Delhi Court

ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್
2016ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಕೋರ್ಟ್ ಶನಿವಾರ ವಜಾಗೊಳಿಸಿದೆ.

ಐಎನ್ಎಕ್ಸ್ ಮೀಡಿಯಾ ಹಗರಣ: ತಿಹಾರ್ ಜೈಲಿನಲ್ಲಿ ಚಿದಂಬರಂ ವಿಚಾರಣೆಗೆ ದೆಹಲಿ ಕೋರ್ಟ್ ಅಸ್ತು
ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಮಾಜಿ ವಿತ್ತ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರನ್ನು ತಿಹಾರ್ ಜೈಲಿನಲ್ಲಿಯೇ ವಿಚಾರಣೆಗೆ ಒಳಪಡಿಸಲು ದೆಹಲಿ ಕೋರ್ಟ್ ಗುರುವಾರ ಜಾರಿ ನಿರ್ದೇಶನಾಲಯ(ಇಡಿ)ಕ್ಕೆ ಅನುಮತಿ ನೀಡಿದೆ.

ಐಎನ್ಎಕ್ಸ್ ಮೀಡಿಯಾ ಹಗರಣ: ಚಿದಂಬರಂ ನ್ಯಾಯಾಂಗ ಬಂಧನ ಅವಧಿ ನ. 27ರ ವರೆಗೆ ವಿಸ್ತರಣೆ
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಬಂಧಿತರಾಗಿರುವ ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯ ನವೆಂಬರ್ 27ರ ವರೆಗೆ ವಿಸ್ತರಿಸಿದೆ.

ಡಿಕೆಶಿ ತಾಯಿ, ಪತ್ನಿ ವಿಚಾರಣೆ ಬೆಂಗಳೂರಿನಲ್ಲಿ ನಡೆಸುವಂತೆ ಕೋರಿದ ಅರ್ಜಿ ನವೆಂಬರ್ 4ಕ್ಕೆ ಮುಂದೂಡಿಕೆ
ಅಕ್ರಮ ಹಣ ವರ್ಗಾವಣೆಯ ಆರೋಪ ಹೊತ್ತಿರುವ ಹಿರಿಯ ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಅವರ ತಾಯಿ ಹಾಗೂ ಪತ್ನಿಯ ಅರ್ಜಿ ವಿಚಾರಣೆಯನ್ನು ಬೆಂಗಳೂರಿನಲ್ಲಿ ನಡೆಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ನವೆಂಬರ್ 4ಕ್ಕೆ ಮುಂದೂಡಿದೆ.

ಐಎನ್‌ಎಕ್ಸ್ ಮೀಡಿಯಾ ಹಗರಣ: ಚಿದಂಬರಂ ನ್ಯಾಯಾಂಗ ಬಂಧನ ಅವಧಿ ನವೆಂಬರ್ 13ರ ವರೆಗೆ ವಿಸ್ತರಣೆ
ಐಎನ್ಎಕ್ಸ್ ಮೀಡಿಯಾ ಹಗರಣ ಸಂಬಂಧ ಬಂಧನಕ್ಕೊಳಗಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ನವೆಂಬರ್ 13ರ ವರೆಗೆ ವಿಸ್ತರಿಸಿ ದೆಹಲಿ ಕೋರ್ಟ್ ಬುಧವಾರ ಆದೇಶಿಸಿದೆ.

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಗೆ ಷರತ್ತುಬದ್ಧ ಜಾಮೀನು
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಮನೆ ಅತಿಕ್ರಮಣ ಪ್ರಕರಣ: ದೆಹಲಿ ಸ್ಪೀಕರ್‌ಗೆ 6 ತಿಂಗಳ ಜೈಲುಶಿಕ್ಷೆ
2015ರ ಪ್ರಕರಣವೊಂದಕ್ಕೆ ಸಂಬಂಧಿಸಿ ದೆಹಲಿ ವಿಧಾನಸಭೆ ಸಭಾಧ್ಯಕ್ಷ (ಸ್ಪೀಕರ್) ರಾಮ್ ನಿವಾಸ್ ಗೋಯೆಲ್ ಅವರಿಗೆ ದೆಹಲಿ ನ್ಯಾಯಾಲಯ ಆರು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪಿತ್ತಿದೆ.

ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಜಾ, ಟ್ರಬಲ್ ಶೂಟರ್ ಗೆ ತಿಹಾರ್ ಜೈಲೇ ಗತಿ
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರಿಗೆ ಜಾಮೀನು ನೀಡಲು ದೆಹಲಿ ವಿಶೇಷ ಕೋರ್ಟ್ ಬುಧವಾರ ನಿರಾಕರಿಸಿದೆ.

ಡಿಕೆ ಶಿವಕುಮಾರ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ದೆಹಲಿ ಕೋರ್ಟ್, ಸೆ.25ರ ವರೆಗೆ ಜೈಲೇ ಗತಿ
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿಯ ತೀರ್ಪನ್ನು ದೆಹಲಿ ವಿಶೇಷ ಕೋರ್ಟ್ ಸೆಪ್ಟೆಂಬರ್ 25ಕ್ಕೆ ಕಾಯ್ದಿರಿಸಿದೆ.

