Delhi High Court

ವಸತಿ ಪ್ರದೇಶಗಳಲ್ಲಿ ಧರಣಿ ತಪ್ಪು ಸಂದೇಶ ನೀಡುತ್ತದೆ: ಕೇಜ್ರಿವಾಲ್ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಎಚ್ಚರಿಕೆ
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಹೊರಗೆ ನಡೆಯುತ್ತಿರುವ ಪ್ರತಿಭಟನೆಯ ಬಗ್ಗೆ ದೆಹಲಿ ಹೈಕೋರ್ಟ್ ಗುರುವಾರ ಕಳವಳ ವ್ಯಕ್ತಪಡಿಸಿದೆ, ವಸತಿ ಪ್ರದೇಶದಲ್ಲಿ ಇಂತಹ ಧರಣಿ, ಪ್ರತಿಭಟನೆಗಳಿಗೆ ಅನುಮತಿ ನೀಡುವುದು ತಪ್ಪು ಸಂದೇಶವನ್ನು ರವಾನಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಭದ್ರತೆಯ ಕಾರಣಗಳಿಂದಾಗಿ ಪ್ರಧಾನಿಗಳ ವಿಮಾನ ಪ್ರಯಾಣದ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ: ವಾಯುಪಡೆ
ಪ್ರಧಾನಮಂತ್ರಿಯವರ ಭದ್ರತೆಯ ವಿಷಯವಾಗಿರುವುದರಿಂದ ಅವರ ವಿಮಾನ ಪ್ರಯಾಣದ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಭಾರತೀಯ ವಾಯುಪಡೆ ಹೈಕೋರ್ಟ್ ನಲ್ಲಿ ಹೇಳಿಕೆ ಸಲ್ಲಿಸಿದೆ.

ಡಿಕೆಶಿ ಸಂಬಂಧಿಗಳ ವಿಚಾರಣೆಗೆ ದೆಹಲಿ ಹೈಕೋರ್ಟ್ ನಿಂದ ಇ.ಡಿ. ಗೆ ಅನುಮತಿ
ಮನಿ ಲಾಂಡರಿಂಗ್ ಪ್ರಕರಣದಲ್ಲಿ ಆರೋಪಿತರಾಗಿರುವ ಕರ್ನಾಟಕ ಕಾಂಗ್ರೆಸ್ ಮುಖಂಡ ಡಿ ಕೆ ಶಿವಕುಮಾರ್ ಸಂಬಂಧಿಗಳು ಮತ್ತು ಸಹವರ್ತಿಗಳನ್ನು ಕೋವಿಡ್ -19 ಸಾಂಕ್ರಾಮಿಕ ರೋಗದ ಕಾರಣ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆ ನಡೆಸುವಂತೆ ದೆಹಲಿ ಹೈಕೋರ್ಟ್ ಶುಕ್ರವಾರ ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿದೆ.

ಭಾರತೀಯ ಸೇನೆಗೆ ಆಯ್ಕೆಯಾಗಲು ಅಭ್ಯರ್ಥಿಯ ತಂದೆಯ ಮಹತ್ವಾಕಾಂಕ್ಷೆ ಮಾನದಂಡವಲ್ಲ: ಹೈಕೋರ್ಟ್
ಭಾರತೀಯ ಸೇನೆಗೆ ಆಯ್ಕೆಯಾಗಲು ಅಭ್ಯರ್ಥಿಯ ತಂದೆಯ ಮಹತ್ವಾಕಾಂಕ್ಷೆ ಮಾನದಂಡವಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

ರಿಯಾ ಚಕ್ರವರ್ತಿ ಡ್ರಗ್ ಕೇಸು: ಮಾಧ್ಯಮ ವರದಿ ತಡೆಗೆ ನಟಿ ರಾಕುಲ್ ಮನವಿ, ಕೇಂದ್ರದ ನಿಲುವು ಕೇಳಿದ ದೆಹಲಿ ಹೈಕೋರ್ಟ್
ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ರಿಯಾ ಚಕ್ರವರ್ತಿ ಡ್ರಗ್ ಕೇಸಿನಲ್ಲಿ ತಮ್ಮ ಹೆಸರನ್ನು ಮಾಧ್ಯಮಗಳು ಥಳಕು ಹಾಕುತ್ತಿವೆ ಎಂದು ಬಾಲಿವುಡ್ ನಟಿ ರಾಕುಲ್ ಪ್ರೀತ್ ಸಿಂಗ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ವರದಿಗಳು ಸುಳ್ಳಾಗಿದ್ದು ಇದಕ್ಕೆ ತಡೆಯೊಡ್ಡಬೇಕೆಂದು ದೆಹಲಿ ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ. ಇನ್ನು ನಟಿ ಮಾಡಿಕೊಂಡಿರುವ ಮನವಿ ಬಗ್ಗೆ ದೆಹಲ

2ಜಿ ಸ್ಪೆಕ್ಟ್ರಂ ಹಗರಣ: ಮಾಜಿ ಸಚಿವ ಎ ರಾಜಾ, ಕನ್ನಿಮೊಳಿಗೆ ನೋಟಿಸ್ ಜಾರಿ
2ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಂಬಂಧಿಸಿದ 19 ಆರೋಪಿಗಳನ್ನು ಖುಲಾಸೆಗೊಳಿಸಿದ್ದ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸಲ್ಲಿಸಲಾದ ಮನವಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಪ್ರಮುಖ ಆರೋಪಿ, ಕೇಂದ್ರದ ಮಾಜಿ ಸಚಿವ ಎ ರಾಜಾ ಸೇರಿದಂತೆ ಹಲವರಿಗೆ ನೋಟಿಸ್ ಜಾರಿ ಮಾಡಿದೆ.

ಸುನಂದಾ ಪುಷ್ಕರ್ ಪ್ರಕರಣ: ಸಂಯಮದಿಂದ ವರ್ತಿಸುವಂತೆ ಅರ್ನಾಬ್ ಗೆ ದೆಹಲಿ ಹೈಕೋರ್ಟ್ ಸಲಹೆ
ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಸಮಾನಾಂತರ ವಿಚಾರಣೆ ಹಾಗೂ ತನಿಖೆ ನಡೆಸಿದ್ದಕ್ಕಾಗ ಅರ್ನಾಬ್ ಗೋಸ್ವಾಮಿಯನ್ನು ದೆಹಲಿ ಹೈಕೋರ್ಟ್ ಪ್ರಶ್ನಿಸಿದೆ. ಅಲ್ಲದೆ ಈ ವಿಷಯವನ್ನು ಚರ್ಚಿಸುವ ವೇಳೆ ವಾಕ್ಚಾತುರ್ಯವನ್ನು ಬಳಸದೆ ಸಂಯಮವನ್ನು ತೋರಿಸಿ ಎಂದು ಹೇಳಿದೆ.

'ಗುಂಜನ್ ಸಕ್ಸೇನಾ - ದಿ ಕಾರ್ಗಿಲ್ ಗರ್ಲ್' ಸ್ಟ್ರೀಮಿಂಗ್ ಗೆ ತಡೆ ನೀಡಲು ದೆಹಲಿ ಹೈಕೋರ್ಟ್ ನಕಾರ
ನೆಟ್‌ಫ್ಲಿಕ್ಸ್ ನಲ್ಲಿ ಸ್ಟ್ರೀಮಿಂಗ್ ಆಗುತ್ತಿರುವ 'ಗುಂಜನ್ ಸಕ್ಸೇನಾ - ದಿ ಕಾರ್ಗಿಲ್ ಗರ್ಲ್' ಚಿತ್ರದ ಸ್ಟ್ರೀಮಿಂಗ್ ಗೆ ತಡೆ ನಿಡಲು ದೆಹಲಿ ಹೈಕೋರ್ಟ್ ಬುಧವಾರ ನಿರಾಕರಿಸಿದೆ, ಚಿತ್ರದಲ್ಲಿ ಭಾರತೀಯ ವಾಯುಪಡೆ (ಐಎಎಫ್)ಯನ್ನು ಕೀಳಾಗಿ ತೋರಿಸಿಲಾಗಿದೆ ಎಂಬ ಕೇಂದ್ರದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ಪಿಎಂ ಕೇರ್ಸ್ ಕುರಿತಾದ ಆರ್‌ಟಿಐ ಅರ್ಜಿ ಸಮರ್ಥನೀಯವಲ್ಲ: ಪಿಎಂಒ
ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಪಿಎಂ ಕೇರ್ಸ್ ನಿಧಿಯನ್ನು 'ಸಾರ್ವಜನಿಕ ಪ್ರಾಧಿಕಾರ' ಎಂದು ಘೋಷಿಸಲು ಕೋರಿ ಸಲ್ಲಿಸಿದ್ದ ಮನವಿಯನ್ನು ಕುರಿತು ಪ್ರಧಾನಿ ಕಚೇರಿ (ಪಿಎಂಒ) ಬುಧವಾರ ದೆಹಲಿ ಹೈಕೋರ್ಟ್‌ನಲ್ಲಿ ಆಕ್ಷೇಪ ವ್ಯಕ್ತಪಡಿಸಿದೆ.

