ರಾಜ್ಯದೀಕ್ಷಾಭೂಮಿ ಯಾತ್ರೆಗೆ ಈ ಬಾರಿ ಐದು ಸಾವಿರ ಅನುಯಾಯಿಗಳು: ಸಚಿವ ಕೋಟಾ ಶ್ರೀನಿವಾಸ ಪೂಜಾರಿ
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಬೌದ್ಧಧರ್ಮದ ದೀಕ್ಷೆ ಪಡೆದ ಸ್ಥಳವಾದ ಮಹಾರಾಷ್ಟ್ರದ ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಈ ಬಾರಿ ಕರ್ನಾಟಕದಿಂದ ಸುಮಾರು 5 ಸಾವಿರ ಅನುಯಾಯಿಗಳನ್ನು ಸರ್ಕಾರದ ವತಿಯಿಂದ ಕಳುಹಿಸಿಕೊಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.