ರಾಜ್ಯ17 ಜಿಲ್ಲೆಗಳ 80 ತಾಲ್ಲೂಕುಗಳು ಪ್ರವಾಹ ಪೀಡಿತ: ಸರ್ಕಾರ ಘೋಷಣೆ
ಕೃಷ್ಣಾ ಕಣಿವೆ ಪ್ರದೇಶದಲ್ಲಿ ಸುರಿದ ಭಾರೀ ಮಳೆ, ಘಟಪ್ರಭಾ, ಮಲಪ್ರಭಾ ನದಿಗೆ ಹೆಚ್ಚಿನ ನೀರು ಬಿಡುಗಡೆ, ಕರಾವಳಿ, ಮಲೆನಾಡು ಭಾಗದಲ್ಲಿ ಕಾಣಿಸಿಕೊಂಡ ನೆರೆಯಿಂದಾಗಿ ಜೀವ ಹಾನಿ, ಬೆಳೆ, ಸಾರ್ವಜನಿಕ ಆಸ್ತಿ ಪಾಸ್ತಿಗೆ ನಷ್ಟವುಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ 17 ಜಿಲ್ಲೆಗಳ 80 ತಾಲೂಕುಗಳನ್ನು ನೆರೆಪೀಡಿತ ಪ್ರದೇಶಗಳೆಂದು ರಾಜ್ಯ ಸರ್ಕಾರ ಘೋಷಿಸಿದೆ.