Delhi Excise policy scam

ದೆಹಲಿ ಸಿಎಂ ಕೇಜ್ರಿವಾಲ್ ಜೈಲು ಸೇರಿದ್ದೇಕೆ? ಏನಿದು ದೆಹಲಿ ಅಬಕಾರಿ ನೀತಿ ಹಗರಣ?
ಮಹತ್ವದ ಬೆಳವಣಿಗೆಯೊಂದರಲ್ಲಿ ದೆಹಲಿಯ ಮದ್ಯದಂಗಡಿ ಲೈಸನ್ಸ್ ಹಂಚಿಕೆ ಪ್ರಕರಣ ಸಂಬಂಧ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ. ಇದರೊಂದಿಗೆ ಇದೇ ಪ್ರಕರಣದಲ್ಲಿ ದೆಹಲಿ ಸರ್ಕಾರದಲ್ಲಿ ಸಚಿವರಾಗಿದ್ದ ಸತ್ಯೇಂದ್ರ ಜೈನ್...

ದೆಹಲಿ ಅಬಕಾರಿ ನೀತಿ ಹಗರಣ: 7ನೇ ಬಾರಿಗೆ ಇ.ಡಿ ವಿಚಾರಣೆಯಿಂದ ತಪ್ಪಿಸಿಕೊಂಡ ಅರವಿಂದ ಕೇಜ್ರಿವಾಲ್
ದೆಹಲಿ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಜಾರಿ ನಿರ್ದೇಶನಾಲಯದ (ಇ.ಡಿ) ಮುಂದೆ ವಿಚಾರಣೆಗೆ ಹಾಜರಾಗುವುದಿಲ್ಲ ಮತ್ತು ಸಂಸ್ಥೆಯು ಪದೇ ಪದೆ ಸಮನ್ಸ್ ನೀಡುವ ಬದಲು ನ್ಯಾಯಾಲಯದ ಆದೇಶಕ್ಕಾಗಿ ಕಾಯಬೇಕು ಎಂದು ಎಎಪಿ ಹೇಳಿದೆ.

ದೆಹಲಿ ಅಬಕಾರಿ ನೀತಿ ಹಗರಣ: ಸಂಜಯ್ ಸಿಂಗ್ ನ್ಯಾಯಾಂಗ ಬಂಧನ ಜ. 10ರವರೆಗೆ ವಿಸ್ತರಣೆ
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಎಎಪಿ ಹಿರಿಯ ನಾಯಕ ಸಂಜಯ್ ಸಿಂಗ್ ಅವರ ನ್ಯಾಯಾಂಗ ಬಂಧನವನ್ನು ಜನವರಿ 10ರವರೆಗೆ ದೆಹಲಿ ನ್ಯಾಯಾಲಯ ಗುರುವಾರ ವಿಸ್ತರಿಸಿದೆ.

ದೆಹಲಿ ಅಬಕಾರಿ ನೀತಿ ಹಗರಣ: ಎಎಪಿ ನಾಯಕ ಮನೀಶ್ ಸಿಸೋಡಿಯಾಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್
ರಾಷ್ಟ್ರ ರಾಜಧಾನಿಯಲ್ಲಿ ಈಗ ರದ್ದುಗೊಂಡಿರುವ ಅಬಕಾರಿ ನೀತಿ ಹಗರಣದ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ನಾಯಕ ಮತ್ತು ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

ಅಬಕಾರಿ ನೀತಿ ಹಗರಣ: ಸಿಬಿಐ, ಇ.ಡಿ ಪ್ರಕರಣಗಳಲ್ಲಿ ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆಗೆ 'ಸುಪ್ರೀಂ' ಒಪ್ಪಿಗೆ
ಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಮತ್ತು ಅದರಿಂದ ಉಂಟಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಜುಲೈ 14 ರಂದು ಆಲಿಸಲು ಸುಪ್ರೀಂ ಕೋರ್ಟ್ ಸೋಮವಾರ ಸಮ್ಮತಿಸಿದೆ.

ದೆಹಲಿ ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್
ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.

ಅನಾರೋಗ್ಯ ಪೀಡಿತ ಪತ್ನಿಯನ್ನು ಭೇಟಿ ಮಾಡಲು ತಿಹಾರ್ ಜೈಲಿನಿಂದ ಮನೆಗೆ ಬಂದ ಮನೀಶ್ ಸಿಸೋಡಿಯಾ!
ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಶನಿವಾರ ತಿಹಾರ್ ಜೈಲಿನಿಂದ ಅನಾರೋಗ್ಯದಿಂದ ಬಳಲುತ್ತಿರುವ ಪತ್ನಿಯನ್ನು ಭೇಟಿ ಮಾಡಲು ತಮ್ಮ ನಿವಾಸಕ್ಕೆ ಆಗಮಿಸಿದರು.

ದೆಹಲಿ ಅಬಕಾರಿ ಹಗರಣ: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ತಿರಸ್ಕೃತ
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಪ್ರಕರಣದಲ್ಲಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ನಿರಾಕರಿಸಿದೆ.

ಜೂನ್ 1ರವರೆಗೆ ನ್ಯಾಯಾಂಗ ಬಂಧನ: ಮೋದಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ, ದುರಹಂಕಾರಿ- ಮನೀಶ್ ಸಿಸೋಡಿಯಾ
ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮಂಗಳವಾರ ಜೂನ್ 1ರವರೆಗೆ ವಿಸ್ತರಿಸಿದೆ.

