Death threat

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಮತ್ತೆ ಜೀವ ಬೆದರಿಕೆ ಕರೆ, ದೆಹಲಿ ಪೊಲೀಸರಿಂದ ತನಿಖೆ
ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಸೋಮವಾರ ದೆಹಲಿಯ ನಿವಾಸಕ್ಕೆ ದೂರವಾಣಿ ಕರೆ ಮೂಲಕ ಜೀವ ಬೆದರಿಕೆ ಬಂದಿದೆ. ಈ ಕುರಿತು ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ: ಆರೋಪಿ ವಿರುದ್ಧ ಮುಂಬೈ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ
ನಟ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಇಮೇಲ್ ಕಳುಹಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಮುಂಬೈ ಪೊಲೀಸರು ಲುಕ್‌ಔಟ್ ನೋಟಿಸ್ (ಎಲ್‌ಒಸಿ) ಹೊರಡಿಸಿದ್ದಾರೆ.

ಮಹಾರಾಷ್ಟ್ರ: ಸಂಜಯ್ ರಾವತ್‌ಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ
ಕಳೆದ ವರ್ಷ ಗುಂಡೇಟಿಗೆ ಬಲಿಯಾದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರಂತೆ ನಿಮ್ಮನ್ನು ಹತ್ಯೆ ಮಾಡುವುದಾಗಿ ಶಿವಸೇನಾ(ಯುಬಿಟಿ) ಸಂಸದ ಸಂಜಯ್ ರಾವತ್ ಅವರಿಗೆ ಸಂದೇಶ ಕಳುಹಿಸಿದ್ದ ಆರೋಪದ ಮೇಲೆ ಪುಣೆಯ...

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಪುತ್ರಿಗೆ ಅಮೆರಿಕದಲ್ಲಿ ಜೀವ ಬೆದರಿಕೆ; ಡಿಸಿಡಬ್ಲ್ಯು ಮುಖ್ಯಸ್ಥೆ ಸ್ವಾತಿ ಮಲಿವಾಲ್
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಪುತ್ರಿಗೆ ಅಮೆರಿಕದಲ್ಲಿ ಕೊಲೆ ಬೆದರಿಕೆ ಇದೆ ಎಂದು ವರದಿಯಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಶುಕ್ರವಾರ, ಅಮೆರಿಕದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಆಕೆಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮನವಿ ಮಾಡಿದ್ದಾರೆ.

ಹಿಂಡಲಗಾ ಜೈಲಿನಿಂದ ನಿತಿನ್ ಗಡ್ಕರಿಗೆ ಬೆದರಿಕೆ ಹಾಕಿದ್ದ ಕೈದಿಯನ್ನು ಮಹಾರಾಷ್ಟ್ರಕ್ಕೆ ಕರೆದೊಯ್ದ ನಾಗ್ಪುರ ಪೊಲೀಸರು
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಮಾಡಿದ್ದ ಜಯೇಶ್ ಕಾಂತ ಅಲಿಯಾಸ್ ಜಯೇಶ್ ಪೂಜಾರಿ ಎಂಬಾತನನ್ನು ಹೆಚ್ಚಿನ ವಿಚಾರಣೆಗಾಗಿ ನಾಗ್ಪುರ ಪೊಲೀಸರು ಮಂಗಳವಾರ ಹಿಂಡಲಗಾ ಜೈಲಿನಿಂದ ಮಹಾರಾಷ್ಟ್ರಕ್ಕೆ ಕರೆದೊಯ್ದಿದ್ದಾರೆ.

ವಾಟ್ಸಾಪ್ ಮೂಲಕ ನಟಿ ಉರ್ಫಿ ಜಾವೇದ್‌ಗೆ ಅತ್ಯಾಚಾರ, ಕೊಲೆ ಬೆದರಿಕೆ; ವ್ಯಕ್ತಿಯನ್ನು ಬಂಧಿಸಿದ ಪೊಲೀಸರು
ಕಿರುತೆರೆ ನಟಿ ಉರ್ಫಿ ಜಾವೇದ್‌ಗೆ ಅತ್ಯಾಚಾರ ಮತ್ತು ಜೀವ ಬೆದರಿಕೆ ಒಡ್ಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ಬುಧವಾರ ಮಾಹಿತಿ ನೀಡಿದ್ದಾರೆ.

ಪವಾರ್‌ಗೆ ಜೀವ ಬೆದರಿಕೆ: ತನ್ನ ಪತ್ನಿ ಎನ್‌ಸಿಪಿ ಕಾರ್ಯಕರ್ತನೊಂದಿಗೆ ಓಡಿಹೋಗಿದ್ದಾಳೆ ಎಂದ ಆರೋಪಿ!
ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರಿಗೆ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ವ್ಯಕ್ತಿಯನ್ನು ಮುಂಬೈ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಈ ವೇಳೆ ತನ್ನ ಪತ್ನಿ ಎನ್‌ಸಿಪಿ...

ಜನರಿಗೆ ಹಾನಿ, ದುಃಖವನ್ನು ತರುವ ಶಸ್ತ್ರಾಸ್ತ್ರ ತ್ಯಜಿಸಿ ಎಂದು ಉಗ್ರರಿಗೆ ಹೇಳಿದ ಗುಲಾಂ ನಬಿ ಆಜಾದ್, ಜೀವ ಬೆದರಿಕೆ
ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ಹೊಸ ಪಕ್ಷದ ಹೆಸರನ್ನು ಘೋಷಿಸುವ ಮುನ್ನ ಸರಣಿ ಸಾರ್ವಜನಿಕ ಸಭೆಗಳನ್ನು ನಡೆಸಿದ ಗುಲಾಂ ನಬಿ ಆಜಾದ್, ಜನರಿಗೆ ಹಾನಿ ಮತ್ತು ದುಃಖವನ್ನು ಮಾತ್ರ ತರುವ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಎಂದು ಭಯೋತ್ಪಾದಕರಿಗೆ ಮನವಿ ಮಾಡಿದರು.

ನೂಪುರ್ ಶರ್ಮಾಗೆ ಜೀವ ಬೆದರಿಕೆ: ದಾಖಲಾಗಿದ್ದ ಎಲ್ಲಾ ಪ್ರಕರಣ ದೆಹಲಿಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ
ಪ್ರವಾದಿ ಮೊಹಮ್ಮದ್ ಬಗ್ಗೆಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ನಾಯಕಿ ನೂಪುರ್ ಶರ್ಮಾ ವಿರುದ್ಧ ದೇಶದ ಇತರೆ ರಾಜ್ಯಗಳಲ್ಲಿ ದಾಖಲಾಗಿದ್ದ ಎಲ್ಲ ಎಫ್ಐಆರ್‌ಗಳನ್ನು ಒಟ್ಟುಗೂಡಿಸಿ ದೆಹಲಿಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ.

