davanagere

ರಾಜ್ಯದಾದ್ಯಂತ ಭಾರಿ ಮಳೆ: ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಬೆಳೆ ಹಾನಿ, ರೈತರು ಕಂಗಾಲು
ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಬೀಸಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಭತ್ತ, ಬಾಳೆ, ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆ ಹಾನಿಯಾಗಿದೆ. ದಾವಣಗೆರೆ ತಾಲೂಕಿನಲ್ಲಿ ಗಾಳಿಗೆ 150 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಭತ್ತ ಹಾನಿಯಾಗಿದ್ದು, ಮನೆ ಕೂಡ ಕುಸಿದಿದೆ.

ಬಿಸಿಲಿನ ಝಳದಿಂದ ತಪ್ಪಿಸಿಕೊಳ್ಳಲು ಈಜುಕೊಳಕ್ಕೆ ತೆರಳಿದ ಬಾಲಕರು ನೀರಿನಲ್ಲಿ ಮುಳುಗಿ ಸಾವು, ಭದ್ರತಾ ವೈಫಲ್ಯದ ಆರೋಪ
ದಾವಣಗೆರೆ ನಗರದ ದೇವರಾಜ ಅರಸು ಬಡಾವಣೆಯ ಈಜುಕೊಳದಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಎಂಪಿ ರೇಣುಕಾ ಚಾರ್ಯ
ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಹೊನ್ನಾಳಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಕಾಂಗ್ರೆಸ್ ಅಭ್ಯರ್ಥಿ ಡಿ.ಜಿ.ಶಾಂತನಗೌಡ ಅವರ ವಿರುದ್ಧ ಸೋಲು ಕಂಡ ಹಿನ್ನೆಲೆಯಲ್ಲಿ ಅವರು ನಿರ್ಧಾರ ಕೈಗೊಂಡಿದ್ದಾರೆ.

ದಾವಣಗೆರೆ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು
SSLC ಯಲ್ಲಿ ಪ್ರಥಮ ಶ್ರೇಣಿಯಲ್ಲಿ ಪಾಸಾಗದ್ದ ಇಬ್ಬರು ಬಾಲಕರು ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಮುದಿಗೆರೆ ಗ್ರಾಮದಲ್ಲಿ ನಡೆದಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂಧರೆ ಗಲಭೆಗಳು ಹೆಚ್ಚಾಗುತ್ತವೆ: ಅಮಿತ್ ಶಾ ಆಯ್ತು, ಈಗ ಜೆಪಿ ನಡ್ಡಾ ಹೇಳಿಕೆ!
ಕಾಂಗ್ರೆಸ್ ಗೆದ್ದರೆ ಗಲಭೆ ನಡೆಯುತ್ತದೆ ಎಂಬ ಹೇಳಿಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಪ್ರಕರಣ ದಾಖಲಿಸಿದ್ದಾರೆ. ಇದೀಗ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕೂಡ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಭೆ ಸಂಭವಿಸುತ್ತದೆ ಎಂದು ಹೇಳಿದ್ದಾರೆ.

ಹಾಸನ ಹೆಚ್‌ಡಿಸಿಸಿ ಬ್ಯಾಂಕ್ ಮೇಲೆ ಐಟಿ ದಾಳಿ ದಾಳಿ ಬೆನ್ನಲ್ಲೇ ದಾವಣಗೆರೆಯ ಶಿವ ಸಹಕಾರಿ ಬ್ಯಾಂಕ್ ನಲ್ಲಿ ಐಟಿ ಅಧಿಕಾರಿಗಳಿಂದ ತಪಾಸಣೆ
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹಾಸನದ ಹೆಚ್ ಡಿಸಿಸಿ ಬ್ಯಾಂಕ್ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ ಬೆನ್ನಲ್ಲೇ ದಾವಣಗೆರೆ ನಗರದ ಚಾಮರಾಜಪೇಟೆ ಸರ್ಕಲ್ ನಲ್ಲಿರುವ ಪ್ರತಿಷ್ಠಿತ ಶಿವ ಸಹಕಾರಿ ಬ್ಯಾಂಕ್ ಮೇಲೆ ಹುಬ್ಬಳ್ಳಿ ಮೂಲದ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಶಿಗ್ಗಾವಿಯಲ್ಲಿ ಸಿಎಂ ಸೋಲಿಸಲು ಕಾಂಗ್ರೆಸ್ ಪ್ಲಾನ್: ಬೊಮ್ಮಾಯಿ ರಕ್ಷಣೆಗೆ ದಳಪತಿಗಳು ಮುಂದು; ಸ್ಪರ್ಧೆ ಕಠಿಣವಾದರೆ ದಾವಣಗೆರೆಗೆ ಶಿಫ್ಟ್?
ಮೇ 10 ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ತವರು ಜಿಲ್ಲೆ ಹಾವೇರಿಯ ಶಿಗ್ಗಾವಿಯಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಪ್ರಧಾನಿ ಮೋದಿ ರೋಡ್‌ಶೋ ವೇಳೆ ಭದ್ರತಾ ಲೋಪ; ಯುವಕನ ಬಂಧನ, ಆತಂಕದಲ್ಲಿ ಗ್ರಾಮ ತೊರೆದ ಕುಟುಂಬಸ್ಥರು
ದಾವಣಗೆರೆಯಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ವೇಳೆ ಭದ್ರತಾ ಲೋಪವಾಗಿದೆ ಎಂದು ವರದಿಯಾದ ಒಂದು ದಿನದ ನಂತರ, ಪ್ರಧಾನಿ ವಾಹನದ ಬಳಿ ಓಡಲು ಯತ್ನಿಸಿದ ಯುವಕನ ಕುಟುಂಬ ಸದಸ್ಯರು ಮನೆಗೆ ಬೀಗ ಹಾಕಿ ಗ್ರಾಮವನ್ನು ತೊರೆದಿದ್ದಾರೆ.

ದಾವಣಗೆರೆ: ಪ್ರಧಾನಿ ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ! ವಿಡಿಯೋ
ಬೆಣ್ಣೆ ನಗರಿ ದಾವಣಗೆರೆಯಲ್ಲಿಂದು ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ವೇಳೆಯಲ್ಲಿ ಭದ್ರತಾ ಲೋಪ ಉಂಟಾಗಿದೆ.

