davanagere

ವಾಲ್ಮೀಕಿ ಜಾತ್ರೆಗೆ ಬಾರದಿದ್ದಕ್ಕೆ ಅಭಿಮಾನಿಗಳ ಆಕ್ರೋಶ: ಆಹ್ವಾನವಿರಲಿಲ್ಲ ಎಂದ ಸುದೀಪ್; ಸ್ವಾಮೀಜಿ ಆಹ್ವಾನ ನೀಡಿದ್ದ ಫೋಟೋ ವೈರಲ್
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ಗುರುಪೀಠದ ವಾಕ್ಮೀಕಿ ಜಾತ್ರೆಗೆ ಕಿಚ್ಚ ಸುದೀಪ್ ಗೈರಾಗಿದ್ದರಿಂದ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದರು. ಅಲ್ಲಿರುವ ಕುರ್ಚಿಗಳನ್ನು ಒಡೆದು ಹಾಕಿದ್ದರು.

ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ
ಬಂಡಾಯ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಕುಸಿದು ಬಿದ್ದಿದ್ದಾರೆ.

ಫೆಬ್ರವರಿ ಎರಡನೆ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ- ಸಿಎಂ ಬೊಮ್ಮಾಯಿ
ಫೆಬ್ರವರಿ ಎರಡನೇ ವಾರದಲ್ಲಿ ರಾಜ್ಯ ಬಜೆಟ್ ಮಂಡನೆಯಾಗಲಿದೆ ಎಂದು ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಗ್ರಾಮ ವಾಸ್ತವ್ಯ ಪುನರಾರಂಭ; ಕಟ್ಟಡ ಕಾರ್ಮಿಕರ ಸೌಲಭ್ಯ ದುರುಪಯೋಗವಾದರೆ ಕ್ರಮ: ಮುಖ್ಯಮಂತ್ರಿ ಎಚ್ಚರಿಕೆ
ಕೋವಿಡ್ ಬಿಕ್ಕಟ್ಟಿನ ಕಾರಣ ಕೆಲಕಾಲ ಸ್ಥಗಿತಗೊಂಡಿದ್ದ ಗ್ರಾಮ ವಾಸ್ತವ್ಯ ಶನಿವಾರದಿಂದ ಮತ್ತೆ ಪುನರಾರಂಭಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ನ್ಯಾಮತಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ- ಹಳ್ಳಿಗಳ ಕಡೆ ಮತ್ತು ಗ್ರಾಮ ವಾಸ್ತವ್ಯಕ್ಕೆ ವಾಸ್ತವ್ಯಕ್ಕೆ ಮರು ಚಾಲನೆ ನೀಡಿದರು.

ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ: ನಾಳೆ ಚಿತ್ರದುರ್ಗ, ದಾವಣಗೆರೆಗೆ ಜೆಪಿ ನಡ್ಡಾ ಭೇಟಿ
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ ತನ್ನ ವರಿಷ್ಠರನ್ನು ರಾಜ್ಯ ಪ್ರವಾಸಕ್ಕೆ ಆಹ್ವಾನಿಸುತ್ತಿದೆ. ಗುರುವಾರ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ಚಿತ್ರದುರ್ಗ ಜಿಲ್ಲೆಯಲ್ಲಿ ಎಸ್‌ಸಿ/ಎಸ್‌ಟಿ ಮತ್ತು ಒಬಿಸಿ ಪಕ್ಷದ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ದಾವಣಗೆರೆ: ಮಹಿಳೆಯ ಗಂಟಲು ಸೀಳಿ ಕೊಲೆ, ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿ
ಗುರುವಾರ ದಾವಣಗೆರೆಯಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ನಡೆದಿದೆ.

ಭದ್ರಾ ಮೇಲ್ದಂಡೆ ಯೋಜನೆಯಿಂದ ಮಧ್ಯ ಕರ್ನಾಟಕ ಹಸಿರು- ಸಿಎಂ ಬೊಮ್ಮಾಯಿ
ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯ ಸರ್ಕಾರದಿಂದ 3 ಸಾವಿರ ಕೋಟಿ ರೂಪಾಯಿ ಅನುದಾನ ನೀಡಿದೆ. ಇದರಿಂದ ಮಧ್ಯ ಕರ್ನಾಟಕ ಹಸಿರಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ದಾವಣಗೆರೆ: ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಕಾಯದೆ ರಾತ್ರೋರಾತ್ರಿ ಪಾಲಿಕೆ ಮುಂಭಾಗದ ಹೊಂಡಗುಂಡಿ ಮುಚ್ಚಿದ ಸ್ವಯಂಸೇವಕರು
ಈ ವರ್ಷ ಮಳೆ ಹೆಚ್ಚಾಗಿ ರಾಜಧಾನಿ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಡಾಮರು ರಸ್ತೆ ಕಿತ್ತುಹೋಗಿ ಹೊಂಡ-ಗುಂಡಿ ಬಿದ್ದು ಅನೇಕ ಅನಾಹುತಗಳು ಸಂಭವಿಸಿದೆ. ಹಾಳಾಗಿರುವ ರಸ್ತೆಗಳನ್ನು ರಿಪೇರಿ ಮಾಡಲು ಹೊರಟಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಮತ್ತೆ ಮಳೆರಾಯನ ಕಾಟ ಎದುರಾಗಿದೆ.

79 ವರ್ಷದ ವ್ಯಕ್ತಿಯನ್ನು ಹನಿ ಟ್ರ್ಯಾಪ್ ಮಾಡುತ್ತಿದ್ದ ದಾವಣಗೆರೆಯ 32 ವರ್ಷದ ಮಹಿಳೆ ಬಂಧನ
ದಾವಣಗೆರೆ ಜಿಲ್ಲೆಯಲ್ಲಿ ಹನಿಟ್ರ್ಯಾಪ್ ಮಾಡಿ 15 ಲಕ್ಷ ರೂಪಾಯಿ ಸುಲಿಗೆಗೆ ಯತ್ನಿಸಿದ ಆರೋಪದ ಮೇಲೆ 32 ವರ್ಷದ ವಿವಾಹಿತ ಮಹಿಳೆಯನ್ನು ಬಂಧಿಸಿರುವುದಾಗಿ ಪೊಲೀಸರು ಬುಧವಾರ ತಿಳಿಸಿದ್ದಾರೆ.

