Delhi violence

ಶಾಂತಿ ಕಾಪಾಡಿ, ಎಂಥದ್ದೇ ಸಮಯದಲ್ಲೂ ಭ್ರಾತೃತ್ವ ಮರೆಯದಿರಿ: ಪ್ರಧಾನಿ ಮೋದಿ ಮನವಿ
ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

ದೆಹಲಿ ಹಿಂಸಾಚಾರದ ಎಫೆಕ್ಟ್: ಐದು ಪೊಲೀಸ್ ಅಧಿಕಾರಿಗಳ ವರ್ಗಾವಣೆ
ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮಕ್ಕೆ ಮುಂದಾಗಿರುವ ದೆಹಲಿ ಪೊಲೀಸ್ ಆಯುಕ್ತ ಅಮೂಲ್ಯ ಪಟ್ನಾಯಕ್ ಅವರು ಐವರ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ದೆಹಲಿ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ: ಅಜಿತ್ ಧೋವಲ್
ಪೌರತ್ವ ತಿದ್ದುಪಡಿ ಕಾಯ್ದೆ ಪರ-ವಿರೋಧಿ ಬಣಗಳ ನಡುವಿನ ಸಂಘರ್ಷ ತಾರಕಕ್ಕೇರಿ ಹಿಂಸಾಚಾರ ಸಂಭವಿಸಿದ್ದ ದೆಹಲಿಯಲ್ಲಿ ಇದೀಗ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಹೇಳಿದ್ದಾರೆ.

ದೆಹಲಿ ಹಿಂಸಾಚಾರ: ಪ್ರಚೋದನಕಾರಿ ಹೇಳಿಕೆ ನೀಡಿದವರ ವಿರುದ್ಧ ಎಫ್ಐಆರ್‌ಗೆ ಹೈಕೋರ್ಟ್ ಸೂಚನೆ, 23 ಸಾವು!
ಚೋದನಾಕಾರಿ ಭಾಷಣ ಮಾಡಿ ಗಲಭೆಗೆ ಕುಮ್ಮಕ್ಕು ನೀಡಿ, ದ್ವೇಷದ ಭಾಷಣ ಮಾಡಿದವರ ವಿರುದ್ಧ ಮೊಕದ್ದಮೆ ದಾಖಲಿಸುವಂತೆ ದೆಹಲಿ ಹೈಕೋರ್ಟ್ ಪೊಲೀಸರಿಗೆ ನಿರ್ದೇಶನ ನೀಡಿದೆ.

ದೆಹಲಿ ಹಿಂಸಾಚಾರ ಯೋಜಿತ ಪಿತೂರಿ, ನೈತಿಕ ಹೊಣೆಹೊತ್ತು ಅಮಿತ್ ಶಾ ರಾಜಿನಾಮೆ ನೀಡಲಿ ಎಂದ ಸೋನಿಯಾ ಗಾಂಧಿ
ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಗಟ್ಟುವುದರಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಗೃಹಸಚಿವ ಅಮಿತ್ ಶಾ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸೋತಿದ್ದಾರೆ ಹೀಗಾಗಿ ಅವರೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಒತ್ತಾಯಿಸಿದ್ದಾರೆ.

ಪರಸ್ಪರರನ್ನು ಪ್ರೀತಿಸಬೇಕು ಮತ್ತು ಗೌರವಿಸಬೇಕು: ದೆಹಲಿ ಹಿಂಸಾಚಾರದ ಕುರಿತು ಯುವಿ, ಸೆಹ್ವಾಗ್ ವಿಷಾಧ
ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗರು ಪ್ರತಿಕ್ರಿಯಿಸಿದ್ದು, ಪರಸ್ಪರರನ್ನು ಪ್ರೀತಿಸಬೇಕು ಮತ್ತು ಗೌರವಿಸಬೇಕು. ಅಲ್ಲದೆ ಶಾಂತಿ ಕಾಪಾಡುವಂತೆ ಪ್ರತಿಭಟನಾಕಾರರಲ್ಲಿ ಎಂದು ಮನವಿ ಮಾಡಿಕೊಂಡಿದ್ದಾರೆ.

ದೆಹಲಿ ಹಿಂಸಾಚಾರ: ಸಾವಿನ ಸಂಖ್ಯೆ 22ಕ್ಕೇರಿಕೆ, ರಾಜಧಾನಿಯಲ್ಲಿ ಒಂದು ತಿಂಗಳ ಕಾಲ ನಿಷೇಧಾಜ್ಞೆ ಜಾರಿ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಮತ್ತು ಪರ ಬಣಗಳ ನಡುವಿನ ಘರ್ಷಣೆ ಮತ್ತು ಹಿಂಸಾಚಾರ ಮುಂದುವರೆಯುತ್ತಿರುವ ಹಿನ್ನಲೆಯಲ್ಲಿ ದೆಹಲಿಯಲ್ಲಿ ಮುಂದಿನ ಒಂದು ತಿಂಗಳ ಕಾಲ ನಿಷೇಧಾಜ್ಞೆ ಹೇರಲಾಗಿದೆ.

ದೆಹಲಿ: ಗುಪ್ತಚರ ಇಲಾಖೆ ಅಧಿಕಾರಿ ಶವ ಪತ್ತೆ, ಮರಣೋತ್ತರ ಪರೀಕ್ಷೆಗೆ ರವಾನೆ
ದೆಹಲಿಯಲ್ಲಿ ಸಿಎಎ ಹಿಂಸಾಚಾರ ತಾರಕಕ್ಕೇರಿರುವಂತೆಯೇ ಇತ್ತ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಯೊಬ್ಬರ ಶವ ನಿಗೂಢ ರೀತಿಯಲ್ಲಿ ಪತ್ತೆಯಾಗಿದೆ.

'ನಿಮ್ಮಲ್ಲಿ ವೃತ್ತಿಪರತೆ ಇಲ್ಲವೇ': ದೆಹಲಿ ಪೊಲೀಸರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದ ಪ್ರತಿಭಟನೆ ತೀವ್ರ ಹಿಂಸಾರೂಪಕ್ಕೆ ತಿರುಗಿ 20 ಮಂದಿ ಮೃತಪಟ್ಟಿರುವ ಘಟನೆಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ದೆಹಲಿ ಪೊಲೀಸರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಪೊಲೀಸರು ಈ ಘಟನೆಯನ್ನು ಹತ್ತಿಕ್ಕಿ ಪರಿಸ್ಥಿತಿಯನ್ನು ಶಾಂತಗೊಳಿಸುವಲ್ಲಿ ತಮ್ಮ ವೃತ್ತಿಪರತೆಯನ್ನು ತೋರಿಸಿಲ್ಲ ಎಂದು ಹೇಳಿದೆ.

