ರಾಜ್ಯ'ಕೊರೋನಾ ಜನರ ಉಸಿರು ನಿಲ್ಲಿಸುತ್ತಿದ್ದರೆ, ಬಿಜೆಪಿ ಜನಪ್ರತಿನಿಧಿಗಳು ಅಧಿಕಾರಿಗಳ ಉಸಿರುಗಟ್ಟಿಸುತ್ತಿದ್ದಾರೆ'
ಕಾನೂನು ಕೈಗೆತ್ತಿಕೊಂಡರೆ, ನೈತಿಕ ಪೋಲಿಸ್ ಗಿರಿ ಮಾಡಿದ್ರೆ ಕ್ರಮ ಕೈಗೊಳ್ಳತ್ತೇನೆ ಎಂದಿದ್ದಕ್ಕೆ ದುಷ್ಕರ್ಮಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ರವರಿಗೆ ಕೊಲೆ ಬೆದರಿಕೆ ಹಾಕಿದರು. ಸರ್ಕಾರ ಕೊಲೆ ಬೆದರಿಕೆ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗಳಿಗೆ ಶಿಕ್ಷೆ ನೀಡಿದೆ ಎಂದು ಯುಟಿ ಖಾದರ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.