ರಾಜ್ಯಕೋವಿಡ್ ನಿಂದ ಜನರ ರಕ್ಷಣೆಯೇ ಮುಖ್ಯ ಹೊರತು ವೈಫಲ್ಯಗಳ ಬಗ್ಗೆ ಚರ್ಚೆ ಅಲ್ಲ: ಎಚ್.ಡಿ.ಕುಮಾರಸ್ವಾಮಿ
ಸರ್ಕಾರದ ವೈಫಲ್ಯದ ಬಗ್ಗೆ ಚರ್ಚಿಸುವುದು ಈಗ ಅನವಶ್ಯಕ. ಜನತೆಯ ಜೀವನವನ್ನು ರಕ್ಷಣೆ ಮಾಡುವಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಾಗಲೀ, ಹಾಗೂ ಸಿದ್ದರಾಮಯ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಕೆಲಸವನ್ನು ಸರ್ಕಾರ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.