ ವಿನಾಯ್ತಿ ನೀಡಲಾಗಿದ್ದರೂ ಕೂಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ದಿನಸಿ ಮತ್ತು ಹಾಲುಗಳ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿತ್ತು. ಅದಕ್ಕೆ ಕಾರಣ ನೆರೆಯ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿರುವುದು.

ಕೊರೋನಾ: ದಕ್ಷಿಣ ಕನ್ನಡ ಜಿಲ್ಲೆಗೆ 28 ಲಕ್ಷ ರೂ. ಮೌಲ್ಯದ ವೈದ್ಯಕೀಯ ಸಲಕರಣೆಗಳ ನೆರವು ನೀಡಿದ ಸುಧಾ ಮೂರ್ತಿ
ಮಾರಕ ಕೊರೋನಾ ಸೋಂಕು ನಿಯಂತ್ರಿಸಲು ದಕ್ಷಿಣ ಕನ್ನಡ ಜಿಲ್ಲೆಗೆ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾ ಮೂರ್ತಿ ನೆರವು ನೀಡಿದ್ದಾರೆ.

