DCM Dr.Ashwathnarayana

ಸಾಸ್ಟ್ ಪೋರ್ಟಲ್ ನಲ್ಲಿ ಆಕ್ಸಿಜನ್, ರೆಮಿಡಿಸಿವಿರ್, ಬೆಡ್ ಗಳ ಮಾಹಿತಿ: ಅಶ್ವತ್ಥ ನಾರಾಯಣ
ಆಮ್ಲಜನಕ, ರೆಮಿಡಿಸಿವಿರ್ ಜೊತೆಗೆ ಖಾಸಗಿ ಆಸ್ಪತ್ರೆಗಳಲ್ಲಿರುವ ಸರಕಾರಿ ಬೆಡ್‌ಗಳ ಮಾಹಿತಿಯನ್ನು ಸುವರ್ಣ ಆರೋಗ್ಯ ಸುರಕ್ಷತಾ ಟ್ರಸ್ಟ್ (sast) ಪೋರ್ಟಲ್ʼನಲ್ಲಿ ಸಿಗುವ ಹಾಗೆ ಮಾಡಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರು ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಆಪರೇಷನ್ ಆಕ್ಸಿಜನ್, ತಪ್ಪಿದ ಭಾರೀ ಅನಾಹುತ, ಉಳಿಯಿತು 200 ಸೋಂಕಿತರ ಜೀವ
ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ವೈದ್ಯರು ಹಾಗೂ ಇಡೀ ಆಸ್ಪತ್ರೆ ಸಿಬ್ಬಂದಿಯ ಮುನ್ನೆಚ್ಚರಿಕೆ ಮತ್ತು ಕ್ಷಿಪ್ರ ಕಾರ್ಯಾಚರಣೆಯಿಂದ ಬೆಂಗಳೂರಿನಲ್ಲಿ ಸಂಭವೀಯ ಬಹುದೊಡ್ಡ ಆಕ್ಸಿಜನ್ ಕೊರತೆ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿದೆ.

ವಿಸ್ಟ್ರಾನ್ ಕಾರ್ಖಾನೆಯಲ್ಲಿ ಪ್ರತಿಭಟನೆ: ತಪಿತಸ್ಥರ ವಿರುದ್ಧ ಕಠಿಣ ಕ್ರಮ- ಡಿಸಿಎಂ ಡಾ. ಅಶ್ವತ್ಥ್ ನಾರಾಯಣ
ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ತೈವಾನ್ ಮೂಲದ ವಿಸ್ಟ್ರಾನ್ ಕಾರ್ಖಾನೆಯಲ್ಲಿ ಶನಿವಾರ ಬೆಳಗ್ಗೆ ನಡೆದ ಕಾರ್ಮಿಕರ ಪ್ರತಿಭಟನೆ ಹಾಗೂ ದೊಂಬಿಯನ್ನು ಖಂಡಿಸಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಪರಿಸ್ಥಿತಿ ಸದ್ಯಕ್ಕೆ ನಿಯಂತ್ರಣದಲ್ಲಿದ್ದು, ಆದಷ್ಟು ಬೇಗ ಬಿಕ್ಕಟ್ಟು ಬಗೆಹರಿಯಲಿದೆ ಎಂದರು.

ಹುತಾತ್ಮ ಯೋಧರ ಗೌರವಾರ್ಥ ದೇಶಪ್ರೇಮಿಯ ಭಾರತ ಯಾತ್ರೆ: ಮನೆಗೆ ಬರಮಾಡಿಕೊಂಡು ಬೀಳ್ಕೂಟ ಡಿಸಿಎಂ
ಕಾರ್ಗಿಲ್ ಯುದ್ಧ, ಪುಲ್ವಾಮಾ ದಾಳಿ ಸೇರಿ ವಿವಿಧ ಯುದ್ಧಗಳು ಹಾಗೂ ಭಯೋತ್ಪಾದಕರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸಲು ʼ ಭಾರತಯಾತ್ರೆʼ ಕೈಗೊಂಡಿರುವ ಬೆಂಗಳೂರು ಮೂಲದ ದೇಶಪ್ರೇಮಿ ಉಮೇಶ್ ಗೋಪಿನಾಥ್ ಜಾಧವ್ ಅವರ ಮುಂದಿನ ಯಾತ್ರೆಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹಸಿರು ನಿಶಾನೆ ತೋರಿದ್ದಾರೆ.

ಅಸುರಕ್ಷತೆಯಿಂದ ಯಾವೊಬ್ಬ ಅಲ್ಪಸಂಖ್ಯಾತರು ಭಾರತದಿಂದ ವಲಸೆ ಹೋಗಿಲ್ಲ- ಅಶ್ವಥ್ ನಾರಾಯಣ್
ಅಸುರಕ್ಷತೆಯಿಂದ ಯಾವೊಬ್ಬ ಅಲ್ಪಸಂಖ್ಯಾತರು ಭಾರತದಿಂದ ವಲಸೆ ಹೋಗಿಲ್ಲ ಎಂದು ಉಪಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಸಿಎಎ ಪರ ಕಾರ್ಯಕರ್ತನ ಮೇಲೆ ಬರ್ಬರ ಹಲ್ಲೆ: ಇಂತಹ ಹೀನ ಕೃತ್ಯಗಳನ್ನು ಸಹಿಸುವುದಿಲ್ಲ-ಡಾ. ಅಶ್ವಥ್ ನಾರಾಯಣ
ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿರುವ ಕಾರ್ಯಕರ್ತನೊಬ್ಬನ ಮೇಲೆ ಬರ್ಬರ ಹಲ್ಲೆ ನಡೆಸಿರುವುದರ ವಿರುದ್ಧ ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

