DCM DKShivakumar

ನನ್ನ ಮೇಲಿನ ಕಮಿಷನ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ: ಡಿಸಿಎಂ ಡಿಕೆ ಶಿವಕುಮಾರ್
ತನ್ನ ವಿರುದ್ಧದ ಕಮಿಷನ್ ಆರೋಪ ಸಾಬೀತಾದರೆ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸವಾಲ್ ಹಾಕಿದ್ದಾರೆ.

ಬೆಂಗಳೂರಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ ಗೆ ನಿರ್ಬಂಧ; ನಿಯಮ ಮೀರಿದರೆ 50 ಸಾವಿರ ರೂ. ದಂಡ: ಡಿಸಿಎಂ
ಬೆಂಗಳೂರು ನಗರದಲ್ಲಿ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಅನಧಿಕೃತ ಫ್ಲೆಕ್ಸ್ ನಿರ್ಬಂಧ ಹೇರಲಾಗುವುದು, ಒಂದು ವೇಳೆ ನಿಯಮ ಮೀರಿದರೆ ಪಾಲಿಕೆ ಅಧಿಕಾರಿಗಳು ಎಫ್ಐಆರ್ ದಾಖಲಿಸಿ, ಒಂದು ಫ್ಲೆಕ್ಸ್ ಗೆ ತಲಾ 50 ಸಾವಿರ ದಂಡ ವಿಧಿಸಲಿದ್ದಾರೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ರೈತರ ಬೇಡಿಕೆ ಮೇರೆಗೆ ತುಂಗಾಭದ್ರಾದಿಂದ 5,575 ಕ್ಯೂಸೆಕ್ಸ್ ನೀರು ಹರಿಸಲು ಅನುಮತಿ: ಡಿಸಿಎಂ ಡಿಕೆ ಶಿವಕುಮಾರ್
ರೈತರ ಬೇಡಿಕೆ, ಜಿಲ್ಲಾ ಸಚಿವರುಗಳು ಹಾಗೂ ಶಾಸಕರ ಒತ್ತಡದ ಹಿನ್ನೆಲೆಯಲ್ಲಿ ತುಂಗಾಭದ್ರಾದಿಂದ 5,575 ಕ್ಯೂಸೆಕ್ಸ್ ನೀರು ಹರಿಸಲು ಒಪ್ಪಿಗೆ ನೀಡಲಾಗಿದೆ ಎಂದು ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಬಿಡಬ್ಲ್ಯೂಎಸ್ ಎಸ್ ಬಿ ಸಿಬ್ಬಂದಿಗೆ ವೇತನ ನೀಡಲು ಸಾಧ್ಯವಾಗುತ್ತಿಲ್ಲ- ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರನ್ನು ಹೊಸ ದಿಕ್ಕಿಗೆ ತೆಗೆದುಕೊಂಡು ಹೋಗುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಜೈನ ಮುನಿ ಹಂತಕರ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿಕೆ ಶಿವಕುಮಾರ್
ಬೆಳಗಾವಿಯಲ್ಲಿ ಜೈನ ಮುನಿಗಳಾದ ಕಾಮಕುಮಾರನಂದಿ ಮಹಾರಾಜರ ಹತ್ಯೆ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.

ಸುರೇಶ್ ಹೇಳಿಕೆ ವೈರಾಗ್ಯದ್ದಲ್ಲ; ಅಶೋಕ್ ತಮ್ಮ ತಟ್ಟೆಯಲ್ಲಿರುವ ಹೆಗ್ಗಣ ತೆಗೆಯಲಿ: ಡಿಕೆಶಿ ತಿರುಗೇಟು
ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದಲೂಬಹುದು ಎಂಬ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರ ಹೇಳಿಕೆ ವೈರಾಗ್ಯದ್ದಲ್ಲ ಎಂದು ಅವರ ಸಹೋದರ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಿಎಂ ಸ್ಥಾನ ಸಿಗಲಿಲ್ಲವೆಂದು ಆತಂಕ, ನಿರಾಸೆಪಡುವ ಅಗತ್ಯವಿಲ್ಲ: ಸೂಕ್ತ ಕಾಲದಲ್ಲಿ ಎಐಸಿಸಿ ಸೂಕ್ತ ನಿರ್ಧಾರ- ಡಿಕೆ ಶಿವಕುಮಾರ್
ನನಗೆ ಮುಖ್ಯಮಂತ್ರಿ ಸ್ಥಾನ ಸಿಗಲಿಲ್ಲವೆಂದು ಆತಂಕ, ನಿರಾಸೆಪಡುವ ಅಗತ್ಯವಿಲ್ಲ, ಸೂಕ್ತ ಕಾಲದಲ್ಲಿ ಎಐಸಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತನ್ನ ಕ್ಷೇತ್ರದ ಮತದಾರರಿಗೆ ಹೇಳಿದ್ದಾರೆ.

ಪೋಟೋ, ವಿಡಿಯೋ ಸಮೇತ ಕಾಮಗಾರಿ ವಿವರ ನೀಡಿ: ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಖಡಕ್ ಸೂಚನೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷಗಳಿಂದ ಆಗಿರುವ ಕೆಲಸ, ವೆಚ್ಚದ ಬಗ್ಗೆ ಫೋಟೋ, ವಿಡಿಯೋ ಮತ್ತಿತರ ದಾಖಲೆಗಳನ್ನು ಒದಗಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಯಾವುದೇ ಆಂತರಿಕ ಭಿನ್ನಾಭಿಪ್ರಾಯವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್
ರಾಜ್ಯದ ಹಿತದೃಷ್ಟಿಯಿಂದ ವಿವಿಧ ವಿಷಯಗಳನ್ನು ಚರ್ಚಿಸಬೇಕಾಗಿದೆ. ಪಕ್ಷದ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

