Dasara 2020
ದಸರಾ ಮಹೋತ್ಸವ ಯಶಸ್ವಿ, ಲಕ್ಷಾಂತರ ಜನರಿಂದ ವೀಕ್ಷಣೆ, 10 ಕೋಟಿ ರೂ. ಖರ್ಚು: ಸಚಿವ ಸೋಮಶೇಖರ್
ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2020ರ ಕಾರ್ಯಕ್ರಮವು ಸರಳವಾಗಿ, ಸಂಪ್ರದಾಯದಂತೆ ಬಹಳ ಅಚ್ಚುಕಟ್ಟಾಗಿ ನೆರವೇರಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಸೂಕ್ತ ಪ್ರಚಾರ ನೀಡಿ ಪ್ರೋತ್ಸಾಹಿಸಿ ಸಹಕರಿಸಿದ ಎಲ್ಲಾ ಮಾಧ್ಯಮಗಳಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಮೈಸೂರು ದಸರಾ 2020: ಕೊರೋನಾ ಎಫೆಕ್ಟ್ ನಿಂದ ಜಂಬೂ ಸವಾರಿ ಮೆರವಣಿಗೆಯಲ್ಲಿ ಕೇವಲ 2 ಸ್ಥಬ್ಧಚಿತ್ರಕ್ಕೆ ಅವಕಾಶ
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಕೊರೋನಾ ಸಾಂಕ್ರಾಮಿಕದ ನಡುವೆ ನಡೆಯುತ್ತಿರುವ ಸರಳ ದಸರಾದಲ್ಲಿ ಈ ಬಾರಿ ಕೇವಲ 2 ಸ್ಥಬ್ಧಚಿತ್ರಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

