ರಾಜ್ಯಶೀಘ್ರದಲ್ಲೇ ದತ್ತಾಂಶ ಸುರಕ್ಷತೆ ಕಾನೂನು, 6 ಲಕ್ಷ ಕಿ.ಮೀ ಆಪ್ಟಿಕ್ ಫೈಬರ್ ಜಾಲ: ರವಿಶಂಕರ್ ಪ್ರಸಾದ್
ಡಿಜಿಟಲ್ ತಾಂತ್ರಿಕತೆಯ ಬೆಳವಣಿಗೆಗೆ ಪೂರಕವಾಗಿ ಮೂಲಸೌಕರ್ಯ ಕಲ್ಪಿಸಲು ಒತ್ತು ನೀಡಿರುವ ಕೇಂದ್ರ ಸರ್ಕಾರವು 1000 ದಿನಗಳಲ್ಲಿ 6 ಲಕ್ಷ ಕಿ.ಮೀ. ಉದ್ದದಷ್ಟು ಆಪ್ಟಿಕ್ ಫೈಬರ್ ಕೇಬಲ್ ಜಾಲ ನಿರ್ಮಿಸಲು ಯೋಜನೆ ಹಾಕಿಕೊಂಡಿದೆ ಎಂದು ಕೇಂದ್ರ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಖಾತೆ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.