ದೇಶಛತ್ತೀಸಗಢದ ದಾಂತೇವಾಡದಲ್ಲಿ ಸ್ಫೋಟ: ಇನ್ನೂ ಎಂಟು ನಕ್ಸಲರ ಬಂಧನ, ಬಂಧಿತರ ಸಂಖ್ಯೆ 17ಕ್ಕೆ ಏರಿಕೆ
ಛತ್ತೀಸಗಢದ ದಾಂತೇವಾಡ ಜಿಲ್ಲೆಯಲ್ಲಿ ಕಳೆದ ತಿಂಗಳು ನಡೆದ ಸ್ಫೋಟದಲ್ಲಿ 10 ಪೊಲೀಸ್ ಸಿಬ್ಬಂದಿ ಮತ್ತು ನಾಗರಿಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕ ಸೇರಿದಂತೆ ಮತ್ತೆ ಎಂಟು ನಕ್ಸಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.