Delhi Police

ರಾಹುಲ್ ಮನೆ ಬಾಗಿಲಿಗೆ ದೆಹಲಿ ಪೊಲೀಸರು: 'ಕೀಳುಮಟ್ಟದ ನಡವಳಿಕೆ' ಎಂದ ಕಾಂಗ್ರೆಸ್, ವಿವರ ನೀಡಲು ಸಮಯಾವಕಾಶ ಕೇಳಿದ ಗಾಂಧಿ!
ರಾಹುಲ್ ಗಾಂಧಿ ವಿರುದ್ಧ ದೆಹಲಿ ಪೊಲೀಸರ ಕ್ರಮವನ್ನು ಕಾಂಗ್ರೆಸ್ ಭಾನುವಾರ ಖಂಡಿಸಿದೆ ಮತ್ತು ಇದು ರಾಜಕೀಯ ಸೇಡು ಮತ್ತು ಕಿರುಕುಳದ ಕೆಟ್ಟ ಪ್ರಕರಣ ಎಂದು ಕರೆದಿದೆ. ರಾಜಕೀಯ ವಿರೋಧಿಗಳ ವಿರುದ್ಧ ಇಂತಹ ಪ್ರಕರಣಗಳನ್ನು ದಾಖಲಿಸುವ ಮೂಲಕ ಕೇಂದ್ರ ಸರ್ಕಾರ ತಪ್ಪು ನಿದರ್ಶನವನ್ನು ಸ್ಥಾಪಿಸುತ್ತಿದೆ ಎಂದು ಪ್ರತಿಪಾದಿಸಿದೆ.

ಮೆಕ್ಸಿಕೋದಲ್ಲಿ ದೆಹಲಿ ಪೊಲೀಸ್ ಕಾರ್ಯಾಚರಣೆ: 'ಲಾರೆನ್ಸ್ ಬಿಷ್ಣೋಯ್' ಗಾಂಗ್ ನ 'ಮೋಸ್ಟ್ ವಾಂಟೆಡ್ ಗ್ಯಾಂಗ್ ಸ್ಟರ್' ದೀಪಕ್ ಬಾಕ್ಸರ್ ಬಂಧನ
ದೆಹಲಿಯ 'ಮೋಸ್ಟ್ ವಾಂಟೆಂಡ್' ಗ್ಯಾಂಗ್ ಸ್ಟರ್ ದೀಪಕ್ ಬಾಕ್ಸರ್ ನನ್ನು ಮೆಕ್ಸಿಕೋದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಯುವಕನ ಪ್ರಾಣ ಉಳಿಸಿದ ಪೊಲೀಸರ ಸಮಯ ಪ್ರಜ್ಞೆ; ಫೇಸ್‌ಬುಕ್ ಲೈವ್ ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ
ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಲೈವ್ ಸ್ಟ್ರೀಮಿಂಗ್ ಮಾಡುವ ಮೂಲಕ ಆತ್ಮಹತ್ಯೆಗೆ ಯತ್ನಿಸುತ್ತಿದ್ದ 25 ವರ್ಷದ ಯುವಕನನ್ನು ಪೊಲೀಸರು ಸಮಯ ಪ್ರಜ್ಞೆ ಮೆರೆಯುವ ಮೂಲಕ ಆತನ ಜೀವ ಉಳಿಸಿರುವ ಘಟನೆ ದೆಹಲಿಯಲ್ಲಿ ವರದಿಯಾಗಿದೆ.

ರಾಹುಲ್ ಗಾಂಧಿ ಅನರ್ಹತೆ ವಿರುದ್ಧ ಕಾಂಗ್ರೆಸ್ ದೇಶದಾದ್ಯಂತ ಸತ್ಯಾಗ್ರಹ, ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು
ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಭಾನುವಾರ ಎಲ್ಲಾ ರಾಜ್ಯಗಳು ಮತ್ತು ಜಿಲ್ಲಾ ಕೇಂದ್ರಗಳಲ್ಲಿನ ಗಾಂಧಿ ಪ್ರತಿಮೆಗಳ ಮುಂದೆ ಒಗ್ಗಟ್ಟಿನಿಂದ ಒಂದು ದಿನದ ಸತ್ಯಾಗ್ರಹವನ್ನು ಆಯೋಜಿಸಲಿದೆ.

ದೆಹಲಿ ನಗರದಾದ್ಯಂತ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟರ್: 6 ಮಂದಿ ಬಂಧನ, 100 ಮಂದಿ ವಿರುದ್ಧ ಎಫ್ಐಆರ್
ರಾಜಧಾನಿ ದೆಹಲಿ ನಗರದಾದ್ಯಂತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 100 ಎಫ್ಐಆರ್ ಗಳನ್ನು ದಾಖಲಿಸಿದ್ದು 6 ಮಂದಿಯನ್ನು ಬಂಧಿಸಲಾಗಿದೆ.

'ಭ್ರಷ್ಟ' ಬಿಜೆಪಿ ಸರ್ಕಾರದ ಶೋಷಣೆಯನ್ನು ಜನ ನೋಡುತ್ತಿದ್ದಾರೆ, ಸಮಯ ಬಂದಾಗ ಉತ್ತರಿಸುತ್ತಾರೆ: ಪ್ರಿಯಾಂಕಾ ಗಾಂಧಿ
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸೋಮವಾರ ರಾಹುಲ್ ಗಾಂಧಿಗೆ ದೆಹಲಿ ಪೊಲೀಸರ ನೋಟಿಸ್ ಕುರಿತು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ದೇಶದ ಜನರು 'ಭ್ರಷ್ಟ ಬಿಜೆಪಿ ಸರ್ಕಾರದ' ಎಲ್ಲಾ ಶೋಷಣೆಗಳನ್ನು ನೋಡುತ್ತಿದ್ದಾರೆ ಮತ್ತು ಸಮಯ ಬಂದಾಗ ಉತ್ತರಿಸುತ್ತಾರೆ ಎಂದು ಹೇಳಿದರು.

ದೆಹಲಿಯಲ್ಲಿ ಆಘಾತಕಾರಿ ಘಟನೆ: ಯುವತಿಗೆ ಥಳಿಸಿ, ಕುತ್ತಿಗೆ ಹಿಡಿದು ಬಲವಂತವಾಗಿ ಕ್ಯಾಬ್‌ನಲ್ಲಿ ಕೂರಿಸಿದ ಯುವಕ, ವಿಡಿಯೋ
ದೆಹಲಿಯ ಮಂಗೋಲ್‌ಪುರಿ ಪ್ರದೇಶದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್ ಆಗುತ್ತಿದ್ದು, ಇದರಲ್ಲಿ ಯುವಕರು ಯುವತಿಗೆ ಥಳಿಸಿ ನಂತರ ಬಲವಂತವಾಗಿ ಕ್ಯಾಬ್‌ನಲ್ಲಿ ಕೂರುವಂತೆ ಮಾಡುತ್ತಿದ್ದಾರೆ.

ಲೈಂಗಿಕ ದೌರ್ಜನ್ಯ ಸಂತ್ರಸ್ತರ ವಿವರ ನೀಡಲು ಸಮಯಾವಕಾಶ ಕೇಳಿದ ರಾಹುಲ್- ದೆಹಲಿ ಪೊಲೀಸರು
ಭಾರತ್ ಜೋಡೋ ಯಾತ್ರೆ ವೇಳೆ ಮಾಡಿದ ಭಾಷಣದಲ್ಲಿ ಪ್ರಸ್ತಾಪಿಸಿದ ಲೈಂಗಿಕ ಕಿರುಕುಳ ಸಂತ್ರಸ್ತರ ಬಗ್ಗೆ ಮಾಹಿತಿ ಪಡೆಯಲು ಪೊಲೀಸರು ನೀಡಿದ ನೋಟಿಸ್‌ಗೆ ಸಂಬಂಧಿಸಿದಂತೆ ವಿಶೇಷ ಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಸಾಗರ್ ಪ್ರೀತ್ ಹೂಡಾ ಭಾನುವಾರ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರು.

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಕುರಿತು ಹೇಳಿಕೆ: ನೋಟಿಸ್ ಬಳಿಕ ರಾಹುಲ್ ಗಾಂಧಿ ನಿವಾಸಕ್ಕೆ ಪೊಲೀಸರ ಭೇಟಿ!
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ನಿವಾರಕ್ಕೆ ದೆಹಲಿ ಪೊಲೀಸರು ಭಾನುವಾರ ಭೇಟಿ ನೀಡಿದ್ದಾರೆ.

