Delhi High Court

'ಕೈದಿಗಳಿಗೂ ಸಾಂವಿಧಾನಿಕ ಹಕ್ಕುಗಳಿವೆ': ತಿಹಾರ್ ಜೈಲಿನ ಅವ್ಯವಸ್ಥೆ ಬಗ್ಗೆ ಹೈಕೋರ್ಟ್ ತರಾಟೆ
ತಿಹಾರ್ ಜೈಲಿನಲ್ಲಿ ಕುಡಿಯುವ ನೀರು, ನೈರ್ಮಲ್ಯ ಮತ್ತು ಜೈಲು ಸಂಕೀರ್ಣದಲ್ಲಿನ ವಾಶ್‌ರೂಮ್‌ಗಳ ನಿರ್ವಹಣೆ ಸೇರಿದಂತೆ ಹಲವು ಅವ್ಯವಸ್ಥೆಗಳನ್ನು "ಸೂಕ್ಷ್ಮವಾಗಿ" ಪರಿಶೀಲಿಸಲು ನಾಲ್ಕು ಸದಸ್ಯರ ಸತ್ಯಶೋಧನಾ ಸಮಿತಿ ರಚಿಸಿದೆ.

ಅಪ್ರಾಪ್ತ ಪತ್ನಿಯೊಂದಿಗಿನ ದೈಹಿಕ ಸಂಬಂಧ ಅತ್ಯಾಚಾರವಲ್ಲ: ದೆಹಲಿ ಹೈಕೋರ್ಟ್
ತನ್ನ 15 ವರ್ಷದ ಪತ್ನಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ವ್ಯಕ್ತಿಯೊಬ್ಬನನ್ನು ಖುಲಾಸೆಗೊಳಿಸಿದ ವಿರುದ್ಧ ರಾಜ್ಯ ಸಲ್ಲಿಸಿದ್ದ ಮೇಲ್ಮನವಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದ್ದು, ಆಕೆಯೊಂದಿಗಿನ ದೈಹಿಕ ಸಂಬಂಧವನ್ನು ಅತ್ಯಾಚಾರ ಎಂದು ಕರೆಯಲಾಗುವುದಿಲ್ಲ ಎಂದು ಹೇಳಿದೆ.

ವಿಪಕ್ಷ ಒಕ್ಕೂಟಕ್ಕೆ 'INDIA' ಹೆಸರು ಬಳಕೆ: 26 ರಾಜಕೀಯ ಪಕ್ಷಗಳು, ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ
ವಿರೋಧ ಪಕ್ಷಗಳು ತಮ್ಮ ಒಕ್ಕೂಟಕ್ಕೆ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟ (INDIA) ಎಂದು ಹೆಸರಿಟ್ಟಿರುವುದಕ್ಕೆ ಆಕ್ಷೇಪಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ 26 ರಾಜಕೀಯ ಪಕ್ಷಗಳು ಮತ್ತು ಚುನಾವಣಾ ಆಯೋಗಕ್ಕೆ ದೆಹಲಿ ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.

ದೆಹಲಿ ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್
ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.

ಸಿಸೋಡಿಯಾಗಿಲ್ಲ ಜಾಮೀನು, ಆದರೆ ಅನಾರೋಗ್ಯ ಪೀಡಿತ ಪತ್ನಿ ಭೇಟಿಗೆ ಹೈಕೋರ್ಟ್ ಅಸ್ತು
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ಎಎಪಿ ನಾಯಕ, ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಮಧ್ಯಂತರ ಜಾಮೀನು ನೀಡಲು ದೆಹಲಿ ಹೈಕೋರ್ಟ್ ಸೋಮವಾರ ನಿರಾಕರಿಸಿದೆ.

ಅನಾರೋಗ್ಯ ಪೀಡಿತ ಪತ್ನಿಯನ್ನು ಭೇಟಿ ಮಾಡಲು ತಿಹಾರ್ ಜೈಲಿನಿಂದ ಮನೆಗೆ ಬಂದ ಮನೀಶ್ ಸಿಸೋಡಿಯಾ!
ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಶನಿವಾರ ತಿಹಾರ್ ಜೈಲಿನಿಂದ ಅನಾರೋಗ್ಯದಿಂದ ಬಳಲುತ್ತಿರುವ ಪತ್ನಿಯನ್ನು ಭೇಟಿ ಮಾಡಲು ತಮ್ಮ ನಿವಾಸಕ್ಕೆ ಆಗಮಿಸಿದರು.

ಪ್ರಣಯ್ ರಾಯ್, ರಾಧಿಕಾ ರಾಯ್ ವಿದೇಶ ಪ್ರಯಾಣಕ್ಕೆ ದೆಹಲಿ ಹೈಕೋರ್ಟ್ ಅನುಮತಿ
ಎನ್‌ಡಿಟಿವಿ ಸಂಸ್ಥಾಪಕರಾದ ಪ್ರಣಯ್ ರಾಯ್ ಮತ್ತು ಅವರ ಪತ್ನಿ ರಾಧಿಕಾ ರಾಯ್ ಅವರಿಗೆ ವ್ಯಾಪಾರ ಉದ್ದೇಶ ಮತ್ತು ವೈಯಕ್ತಿಕ ಕಾರಣಗಳಿಗಾಗಿ ಮೂರು ವಾರಗಳ ಕಾಲ ವಿದೇಶ ಪ್ರವಾಸಕ್ಕೆ ತೆರಳಲು ದೆಹಲಿ ಹೈಕೋರ್ಟ್ ಮಂಗಳವಾರ...

ಮೋದಿ ಕುರಿತು ಬಿಬಿಸಿ ಸಾಕ್ಷ್ಯಚಿತ್ರ, ಮಾನನಷ್ಟ ಪ್ರಕರಣದಲ್ಲಿ ಬಿಬಿಸಿಗೆ ದೆಹಲಿ ಕೋರ್ಟ್ ಸಮನ್ಸ್ ಜಾರಿ
ಪ್ರಧಾನಿ ನರೇಂದ್ರ ಮೋದಿ ಅವರ ಕುರಿತ ಸಾಕ್ಷ್ಯಚಿತ್ರ ವಿವಾದ ಸಂಬಂಧ ದಾಖಲಾಗಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಸಿ ಸಂಸ್ಥೆಗೆ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಪತ್ನಿಗೆ ಅನಾರೋಗ್ಯ; ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೊರೆ ಹೋದ ಮನೀಶ್ ಸಿಸೋಡಿಯಾ
ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಬುಧವಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

