Delhi Police

'ದೆಹಲಿ ಚಲೋ' ರೈತರ ಪ್ರತಿಭಟನೆ: ಮಾರ್ಚ್ 12ರವರೆಗೆ ನಿಷೇಧಾಜ್ಞೆ, ವಾಹನ ತಡೆಯಲು ಕಾಂಕ್ರಿಟ್ ತಡೆಗೋಡೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ರಾಷ್ಟ್ರರಾಜಧಾನಿಯಲ್ಲಿ ನಾಳೆ ಅಂದರೆ ಫೆಬ್ರುವರಿ 13ರಂದು ನಡೆಸಲು ಉದ್ದೇಶಿಸಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜಧಾನಿಯ ದೆಹಲಿಯ ಗಡಿಯಲ್ಲಿ ಪೊಲೀಸ್ ಬಿಗಿ ಭದ್ರತೆ ನಿಯೋಜಿಸಲಾಗಿದೆ.

ಎಎಪಿ ಶಾಸಕರ ಖರೀದಿ ಆರೋಪ: ದೆಹಲಿ ಪೊಲೀಸರಿಂದ ಸಚಿವೆ ಅತಿಶಿಗೆ ನೋಟಿಸ್ ಜಾರಿ
ಆಮ್ ಆದ್ಮಿ ಪಕ್ಷದ ಶಾಸಕರನ್ನು ಖರೀದಿಸಲು ಬಿಜೆಪಿ ಯತ್ನಿಸುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ತಂಡ ಭಾನುವಾರ ದೆಹಲಿ ಹಣಕಾಸು ಸಚಿವ ಅತಿಶಿ ಅವರ ನಿವಾಸಕ್ಕೆ ಭೇಟಿ ನೀಡಿ ಅವರಿಗೆ ನೋಟಿಸ್...

ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ವಿರುದ್ಧ ಆರೋಪ ದಾಖಲಿಸುವಂತೆ ಕೋರ್ಟ್ ಗೆ ದೆಹಲಿ ಪೊಲೀಸರ ಒತ್ತಾಯ
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಮತ್ತು ಮಾಜಿ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಆರೋಪ ಹೊರಿಸುವಂತೆ ದೆಹಲಿ ಪೊಲೀಸರು ಶನಿವಾರ ಇಲ್ಲಿನ...

ಸಂಸತ್ ಭದ್ರತಾ ಲೋಪ: ಪಾಲಿಗ್ರಾಫ್ ಪರೀಕ್ಷೆಗೆ ಒಪ್ಪಿದ ಐವರು ಆರೋಪಿಗಳು, ಒಬ್ಬ ನಕಾರ
ಸಂಸತ್ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರು ಆರೋಪಿಗಳ ಪೈಕಿ ಐವರು ಶುಕ್ರವಾರ ನ್ಯಾಯಾಲಯದ ಮುಂದೆ ತಮ್ಮನ್ನು ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಿಸಲು ಒಪ್ಪಿಗೆ ನೀಡಿದ್ದಾರೆ.

ಸಂಸತ್ತಿನಲ್ಲಿ ಭದ್ರತಾ ಲೋಪ: ಸುಳ್ಳು ಪತ್ತೆ ಪರೀಕ್ಷೆಗೆ ಅನುಮತಿ ಕೋರಿ ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಮೊರೆ
ಸಂಸತ್ತಿನ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಎಲ್ಲಾ ಆರು ಮಂದಿಯ ಪಾಲಿಗ್ರಾಫ್ ಪರೀಕ್ಷೆಯನ್ನು (ಸುಳ್ಳು ಪತ್ತೆ ಪರೀಕ್ಷೆ) ನಡೆಸಲು ಅನುಮತಿ ಕೋರಿ ದೆಹಲಿ ಪೊಲೀಸರು ಗುರುವಾರ ಇಲ್ಲಿನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಸಂಸತ್ ಭದ್ರತಾ ಲೋಪ: ಮನೋರಂಜನ್ ಡೈರಿಯಲ್ಲಿ ಹೆಸರು, ಬಾಗಲಕೋಟೆಯ ಸಾಯಿಕೃಷ್ಣ ದೆಹಲಿ ಪೊಲೀಸ್ ವಶಕ್ಕೆ!
ಸಂಸತ್ ಭದ್ರತಾ ಲೋಪ ಪ್ರಕರಣದ ತನಿಖೆ ತೀವ್ರಗೊಳಿಸಿರುವ ದೆಹಲಿ ಪೊಲೀಸರು ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ಮೈಸೂರು ಮೂಲದ ಮನೋರಂಜನ್ ಸಹಪಾಠಿಯೋರ್ವನನ್ನು ವಶಕ್ಕೆ ಪಡೆದಿದ್ದಾರೆ.

ಸಂಸತ್ ಭದ್ರತಾ ಲೋಪ: ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ದೆಹಲಿ ಪೊಲೀಸರು!
ಡಿ.13ರಂದು ಇಬ್ಬರು ಯುವಕರು ಲೋಕಸಭೆಯ ಪ್ರೇಕ್ಷಕರ ಗ್ಯಾಲರಿಯಿಂದ ಜಿಗಿದು ಹೊಗೆ ಬಾಂಬ್ ಸಿಡಿಸಿ ಸಂಸತ್ತಿನಲ್ಲಿ ಕೋಲಾಹಲ ಸೃಷ್ಟಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೇರಿದಂತೆ ಐವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು.

ನಟಿ ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೋ: ನಾಲ್ವರು ಶಂಕಿತರನ್ನು ಪತ್ತೆಮಾಡಿದ ದೆಹಲಿ ಪೊಲೀಸರು
ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿದ ನಾಲ್ವರು ಶಂಕಿತರನ್ನು ಪತ್ತೆ ಮಾಡಲಾಗಿದೆ ಮತ್ತು ಘಟನೆಯ ಮುಖ್ಯ ಸಂಚುಕೋರನನ್ನು ಹಿಡಿಯಲು ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಸಂಸತ್ ಭದ್ರತಾ ಲೋಪ: ದೆಹಲಿ ಪೊಲೀಸರಿಂದ ಮನೋರಂಜನ್ ಕುಟುಂಬದ ವಿಚಾರಣೆ
ಸಂಸತ್ ಭದ್ರತಾ ಲೋಪ ಪ್ರಕರಣದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮತ್ತು ಗುಪ್ತಚರ ದಳದ ನಾಲ್ವರು ಅಧಿಕಾರಿಗಳ ತಂಡ ಸೋಮವಾರ ಮೈಸೂರಿನ ಮನೋರಂಜನ್ ಅವರ ಮನೆಯಲ್ಲಿ ಸುಮಾರು ಏಳು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದೆ.

