deaths

ಕೋವಿಡ್-19: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 2,57,299 ಹೊಸ ಪ್ರಕರಣ ದಾಖಲು, 4,194 ಮಂದಿ ಸಾವು
ದೇಶಾದ್ಯಂತ ಕೊರೋನಾ ಎರಡನೇ ಅಲೆಯ ಅಬ್ಬರ ಮುಂದುವರಿದಿದೆ, ಕಳೆದ 24 ಗಂಟೆಗಳ ಅವಧಿಯಲ್ಲಿ 2.57 ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಗಳಲ್ಲಿ 4,194 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಮುಂಬರುವ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ಸಿದ್ದರಾಮಯ್ಯ ನಿರ್ಧಾರ!
ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕೊರೋನಾ ಸೋಂಕು ಬಗ್ಗೆ ಬಹಳ ಸುಳ್ಳುಗಳನ್ನು ಹೇಳುತ್ತಿದೆ. ನಾವದನ್ನು ಬಯಲು ಮಾಡುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕೋವಿಡ್ ನಿಂದ ದಿನಕ್ಕೆ ಎಷ್ಟು ಮಂದಿ ಸಾಯುತ್ತಿದ್ದಾರೆ ಎಂಬ ಬಗ್ಗೆ ಸರ್ಕಾರಕ್ಕೆ ಅರಿವಿಲ್ಲ: ಸತೀಶ್ ಜಾರಕಿಹೊಳಿ
ಕೋವಿಡ್ 19 ಎರಡನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ.

ಕೋವಿಡ್ ಸಾವುಗಳು ಹೆಚ್ಚಾಗುತ್ತಿವೆ, ಆದರೆ ಲಸಿಕೆಗಳು ಕಡಿಮೆಯಾಗುತ್ತಿವೆ: ರಾಹುಲ್ ಗಾಂಧಿ
ದೇಶದಲ್ಲಿ ಕೋವಿಡ್-19 ನಿಂದ ಸಾವುಗಳು ಹೆಚ್ಚಾಗುತ್ತಿದ್ದರೆ, ಲಸಿಕೆಗಳು ಕಡಿಮೆಯಾಗುತ್ತಿವೆ. ಆದರೆ ಕೇಂದ್ರ ಸರ್ಕಾರ ಮಾತ್ರ ಜನರ ಗಮನ ಬೇರೆಡೆಗೆ ತಿರುಗಿಸಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.

ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆ: 24 ಗಂಟೆಗಳಲ್ಲಿ 4,12,262 ಹೊಸ ಪ್ರಕರಣಗಳು, 3,980 ಸಾವು
ದೇಶದಲ್ಲಿ ಕೊರೋನಾ ಎರಡನೇ ಅಲೆ ತಾಂಡವವಾಡುತ್ತಿದ್ದು ಪ್ರತಿನಿತ್ಯವೂ ಲಕ್ಷಾಂತರ ಮಂದಿ ಸೋಂಕಿಗೆ ಒಳಗಾಗುತ್ತಿದ್ದಾರೆ, ಸಾವಿರಾರು ಮಂದಿ ಬಲಿಯಾಗುತ್ತಿದ್ದಾರೆ.

ಅರೆಬರೆಯ ಗೋಲ್ಮಾಲ್ ಲೆಕ್ಕದಲ್ಲಿಯೇ ಇಷ್ಟು, ಲೆಕ್ಕಕ್ಕೆ ಸಿಗದಿರುವುದು ಇನ್ನೆಷ್ಟು? ಸುಧಾಕರ್ ತಲೆದಂಡ ಯಾವಾಗ?
ಕೋವಿಡ್-19 ಸೋಂಕಿಗೆ ತುತ್ತಾಗುತ್ತಿರುವವರ ಅಧಿಕೃತ ಲೆಕ್ಕ ನೀಡುವಂತೆ ಒತ್ತಾಯಿಸಿರುವ ಕಾಂಗ್ರೆಸ್ ಸಚಿವ ಸುಧಾಕರ್ ರಾಜಿನಾಮೆ ನೀಡುವಂತೆ ಒತ್ತಾಯಿಸಿದೆ.

ಗುಜರಾತ್: ಬರೂಚ್ ನ ಕೋವಿಡ್-19 ಆಸ್ಪತ್ರೆಯಲ್ಲಿ ಬೆಂಕಿ ದುರಂತ; 18 ರೋಗಿಗಳು ಸಜೀವ ದಹನ
ದೇಶದ ಅಲ್ಲಲ್ಲಿ ಆಸ್ಪತ್ರೆಗಳಲ್ಲಿ ಬೆಂಕಿ ಅವಘಡ ದುರಂತಗಳು ಸಂಭವಿಸುವುದು ನಿಲ್ಲುತ್ತಲೇ ಇಲ್ಲ. ಮಧ್ಯರಾತ್ರಿ ವೇಳೆ ಗುಜರಾತ್ ನ ಬರೂಚ್ ನಗರದಲ್ಲಿ ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಕನಿಷ್ಠ 18 ಮಂದಿ ಕೋವಿಡ್ ರೋಗಿಗಳು ಸಜೀವ ದಹನವಾಗಿದ್ದಾರೆ ಎಂಬ ಮಾಹಿತಿ ಬಂದಿದೆ.

ಭಾರತದಲ್ಲಿ ಕೊರೋನಾ ಸ್ಫೋಟ: ಕೋವಿಡ್-19 ನಿಂದ ಮೃತಪಟ್ಟ ಒಟ್ಟು ಸೋಂಕಿತರಲ್ಲಿ ಶೇ.20ರಷ್ಟು ಏಪ್ರಿಲ್ ನಲ್ಲೇ!
ಕಳೆದ ನಾಲ್ಕು ದಿನಗಳಲ್ಲಿ ಭಾರತದಲ್ಲಿ ಕೋವಿಡ್-19ನಿಂದ ಶೇಕಡಾ 20ರಷ್ಟು ಮಂದಿ ರೋಗಿಗಳು ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ ಹೊಸ ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ 58 ಲಕ್ಷದ 47 ಸಾವಿರದ 932ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೆ ಕಳೆದ ವರ್ಷದಿಂದ ಈವರೆಗೆ 1.80 ಕೋಟಿ ಕೋವಿಡ್ ಸೋಂಕಿತರು ಪತ್ತೆಯಾಗಿದ್ದಾರೆ.

ಕೊರೋನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲಿ ಮೂರನೇ ಸ್ಥಾನ: ಮಹಾರಾಷ್ಟ್ರ, ದೆಹಲಿ ಮುಂಚೂಣಿಯಲ್ಲಿ!
ಕೊರೋನಾ ಎರಡನೇ ಅಲೆಯ ತೀವ್ರ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿಯೂ ಹೆಚ್ಚಾಗಿದೆ. ಪ್ರತಿದಿನ ಕೊರೋನಾದಿಂದ ಸಾಯುವವರ ಸಂಖ್ಯೆ ಕೂಡ ವಿಪರೀತವಾಗಿದೆ. ನಿನ್ನೆಯ ಲೆಕ್ಕ ತೆಗೆದುಕೊಂಡರೆ ಮಹಾರಾಷ್ಟ್ರ ಮತ್ತು ದೆಹಲಿ ನಂತರ ಕೊರೋನಾದಿಂದ ಮೃತಪಟ್ಟವರಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ.

