Delhi airport

ದೆಹಲಿ ವಿಮಾನ ನಿಲ್ದಾಣದ ಛಾವಣಿ ಕುಸಿದು ವ್ಯಕ್ತಿ ಸಾವು; ಮೃತನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡುವಂತೆ ಎಎಪಿ ಆಗ್ರಹ
ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕ ಜಾಸ್ಮಿನ್ ಶಾ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಂದೆ ಬಂದು ಈ ಘಟನೆಗೆ ಕಾರಣಗಳನ್ನು ವಿವರಿಸಬೇಕು. "ಇಂದು ಅತ್ಯಂತ ದುಃಖಕರ ಘಟನೆ ನಡೆದಿದೆ ಎಂದರು.

ದೆಹಲಿ ವಿಮಾನ ನಿಲ್ದಾಣ ಟರ್ಮಿನಲ್-1 ಛಾವಣಿ ಕುಸಿತ; ಓರ್ವ ಸಾವು, 7 ಮಂದಿಗೆ ಗಾಯ; ವಿಮಾನ ಹಾರಾಟ ರದ್ದು
ಸುರಕ್ಷತಾ ಕ್ರಮಗಳಾಗಿ ಟರ್ಮಿನಲ್‌ನಿಂದ ಎಲ್ಲಾ ಚೆಕ್-ಇನ್ ಮತ್ತು ನಿರ್ಗಮನಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಗಮ(DIAL) ತಿಳಿಸಿದೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಪ್ರಕರಣ: ಕಾಂಗ್ರೆಸ್ ಸಂಸದ ಶಶಿ ತರೂರ್ ಮಾಜಿ ಪಿಎ ಬಂಧನ
ಚಿನ್ನ ಕಳ್ಳಸಾಗಣೆ ಆರೋಪದ ಮೇಲೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಮಾಜಿ ಆಪ್ತ ಸಹಾಯಕ(ಸಿಬ್ಬಂದಿ)ನನ್ನು ಇಲ್ಲಿನ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಟೇಕಾಫ್ ವಿಳಂಬವಾಗಲಿದೆ ಎಂದು ಘೋಷಿಸಿದ್ದಕ್ಕೆ ಇಂಡಿಗೋ ಪೈಲಟ್ ಮೇಲೆ ಹಲ್ಲೆ ನಡೆಸಿದ ಪ್ರಯಾಣಿಕ
ದೆಹಲಿ ವಿಮಾನ ನಿಲ್ದಾಣದಲ್ಲಿ ಟೇಕಾಫ್ ವಿಳಂಬವಾಗುವ ಬಗ್ಗೆ ಘೋಷಣೆ ಮಾಡುತ್ತಿದ್ದಾಗ ಇಂಡಿಗೋ ಪೈಲಟ್‌ಗೆ ಪ್ರಯಾಣಿಕರೊಬ್ಬರು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ದೆಹಲಿಯಲ್ಲಿ ದಟ್ಟ ಮಂಜು: 5 ವಿಮಾನಗಳ ಮಾರ್ಗ ಬದಲಾವಣೆ, 30 ವಿಮಾನಗಳ ಹಾರಾಟ ವಿಳಂಬ
ದಟ್ಟ ಮಂಜು ಕವಿದ ಕಾರಣ ಇಂದು ಮಂಗಳವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ಸಂಚಾರ ಪಥವನ್ನು ಬದಲಿಸಲಾಗಿದ್ದು, ಸುಮಾರು 30 ವಿಮಾನಗಳ ಹಾರಾಟ ವಿಳಂಬವಾಗಿವೆ.

ದೆಹಲಿ ವಿಮಾನ ನಿಲ್ದಾಣ: ಪ್ರತಿಕೂಲ ಹವಾಮಾನದಿಂದ 18 ವಿಮಾನಗಳ ಮಾರ್ಗ ಬದಲಾವಣೆ
ಶನಿವಾರ ಬೆಳಗ್ಗೆ ಹವಾಮಾನ ವೈಪರೀತ್ಯದಿಂದಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ಸುಮಾರು 18 ವಿಮಾನಗಳನ್ನು ಸಂಚಾರ ಮಾರ್ಗ ಬದಲಿಸಲಾಗಿದೆ.

ಆಪರೇಷನ್ ಅಜಯ್: ಯುದ್ಧ ಪೀಡಿತ ಇಸ್ರೇಲ್ ನಿಂದ ನವದೆಹಲಿಗೆ ಬಂದಿಳಿದ 212 ಭಾರತೀಯರಿದ್ದ ಮೊದಲ ವಿಮಾನ
ಇಸ್ರೇಲ್-ಹಮಾಸ್ ಯುದ್ಧದ ಹಿನ್ನೆಲೆಯಲ್ಲಿ ಇಸ್ರೇಲ್‌ನಿಂದ 212 ಭಾರತೀಯರಿದ್ದ ಮೊದಲ ವಿಮಾನ ಶುಕ್ರವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಯಶಸ್ವಿಯಾಗಿ ಬಂದಿಳಿಯಿತು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್ ವಿಮಾನದಲ್ಲಿ ಹಠಾತ್ ಬೆಂಕಿ, ವಿಡಿಯೋ!
ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಜಿನ್ ನಿರ್ವಹಣೆ ಕಾರ್ಯದ ವೇಳೆ ಸ್ಪೈಸ್ ಜೆಟ್ ವಿಮಾನವೊಂದು ಬೆಂಕಿಗೆ ಆಹುತಿಯಾಗಿದೆ. ಈ ಘಟನೆಯ ಕುರಿತು, ವಿಮಾನ ಮತ್ತು ನಿರ್ವಹಣಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಕಂಪನಿ ಹೇಳಿದೆ.

ದೆಹಲಿ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ; 20 ವರ್ಷದ ಯುವಕನ ಬಂಧನ
ಇಲ್ಲಿನ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಹಾಕಿದ ಆರೋಪದ ಮೇಲೆ ಉತ್ತರ ಪ್ರದೇಶದ 20 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

